ಆಳ್ವಾಸ್ ಕನ್ನಡ ಮಾಧ್ಯಮದಲ್ಲಿ ( Alvas Kannada Medium ) ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ಈ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಸಂಪೂರ್ಣ ಉಚಿತ ಶಿಕ್ಷಣ ( Free Education ) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ಒಂದು ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು. ಹಾಗಾಗಿ ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಆಳ್ವಾಸ್ ಶಾಲೆಯಲ್ಲಿ ಉಚಿತ ಶಿಕ್ಷಣ :
ಇಂದು ಎಲ್ಲರೂ ಕೂಡ ತಮ್ಮ ಮಕ್ಕಳನ್ನು ಬಹಳ ಕಷ್ಟ ಪಟ್ಟು ಹಣ ಕೂಡಿಸಿ ಒಳ್ಳೆಯ ಶಾಲೆಗಳಲ್ಲಿ ಓದಿಸುತ್ತಾರೆ. ಆದರೆ ಕೆಲವರು ಅಷ್ಟು ಹಣ ಕೊಟ್ಟು ತಮ್ಮ ಮಕ್ಕಳನ್ನು ಓದಿಸಲು ಆಗುತ್ತಿರುವುದಿಲ್ಲ. ಇಂತಹ ಮಕ್ಕಳಿಗೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ( Alvas kannada Medium School ) 2024-25 ರ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯವನ್ನು ನೀಡಲು ಪ್ರಾರಂಭಿಸಿದೆ. ಅದಕ್ಕಾಗಿ ಈ ಒಂದು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಕ್ಕಳಿಗೆ ಉಚಿತ ಶಿಕ್ಷಣಕ್ಕಾಗಿ 6, 7, 8 ಮತ್ತು 9ನೇ ತರಗತಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾಗಿ ಮಕ್ಕಳು ಇದೀಗ ಆದಷ್ಟು ಬೇಗ ಅರ್ಜಿ ಸಲ್ಲಿಸಿ ಈ ಒಂದು ಉಚಿತ ಶಿಕ್ಷಣವನ್ನು ಪಡೆಯಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಉತ್ತಮ ಅವಕಾಶವಾಗಿದೆ.
ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ವಿಧಾನ ( steps ) :
ಈ ಒಂದು ಉಚಿತ ಶಿಕ್ಷಣ ಪಡೆಯಲು ಆಸಕ್ತ ವಿದ್ಯಾರ್ಥಿಗಳು ಈ ಕೆಳಗೆ ನೀಡಿದ ವೆಬ್ ಸೈಟ್ ಗೆ ಭೇಟಿ ನೀಡಬೇಕು.
ವೆಬ್ಸೈಟ್ ಲಿಂಕ್ ( Website Link ) : www.alvasschool.com
ಈ ಅರ್ಜಿಯನ್ನು ಆನ್‌ಲೈನ್ ಮೂಲಕ ಅಲ್ಲಿ ಕೇಳಿದಂತ ದಾಖಲಾತಿಗಳನ್ನು ನೀಡಿ ಭರ್ತಿ ಮಾಡಬೇಕು.
ನಂತರ ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಒಂದು ಪ್ರತಿಯನ್ನು ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು.
ಭರ್ತಿ ಮಾಡಿದ ಒಂದು ಅರ್ಜಿ ಪ್ರತಿ ಸಲ್ಲಿಸಬೇಕಾದ ವಿಳಾಸ : ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ), ಮೂಡುಬಿದಿರೆ, ದಕ್ಷಿಣ ಕನ್ನಡ -574227.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳ ( Documents ) ವಿವರ :
6, 7, 8, 9 ಯಾವುದೇ ತರಗತಿಗೆ ಪ್ರವೇಶ ಪಡೆಯಲು ಬಯಸುವವರು ಹಿಂದಿನ ವರ್ಷದ ಶಿಕ್ಷಣ ಅಭ್ಯಾಸ ಮಾಡುತ್ತಿರುವ ದಾಖಲೆ ಪತ್ರಗಳು.
ಆಧಾರ್ ಕಾರ್ಡ್
ಮೊಬೈಲ್ ನಂಬರ್
ಇ-ಮೇಲ್ ವಿಳಾಸ
ಇತರೆ ಅಗತ್ಯ ಮಾಹಿತಿಗಳು
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ( Qualifications ) ಮತ್ತು ಸೌಲಭ್ಯ ( Facilities ) :
ಅರ್ಜಿ ಇಲ್ಲದೆ ನೇರವಾಗಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ.
ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸಂಪೂರ್ಣ ಉಚಿತ ಶಿಕ್ಷಣ, ವಸತಿ ಸಹಿತ ಊಟೋಪಚಾರದ ಸೌಲಭ್ಯ ದೊರೆಯಲಿದೆ.
ಅರ್ಜಿ ಸಲ್ಲಿಸಲು ನೀಡಿದ ದಿನಾಂಕ ( Last Date ) ಮತ್ತು ಆಯ್ಕೆ ಪ್ರಕ್ರಿಯೆ ನಡೆಯುವ ಸ್ಥಳ :
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-02-2024
ಆಯ್ಕೆ ಪರೀಕ್ಷೆ ನಡೆಸುವ ದಿನಾಂಕ: 03-03-2024
ಆಯ್ಕೆ ಪರೀಕ್ಷೆಯ ಸ್ಥಳ : ಆಳ್ವಾಸ್ ಆವರಣ, ವಿದ್ಯಾಗಿರಿ, ಮೂಡುಬಿದಿರೆ.
ಇತರೆ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು ಸಹಾಯವಾಣಿ ಸಂಖ್ಯೆ – 7026530137, 7026530263.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.