ಬರುವ ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುಮಾರು 2000ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆಯನ್ನು ರಾಜ್ಯಾದ್ಯಂತ ಕಲ್ಪಿಸಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಿಂದ ಹೊರಡುವ ಪ್ರಯಾಣಿಕರಿಗೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅನುಕೂಲ ಮಾಡಿಕೊಟ್ಟಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ದೀಪಾವಳಿಗೆ ವಿಶೇಷ ಬಸ್ ವ್ಯವಸ್ಥೆ
ಅಕ್ಟೋಬರ್ 30 ರಿಂದ ನವಂಬರ್ 1 ವರೆಗೆ ಪ್ರಯಾಣಿಕರಿಗೆ ಅನುಕೂಲವಾಗಲು ರಾಜ್ಯದ ವಿವಿಧ ಜಿಲ್ಲೆಗಳಿಗೆ ಬೆಂಗಳೂರಿನಿಂದ ವಿಶೇಷ ಬಸ್ ಗಳ ವ್ಯವಸ್ಥೆ ಕಲ್ಪಿಸಿದೆ. ನರಕ ಚತುರ್ದಶಿ, ಕನ್ನಡ ರಾಜ್ಯೋತ್ಸವ (Kannada Rajyotsava) ಹಾಗೂ 2ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30ರಿಂದ ನವೆಂಬರ್ 1ರ ವರೆಗೆ ಬೆಂಗಳೂರಿನಿಂದ (Bengaluru) ಈ ಕೆಳಕಂಡ ಸ್ಥಳಗಳಿಗೆ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನವೆಂಬರ್ 3 ಹಾಗೂ ನವೆಂಬರ್ 4ರಂದು ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಯಾವ ಯಾವ ಊರುಗಳಿಗೆ ವಿಶೇಷ ಸೌಲಭ್ಯ
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ, ಹುಬ್ಬಳ್ಳಿ ಧಾರವಾಡ ಬೆಳಗಾವಿ ವಿಜಯಪುರ ಗೋಕರ್ಣ ಶಿರಸಿ ಕಾರವಾರ ರಾಯಚೂರು ಕಲಬುರ್ಗಿ ಬಳ್ಳಾರಿ ಕೊಪ್ಪಳ, ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ ಶಿವಮೊಗ್ಗ ಹಾಸನ ಮಂಗಳೂರು ಕುಂದಾಪುರ, ಶೃಂಗೇರಿ, ಯಾದಗಿರಿ ಬೀದರ್ ವಿಜಯವಾಡ, ತಿರುಪತಿ ಹೈದರಾಬಾದ್, ಬೆಳಗಾವಿ, ಬೀದರ್, ಹೀಗೆ ಹಲವು ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು ಹುಣಸೂರು ಪಿರಿಯಾಪಟ್ಟಣ ವಿರಾಜ್ ಪೇಟೆ ಕುಶಲ್ನಗರ ಮಡಿಕೇರಿ ಮಾರ್ಗದ ಕಡೆಗೆ ವಿಶೇಷ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದ್ದು. ಸಾರ್ವಜನಿಕರಿಗೆ ಸದುಪಯೋಗಪಡಿಸಿಕೊಳ್ಳಲು ವಿನಂತಿಸಲಾಗಿದೆ.
ಹೊರ ರಾಜ್ಯಗಳಿಗೂ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು ತಮಿಳುನಾಡು ಮತ್ತು ಕೇರಳ ರಾಜ್ಯದ ಮಧುರೈ ಕುಂಬಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲಿವೆ.
ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯವನ್ನು ಸಹಿತ ಕಲ್ಪಿಸಲಾಗಿದೆ. ನಿಗಮದ ಅಧಿಕೃತ ವೆಬ್ಸೈಟ್ ಮೂಲಕ ನಿಮ್ಮ ಆಸನಗಳನ್ನು ಮುಂಗಡವಾಗಿ ಬುಕ್ ಮಾಡಬಹುದು. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ಕೋರಿದೆ.
ಮೊಬೈಲಲ್ಲಿ ಟಿಕೆಟ್ ಬುಕ್ ಮಾಡುವುದು ಹೇಗೆ.?
ಪ್ರಾಣಿಕರು ತಮ್ಮ ಮೊಬೈಲ್ ಮೂಲಕ ಆಸನಗಳನ್ನು ಬುಕ್ ಮಾಡಬಹುದು. www.ksrtc.karnataka.gov.in ನಿಗಮದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಬುಕಿಂಗ್ ಮಾಡಿಕೊಳ್ಳಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಸಂಸ್ಥೆಯು ಹೇಳಿದೆ.
ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ ಕೇರಳ, ಗೋವಾ, ಮಹಾರಾಷ್ಟ್ರ ಮತ್ತು ತಮಿಳುನಾಡು ಪುದುಚೇರಿಯಲ್ಲಿರುವ ನಿಗಮದ ಮುಂಗಡ ಟಿಕೆಟ್ ಕಾಯಿ ಧರಿಸುವ ಕೌಂಟರ್ ಗಳಿದ್ದು ನೇರವಾಗಿ ಅಲ್ಲಿಯೂ ಸಹಿತ ಟಿಕೆಟ್ ಬುಕ್ ಮಾಡಬಹುದು ಎಂದು ಹೇಳಿದೆ.
ಈ ಮಾಹಿತಿಗಳನ್ನು ಓದಿ:
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.