ಖಾತಾ ರಿಜಿಸ್ಟರ್ ಮಾಡಿಸಿಕೊಳ್ಳುವವರಿಗೆ ಗುಡ್ ನ್ಯೂಸ್, ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ..!
ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ (Corruption) ಸಂಪೂರ್ಣ ಕಡಿವಾಣ ಹಾಕಬೇಕಿದೆ. ಇದಕ್ಕೆ ಪರಸ್ಪರ ಹೊಂದಾಣಿಕೆಯಿಂದ ಮೂರೂ ಇಲಾಖೆಗಳು ಕಾರ್ಯ ನಿರ್ವಹಿಸಿ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ನಿಯಮ ಪಾಲಿಸದ, ರೆವಿನ್ಯೂ ಬಡಾವಣೆಗಳಿಗೆ ಬ್ರೇಕ್ ಹಾಕುವ ಅತ್ಯಗತ್ಯವಿದೆ ಎಂಬ ವಿಷಯ ಸಭೆಯಲ್ಲಿ ನಿರ್ಣಯವಾಗಿದೆ. ಒಂದೇ ಸೈಟನ್ನು ಹಲವರಿಗೆ ಮಾರುವ ವಂಚನೆಗೆ ಸಂಪೂರ್ಣ ಬ್ರೇಕ್ ಹಾಕಲೇಬೇಕು ಎಂದು ಸಿ.ಎಂ ಕಡಕ್ ಸೂಚನೆ ನೀಡಿದ್ದಾರೆ. ಇದರ ಬಗ್ಗೆ ಮತ್ತಷ್ಟು ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ, ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ :
ನಕಲಿ ದಾಖಲೆಗಳ (Duplicate Documents) ಪರಿಶೀಲಿಸದೆ ಆಸ್ತಿ ನೋಂದಣಿ ಬಗ್ಗೆ ಸಿ.ಎಂ. (Chief Minister) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕೆಲವು ಅಧಿಕಾರಿಗಳೂ ಇದರ ಪರವಾಗಿದ್ದಾರೆ. ಹೀಗಾಗಿ ಸಾರ್ವಜನಿಕರು ಕಿರಿಕಿರಿ, ಭ್ರಷ್ಟಾಚಾರಕ್ಕೆ ಒಳಗಾಗಿದ್ದಾರೆ. ಇವೆಲ್ಲದಕ್ಕೂ ಕಡಿವಾಣ ಅಗತ್ಯವಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ (Registration and Stamps Department) ಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಇತರೆ ಮುಖ್ಯಾಂಶಗಳು ಹಾಗೂ ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು ಹೀಗಿವೆ :
ಬಿಬಿಎಂಪಿ (BBMP) ಯಲ್ಲಿ ಸುಮಾರು 15 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ. ಇದರಿಂದ ತೆರಿಗೆಯೂ ಕಟ್ಟದ ಕಾರಣ ಸಾವಿರಾರು ಕೋಟಿ ರೂ. ತೆರಿಗೆ ಪ್ರತೀ ವರ್ಷ ಸರ್ಕಾರಕ್ಕೆ (Government) ನಷ್ಟ ಉಂಟಾಗುತ್ತಿದೆ.
ಸ್ಥಳೀಯ ಸಂಸ್ಥೆಗಳಲ್ಲಿ ಅಂದಾಜು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇರುವುದಿಲ್ಲ,
ಗ್ರಾಮ ಪಂಚಾಯತ್ (Gram Panchayath) ಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿರುವುದಿಲ್ಲ.
ಖಾತೆಯಿಲ್ಲದೆ, ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವ ಪ್ರಕ್ರಿಯೆಗೆ (For Registration process) ಕಡಿವಾಣ ಹಾಕಬೇಕು. ಇದು ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ಸ್ಥಳೀಯ ಸಂಸ್ಥೆಗಳು ಖಾತಾ ನೀಡಿರುವ ಆಸ್ತಿಗಳನ್ನು ಮಾತ್ರ ನೋಂದಣಿ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್‌ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು.
ನೋಂದಣಿ ಪ್ರಕ್ರಿಯೆ ಇಂಟಿಗ್ರೇಷನ್ (Integration) ಆದ ಮೇಲೆ ಅಕ್ರಮಗಳ ಮೇಲೆ ಕಡಿವಾಣ ಸಾಧ್ಯವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒನ್ ಟೈಮ್ ಪರಿಹಾರ (One time Solution) ನೀಡುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
ಬಿಬಿಎಂಪಿಯ ವ್ಯಾಪ್ತಿಯಲ್ಲಿ ಖಾತಾ ನೀಡಿರುವುದನ್ನು ಡಾಟಾ ಬೇಸ್‌ನಲ್ಲಿ (Data base) ಹಾಕಬೇಕು. ಇದರಿಂದ ಖಾತೆ ಆದ ಆಸ್ತಿಗಳನ್ನು ಮಾತ್ರ ನೋಂದಣಿ ಮಾಡಬಹುದು. ಕಾಗದ ದಾಖಲೆಗಳ ಆಧಾರದಲ್ಲಿ ಯಾವುದೇ ಕಾರಣಕ್ಕೂ ನೋಂದಣಿಗೆ ಪರಿಗಣಿಸಬಾರದು.
ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಲು ಸೂಚನೆ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ (Digitise) ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್ ಮಾಡಲಾಗಿದೆ.
ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು.
ಇನ್ನು ಮುಂದೆ ಕಂದಾಯ ಜಮೀನಿನಲ್ಲಿ ಲೇಔಟ್ (Layout) ನಿರ್ಮಾಣಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಇರುವ ಅಂತಹ ಲೇಔಟ್‌ಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು.
ನಿವೇಶನಗಳಲ್ಲಿರುವ ರಸ್ತೆಗಳನ್ನು ಸಾರ್ವಜನಿಕ ರಸ್ತೆಗಳಾಗಿ ಪರಿಗಣಿಸುವ ಕುರಿತು ಕ್ರಮ ಪರಿಶೀಲಿಸಬೇಕು.
ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿದೆ.
ಈ ವರ್ಷ ಡಿಸೆಂಬರ್ ಕೊನೆಗೆ ರೂ.16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ.
ಕಂದಾಯ ಇಲಾಖೆಯಲ್ಲಿ (Revenue Department) ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು/ನಿವೇಶನಗಳ ದತ್ತಾಂಶ ಮಾಹಿತಿ ಇದ್ದು, ಸದರಿ ಮಾಹಿತಿಯನ್ನು ಆಧರಿಸಿ ಒಂದೇ ಯೋಜನೆಯಲ್ಲಿ ಸದರಿ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು.
ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ರೂ. ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ ಸುಮಾರು 96 ಲಕ್ಷ ಆಸ್ತಿಗಳಿಗೆ ಇನ್ನೂ ಈ ಖಾತಾ ಇರುವುದಿಲ್ಲ. ಗ್ರಾಮ ಪಂಚಾಯತ್ (Gram Panchayath) ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸುವ ಕುರಿತು ಕ್ರಮ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.