BCM Hostel : ಉಚಿತ ವಿದ್ಯಾರ್ಥಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.! ಇಲ್ಲಿದೆ ಡೀಟೇಲ್ಸ್

IMG 20241027 WA0006

ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ( ವೃತ್ತಿಪರ ಪದವಿ ಮತ್ತು ಸ್ನಾತಕೋತ್ಸರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಹಾಸ್ಟೆ(free hostel)ಲ್ ಪಡೆಯಲು ಇಂದೇ ಅರ್ಜಿ ಸಲ್ಲಿಸಿ :

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ(post metric) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ – 1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ
2024-25 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :

ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯು ವೃತ್ತಿಪರ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಓದುತ್ತಿರಬೇಕು.

ವಿದ್ಯಾರ್ಥಿಗಳು ಪ್ರವರ್ಗ – 1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.

ಪ್ರವರ್ಗ – 1, ST/SC ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2.50 ಲಕ್ಷವನ್ನು ಮೀರಿರಬಾರದು.

2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 1.00 ಲಕ್ಷವನ್ನು ಮೀರಿರಬಾರದು.

ಅರ್ಜಿಯನ್ನು ಸಲ್ಲಿಸುವ ವಿಧಾನ:

ವಿದ್ಯಾರ್ಥಿಗಳು  https://shp.karnataka.gov.in/bcwd ಯ ಅಧಿಕೃತ ಜಾಲತಾಣದ ಮೂಲಕ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳ ವಿವರಕ್ಕಾಗಿ ಇಲಾಖೆಯ ಜಾಲತಾಣವಾದ https://bcwd.karnataka.gov.in/ ಗೆ ಭೇಟಿ ನೀಡಬಹುದು.

ಅರ್ಜಿಯನ್ನು ಸಲ್ಲಿಸುವಾಗ ತಾಂತ್ರಿಕ ತೊಂದರೆಯಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ / ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯದ ಕಲೆಗಳೊಂದಿಗೆ ಸಂಪರ್ಕಿಸಬಹುದು.

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 30 ಅಕ್ಟೋಬರ್, 2024

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!