ಸರ್ಕಾರ ಒದಗಿಸಿದ ಸಬ್ಸಿಡಿಗಳ ವರ್ಗಾವಣೆಯನ್ನು ಸುಗಮಗೊಳಿಸಲು ನೇರ ಲಾಭ ವರ್ಗಾವಣೆ ಅಥವಾ DBT ಯೋಜನೆಯನ್ನು ಕೇಂದ್ರ ಸರ್ಕಾರ 2013ರಲ್ಲಿ ಪ್ರಾರಂಭಿಸಿತು. ವಿವಿಧ ಕಲ್ಯಾಣ ಯೋಜನೆಗಳಿಂದ ಸಬ್ಸಿಡಿ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಗುರಿಯನ್ನು DBT ಹೊಂದಿದೆ. ಡಿಬಿಟಿ ಪ್ರಯೋಜನಗಳನ್ನು ಪಡೆಯಲು, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಲಿಂಕ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮಧ್ಯವರ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಯಾವುದೇ ಮೂರನೇ ವ್ಯಕ್ತಿಯ ಸಂಪರ್ಕವಿಲ್ಲದೆ ಯೋಜನೆಯ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸುವಲ್ಲಿ DBT ಮಹತ್ವದ ಪಾತ್ರವನ್ನು ವಹಿಸಿದೆ, ರಾಜ್ಯ ಸರ್ಕಾರದ ಇ ಆಡಳಿತ ವಿಭಾಗ ಕರ್ನಾಟಕ ಡಿಬಿಟಿ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಾಂಚ್ ಮಾಡಿದ್ದಾರೆ. ಈ ಮೊಬೈಲ್ ಅಪ್ಲಿಕೇಶನ್ ಸಹಾಯದಿಂದ ನೀವು ಯಾವುದೇ ಬ್ಯಾಂಕಿಗೆ ಅಥವಾ ಕಚೇರಿಗೆ ಅಲೆದಾಡದೆ ಎಲ್ಲಾ ಗ್ಯಾರೆಂಟಿ ಯೋಜನೆಗಳ ಹಣ, ಬಸವ ವಸತಿ ಯೋಜನೆ ಹಣ, ಹಾಲಿನ ಪ್ರೋತ್ಸಾಹ ಧನ, ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಹಣ, ಹೀಗೆ ಸರ್ಕಾರದ ಎಲ್ಲಾ ಯೋಜನೆಗಳ ಡಿ ಬಿ ಟಿ ಹಣದ ಮಾಹಿತಿಯನ್ನು ಈ ಅಪ್ಲಿಕೇಶನ್ ನಲ್ಲಿ ನೀವು ಪಡೆಯಬಹುದು.
DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಈ ಕೆಳಗಿನ ಯೋಜನೆಗಳ ಹಣವನ್ನು ನೀವು ಈ ಆಪ್ ನಲ್ಲಿ ಚೆಕ್ ಮಾಡಬಹುದು.
ಗೃಹಲಕ್ಷ್ಮಿ ಯೋಜನೆ
ಅನ್ನಭಾಗ್ಯ ಯೋಜನೆ
ಪಿ ಎಂ ಕಿಸಾನ್ ಹಣ
Ssp ಸ್ಕಾಲರ್ಶಿಪ್ ಹಣ
ಹಾಲಿನ ಪ್ರೋತ್ಸಾಹ ಧನ
ರೈತ ಶಕ್ತಿ ಯೋಜನೆ ಹಣ
ಹಲವಾರು ಯೋಜನೆಗಳ ಹಣದ DBT ಸ್ಟೇಟಸ್ ಚೆಕ್ ಮಾಡಬಹುದು
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ