SSLC ಮತ್ತು ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್ ಜಾರಿ, ಸಂಪೂರ್ಣ ಮಾಹಿತಿ ಇಲ್ಲಿದೆ

10th and PUC exam rule changed

ಎಸ್‌ಎಸ್‌ಎಲ್‌ಸಿ ( SSLC ) ಮತ್ತು ದ್ವಿತೀಯ ಪಿಯುಸಿ ( Second PUC ) ವಿದ್ಯಾರ್ಥಿಗಳಿಗೆ ಇದೀಗ ಒಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಅದೇನೆಂದರೆ, ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ನಿಯಮಗಳನ್ನು ತಿದ್ದುಪಡಿ ( Rules Correction ) ಮಾಡಲಾಗಿದೆ. ಮತ್ತು ಅದರ ಬದಲಿಗೆ ವಿದ್ಯಾರ್ಥಿಸ್ನೇಹಿ ನಿಯಮಗಳನ್ನು ಜಾರಿಗೊಳಿಸಿದೆ. ಇದೊಂದು ಖುಷಿಯ ವಿಚಾರ ಎನ್ನಬಹುದು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪರೀಕ್ಷೆಗೆ ಹಾಜರಾಗುವ ವಿಷಯದಲ್ಲಿ ತಿದ್ದುಪಡಿ :

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ಇದೀಗ 3 ವಾರ್ಷಿಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕೆಂಬ ಹೊಸ ನಿಯಮವನ್ನು ( New Rules ) ತಿದ್ದುಪಡಿ ಮಾಡಿ ಜಾರಿಗೊಳಿಸಿದೆ.

ಹೊಸ ನಿಯಮದ ಪ್ರಕಾರ ( basis of new rules ) ಮೊದಲ ಪ್ರಯತ್ನದಲ್ಲಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಮೊದಲ ಪರೀಕ್ಷೆಗೆ ಹಾಜರಾಗದಿದ್ದರೂ ಎರಡು ಮತ್ತು ಮೂರನೇ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ, ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ಪರೀಕ್ಷಾ ವಿಷಯದಲ್ಲಿ ಬದಲಾವಣೆ ಮಾಡಲು ಕಾರಣ ( Cause of new rules ) :

ಪರೀಕ್ಷಾ ಮಂಡಳಿಗೆ ( Exam Center ) ವಿದ್ಯಾರ್ಥಿಗಳು ಹಾಜರಿರುವ ದತ್ತಾಂಶ ಬೇಕು ಎಂಬ ಕಾರಣದಿಂದ ಈ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ. ಇನ್ನು ಈ ಹಿಂದೆ ಅನುತ್ತೀರ್ಣರಾಗಿರುವ ಮತ್ತು ಹಿಂದಿನ ವರ್ಷಗಳಲ್ಲಿ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕೂಡ ಮೊದಲ ಪರೀಕ್ಷೆಗೆ ನೋಂದಣಿ ಅಥವಾ ಹಾಜರಾಗಬೇಕೆಂಬ ಯಾವುದೇ ನಿಯಮವಿಲ್ಲ. ಎರಡು ಅಥವಾ ಮೂರನೇ ಪರೀಕ್ಷೆಗೆ ನೇರವಾಗಿ ನೋಂದಣಿ ಮಾಡಿಕೊಂಡು ಹಾಜರಾಗಬಹುದು.

whatss

ಅಂಕಗಳ ಸುಧಾರಣಾ ವ್ಯವಸ್ಥೆಯ ಜಾರಿ ( Implementation of Marks Reform System ) :

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಂಡ ಎಲ್ಲ ವಿದ್ಯಾರ್ಥಿಗಳಿಗೆ ಅಂಕಗಳ ಸುಧಾರಣಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಮೊದಲಿನ ನಿಯಮಗಳ ಪ್ರಕಾರ ಅಭ್ಯರ್ಥಿಯೊಬ್ಬ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕವನ್ನು ನಿರಾಕರಿಸಿ 2 ನೇ ಬಾರಿ ಪರೀಕ್ಷೆ ಬರೆದರೆ 2ನೇ ಬಾರಿ ಬರೆದ ಪರೀಕ್ಷೆಯ ಅಂಕವನ್ನು ಪರಿಗಣಿಸಲಾಗುತ್ತಿತ್ತು ಹೀಗಾಗುವುದರಿಂದ ವಿದ್ಯಾರ್ಥಿಗೆ ಅನ್ಯಾಯವಾಗುತ್ತಿತ್ತು ಎಂದು ತಿಳಿದು ಬಂದಿದೆ.

ಇದಕ್ಕೆ ಉದಾಹರಣೆ ನೋಡುವುದಾದರೆ, ಮೊದಲ ಪರೀಕ್ಷೆಯಲ್ಲಿ ( Exam ) 50 ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಯು 2ನೇ ಪರೀಕ್ಷೆಯಲ್ಲಿ 25 ಅಂಕ ಪಡೆದು ಅನುತ್ತೀರ್ಣರಾದರೆ, ಅಭ್ಯರ್ಥಿಯನ್ನು ಅನುತ್ತೀರ್ಣರೆಂದು ಪರಿಗಣಿಸಲಾಗುತ್ತಿತ್ತು.

ಈ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಹೊಸ ನಿಮಯಗಳ ( New Rules ) ಪ್ರಕಾರ ಎರಡೂ ಪರೀಕ್ಷೆಯಲ್ಲಿ ಉತ್ತಮವಾದ ಅಂಕವನ್ನು ಪರಿಗಣಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಯು 2ನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೂ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ.

tel share transformed

 

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

    ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!