ಇದೀಗ ಸಿಹಿ ಸುದ್ದಿ ತಿಳಿದು ಬಂದಿದೆ. ಎಲ್ಲರಿಗೂ ಕೂಡ ವಾಹನಗಳನ್ನು ಚಾಲನೆ ಮಾಡಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ ಅವರು ವಾಹನಗಳನ್ನು ಚಾಲನೆ ಮಾಡಲು ಹೋದರೆ ಆಗುವುದಿಲ್ಲ. ಯಾಕೆಂದರೆ ಅನುಭವಗಳು ಇರುವುದಿಲ್ಲ ಮತ್ತು ಡ್ರೈವಿಂಗ್ ತರಗತಿಗಳಿಗೆ ( Driving Class ) ಸೇರಿಕೊಳ್ಳಲು ಹಣವೂ ಕೂಡ ಇರುವುದಿಲ್ಲ. ಆದರೆ ಇದೀಗ ಅದರ ಬಗ್ಗೆ ಚಿಂತಿಸಬೇಕಿಲ್ಲ. ನೀವು ಉಚಿತವಾಗಿ ವಾಹನ ಚಾಲನಾ ತರಬೇತಿಗೆ ಸೇರಿಕೊಳ್ಳಬೇಕು ಎಂಬ ಆಸಕ್ತಿ ಇದ್ದರೆ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉಚಿತ ವಸತಿ-ಊಟ ( Free food and accommodation ) ಸಹಿತ 30 ದಿನಗಳ ಲಘು/ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಉಚಿತ ವಾಹನ ಚಾಲನಾ ತರಬೇತಿ :
2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ ( SC ) ಮತ್ತು ಪರಿಶಿಷ್ಟ ಪಂಗಡಗಳ ( ST ) ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ. ಹಾಗಾಗಿ ಈ ಒಂದು ಉಚಿತ ತರಬೇತಿ ಡ್ರೈವಿಂಗ್ ಕಲಿಯಲು ಆಸಕ್ತಿ ಇದ್ದವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಉಚಿತ ತರಬೇತಿ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಬೇಕಾಗುವ ದಾಖಲಾತಿಗಳೇನು? ಎಂಬುದರ ಬಗ್ಗೆ ಮಾಹಿತಿ :
ಚಾಲನಾ ತರಬೇತಿಯು ಎರಡು ವಿಧದಲ್ಲಿ ( two types ) ಇವೆ :
ಲಘು ವಾಹನ ಚಾಲನಾ ತರಬೇತಿ (ಕಾರ್/ಜೀಪ್) ಮತ್ತು
ಭಾರಿ ವಾಹನ ಚಾಲನಾ ತರಬೇತಿಗಾಗಿ (ಬಸ್)
ಈ ಎರಡು ತರಬೇತಿಗಳಿಗೆ ಅರ್ಜಿ ಸಲ್ಲಿಸಬಹುದು.
ಈ ತರಬೇತಿಗೆ ಅರ್ಜಿ ಸಲ್ಲಿಸಲು ದಾಖಲಾತಿಗಳು ( Documentes ) ಈ ಕೆಳಗಿನಂತಿವೆ :
ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ
ಎಸ್.ಎಸ್.ಎಲ್.ಸಿ. ಅಂಕಪಟ್ಟಿ / ಶಾಲಾ ವರ್ಗಾವಣಾ ಪ್ರಮಾಣ ಪತ್ರ / ನೋಟರಿಯಿಂದ ಪ್ರಮಾಣ ಪತ್ರ.
ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 5
ಚಾಲನಾ ತರಬೇತಿ (ಕಾರ್/ಜೀಪ್)
ಈ ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಘು ವಾಹನ ಚಾಲನಾ ತರಬೇತಿಗಾಗಿ (ಕಾರ್/ ಜೀಪ್) ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು. ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಬಸ್ ಚಾಲನಾ ತರಬೇತಿಗಾಗಿ (ಬಸ್)
ಭಾರಿ ವಾಹನ ಚಾಲನಾ ತರಬೇತಿಗಾಗಿ (ಬಸ್) ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷಗಳ ವಯೋಮಿತಿ ಪೂರ್ಣಗೊಂಡಿರಬೇಕು. ಗರಿಷ್ಠ 45 ವರ್ಷ ಇರಬೇಕು. ಹಾಗೆಯೇ ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು.
ವಸತಿ-ಊಟ ಸಹಿತ 30 ದಿನಗಳ ತರಬೇತಿ :
ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಅರ್ಹ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿಯನ್ನು 30 ದಿನಗಳವರೆಗೆ ( 30 Days free Coaching ) ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುವುದು.
ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನ:
ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ, 3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು-560027 ಇಲ್ಲಿ ಸಲ್ಲಿಸಿ, 31 ಜನವರಿ 2024 ರೊಳಗೆ ಹೆಸರು 4 ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ( For more Information ) :
ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಜಾಲತಾಣ https://mybmtc.karnataka.gov.in/ ಕ್ಕೆ ಭೇಟಿ ನೀಡಬಹುದು.
ಮೊಬೈಲ್ ಸಂಖ್ಯೆ : 7760991085, 6364858520, 7892529634, 7760576556, 7760991348. 080- 22537481 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Idu tumba tada aytu