ಕರ್ನಾಟಕ ಹೈಕೋರ್ಟ್ ಆದೇಶ: ಧರ್ಮಸ್ಥಳ, ಧರ್ಮಾಧಿಕಾರಿಗಳು ಮತ್ತು ಕುಟುಂಬದ ವಿರುದ್ಧ ಮಾನಹಾನಿಕರ ಹೇಳಿಕೆಗಳ ನಿಷೇಧ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಮಾನಹಾನಿಕರ ವೀಡಿಯೊವನ್ನು ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಕೋರ್ಟ್ ಆದೇಶ ನೀಡಿದೆ. ಪ್ರಧಾನ ನಗರ ಸಿವಿಲ್ ಕೋರ್ಟ್ ಆದೇಶದನ್ವಯ, ಸಮೀರ್ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಮಾಡಿದ್ದ ವೀಡಿಯೊವನ್ನು ಕೋರ್ಟ್ ಆದೇಶದ ಅನ್ವಯ ಯೂಟ್ಯೂಬ್ ಡಿಲೀಟ್ ಮಾಡಿದೆ.

ಈ ಹಿಂದೆ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಪೀಠವು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಹಿಂಬಾಲಕರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶ ನೀಡಿತ್ತು.
ಯೂಟ್ಯೂಬರ್ ಸಮೀರ್ ವಿರುದ್ಧ ಪ್ರಧಾನ ನಗರ ಸಿವಿಲ್ ಕೋರ್ಟ್ನಲ್ಲಿ ಈಗಾಗಲೇ ಕಡ್ಡಾಯ ತಡೆಯಾಜ್ಞೆ ಜಾರಿಯಲ್ಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಯಾವುದೇ ಸಂಸ್ಥೆಗಳ ವಿರುದ್ಧ ಮಾನಹಾನಿಕರ ಹೇಳಿಕೆಗಳು ಅಥವಾ ಅಪಪ್ರಚಾರದ ವೀಡಿಯೊಗಳನ್ನು ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಇದರ ಜೊತೆಗೆ, ಸಮೀರ್ ವೀಡಿಯೊವನ್ನು ಇತರ ಯೂಟ್ಯೂಬ್ ಚಾನೆಲ್ಗಳು ಶೇರ್ ಮಾಡಿಕೊಂಡಿದ್ದರೆ, ಅವುಗಳನ್ನೂ ಸಹ ಡಿಲೀಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.
ಅಲ್ಲದೆ, ಯೂಟ್ಯೂಬ್, ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಿಗೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಅವರ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಅಥವಾ ಮಾನಹಾನಿಕರ ಹೇಳಿಕೆಗಳನ್ನು ಒಳಗೊಂಡ ಯಾವುದೇ ವರದಿ ಅಥವಾ ಅಂಶಗಳನ್ನು ಅಪ್ಲೋಡ್ ಮಾಡದಂತೆ ಕೋರ್ಟ್ ಸ್ಪಷ್ಟ ಆದೇಶ ನೀಡಿದೆ. ಈ ವಿಚಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಪರ ವಕೀಲ ಎಸ್. ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.
ಈ ಆದೇಶವು ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟುನಿಟ್ಟಾದ ನಿಯಂತ್ರಣವನ್ನು ಹೇರಿದೆ .

ಕೋರ್ಟ್ ಆದೇಶ ಏನು
ಕರ್ನಾಟಕ ಹೈಕೋರ್ಟ್ ಮತ್ತು ಪ್ರಧಾನ ನಗರ ಸಿವಿಲ್ ಕೋರ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು ಮತ್ತು ಅವರ ಕುಟುಂಬದ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನಿಷೇಧಿಸಿದೆ. ಯೂಟ್ಯೂಬರ್ ಸಮೀರ್ ವಿರುದ್ಧ ಕಡ್ಡಾಯ ತಡೆಯಾಜ್ಞೆ ಜಾರಿಗೆ ಬಂದಿದೆ ಮತ್ತು ಸಾಮಾಜಿಕ ಜಾಲತಾಣಗಳು ಅಪಪ್ರಚಾರದ ವೀಡಿಯೊಗಳನ್ನು ಅಪ್ಲೋಡ್ ಮಾಡದಂತೆ ಕೋರ್ಟ್ ಆದೇಶ ನೀಡಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.