ರಾಜ್ಯದ ನಿರುದ್ಯೋಗ ಯುವಕ ಯುವತಿರಿಗೆ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಗುಡ್ ನ್ಯೂಸ್ ಬಂದಿದೆ, ಹೌದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ತರಬೇತಿ ಕೇಂದ್ರದಲ್ಲಿ ‘ಎಐಟಿಟಿ- ಎಸ್ಸಿಪಿ/ಟಿಎಸ್ಪಿ ಯೋಜನೆಯಡಿ ಎಸ್ ಎಸ್ ಎಲ್ ಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಇಂಜಿನಿಯರಿಂಗ್, ಓದಿದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದ್ಧಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿದುಕೊಳ್ಳಲು ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ನಿರುದ್ಯೋಗಿ ಯುವಕ ಯುವತಿಯರಿಗೆ ಗುಡ್ ನ್ಯೂಸ್
ಈಗಾಗಲೇ ಎಸ್ ಎಸ್ ಎಲ್ ಸಿ, ಐ ಟಿ ಐ, ಡಿಪ್ಲೋಮಾ, ಇಂಜಿನಿಯರಿಂಗ್ ಓದಿದ ನಿರುದ್ಯೋಗಿ ಯುವಕ ಯುವತಿಯರು ಕೌಶಲ್ಯ ಅಭಿವೃದ್ಧಿ ತರಬೇತಿಗೆ ಅರ್ಜಿ ಸಲ್ಲಿಸಿ. ತರಬೇತಿಯನ್ನು ಪಡೆಯಬಹುದು. ತರಬೇತಿಯ ಅವಧಿ ಮತ್ತು ಹೆಚ್ಚಿನ ಮಾಹಿತಿ ಕೆಳಗೆ ಕೊಡಲಾಗಿದೆ.
ಕೋರ್ಸ್ | ತರಬೇತಿ | ಅವಧಿ |
ಐಟಿಐ | ಸಿಎನ್ಸಿ ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್ | 4 ತಿಂಗಳು |
ಎಸ್ಎಸ್ಎಲ್ಸಿ | * ಮಿಲ್ಲರ್/ಟರ್ನರ್ * ಟೂಲ್ ರೂಂ ಮಷಿನಿಸ್ಟ್ | * 4 ತಿಂಗಳು * 12 ತಿಂಗಳು |
ಡಿಪ್ಲೊಮ/ಬಿಇ | ಸಿಎನ್ಸಿ ಪ್ರೊಗ್ರಾಮರ್/ಪ್ರೊ-ಇ/ಆಟೋಕ್ಯಾಡ್ | 4 ತಿಂಗಳು |
ಅರ್ಹ ನಿರುದ್ಯೋಗ ಯುವಕ ಯುವತಿಯರು ಈ ಮೇಲಿನ ತರಬೇತಿಗಳಿಗೆ ಅರ್ಜಿ ಸಲ್ಲಿಸಬಹುದು. ತರಬೇತಿ ಸಮಯದಲ್ಲಿ ರೂ.2500 ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುತ್ತದೆ. ಪರ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ದಾಖಲಾತಿ, ವಯಸ್ಸಿನ ಪುರಾವೆ, ವೈಯಕ್ತಿಕ ವಿವರಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿಯ ಕೇಂದ್ರ,
ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ,
ಮಾಚೇನಹಳ್ಳಿ, ಶಿವಮೊಗ್ಗ
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:
08182-246054, ಮೊ.ಸಂ 9448307027, 9449286543
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.