ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲಾ ಯೋಜನೆ(PM ujwala scheme)ಯ ಅಡಿಯಲ್ಲಿ ದೇಶಾದ್ಯಂತ 75 ಲಕ್ಷ ಉಚಿತ ಎಲ್‌ಪಿಜಿ(free LPG) ಸಂಪರ್ಕ ನೀಡಲು ಮುಂದಾಗಿದೆ. ಇದಕ್ಕಾಗಿ ತೈಲ ಮಾರಾಟ ಸಂಸ್ಥೆಗಳಿಗೆ 1,650 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ. ಏನಿದು ಮಾಹಿತಿ ಅಂತ ತಿಳಿದುಕೊಳ್ಳಬೇಕಾ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕ :
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ನೂತನವಾಗಿ 75 ಲಕ್ಷ ಉಚಿತ ಸಂಪರ್ಕ ಪಡೆಯುವ ಫಲಾನುಭವಿಗಳು ಸೇರ್ಪಡೆ ಆಗಲಿದ್ದಾರೆ. ಈವರೆಗೆ ಈ ಯೋಜನೆಯ ಪ್ರಯೋಜನ ಪಡೆದವರ ಒಟ್ಟು ಸಂಖ್ಯೆ 10 ಕೋಟಿ 35 ಲಕ್ಷಕ್ಕೆ ಏರಿಕೆ ಆಗಲಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿದ್ದು ಬಡ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿವೆ.
ಪ್ರಧಾನ ಮಂತ್ರಿ ಉಜ್ವಲಾ ಯೋಜನೆಗೆ ಮೇ 2016 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಬಡತನ ರೇಖೆಗಿಂತ ಕೆಳಗಿಳಿರುವ ಕುಟುಂಬಗಳ (ಬಿಪಿಎಲ್) ಮಹಿಳೆಯರ ಹೆಸರಲ್ಲಿ ಉಚಿತವಾಗಿ ಎಲ್‌ಪಿಜಿ(LPG) ಸಂಪರ್ಕ ನೀಡಲಾಗುತ್ತದೆ.
ಪ್ರಧಾನಿ ಮೋದಿ ಅವರಿಗೆ ಜಿ – 20 ಯಶಸ್ಸಿನ ಕ್ರೆಡಿಟ್
ಉಜ್ವಲಾ ಯೋಜನೆ ವಿಸ್ತರಣೆ ಜೊತೆಯಲ್ಲೇ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಯನ್ನೂ ಸಲ್ಲಿಸಲಾಯ್ತು. ಜಿ – 20 ಶೃಂಗ ಸಭೆಯು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದು, ಈ ಯಶಸ್ಸಿನ ಶ್ರೇಯವನ್ನು ಪ್ರಧಾನಿ ಮೋದಿ ಅವರಿಗೆ ನೀಡಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಪ್ರಧಾನಿ ಮೋದಿ ಅವರಿಗೆ ಜಿ – 20 ಯಶಸ್ಸಿನ ಕ್ರೆಡಿಟ್ ನೀಡುವ ನಿರ್ಣಯವನ್ನು ರಕ್ಷಣಾ ಸಚಿವ ರಾಜನಾಥ್ ಅವರು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿದರು. ಇದಕ್ಕೆ ಸರ್ವಾನುಮತದ ಅಂಗೀಕಾರ ಲಭ್ಯವಾಯ್ತು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Ok
ತೋರಣ ಕಂಬದಹಳ್ಳಿ ವಿಲೇಜ್
ಕೋಲಾರ್ ತಾಲೂಕ್
ಕೋಲಾರ್ ಜಿಲ್ಲೆ
ಬೆರಮನಹಳ್ಳಿ ಪೋಸ್ಟ್
ವೇಮಗಲ್ ಹೋಬಳಿ
ತೋರಣ ಕಂಬದಹಳ್ಳಿ ವಿಲೇಜ್
ಕೋಲಾರ್ ತಾಲೂಕ್
ಕೋಲಾರ್ ಜಿಲ್ಲೆ
ಬೆರಮನಹಳ್ಳಿ ಪೋಸ್ಟ್
ವೇಮಗಲ್ ಹೋಬಳಿ
Give the cooking Gas
I’m mounesh Nayak timmapur post kannal Timmapur Raichur Karnataka Maski 584124
I am from. Bangalore
ನಮಗೆ ಗ್ಯಾಸ್ ಸಿಲಿಂಡರ್ ಅತಿ ಉಪಯೋಗವಾಗಿದೆ ಗ್ಯಾಸ್ ಸಿಲೆಂಡರ್ ನಮಗೆ ಬೇಕು