ಬೆಂಗಳೂರಿನ ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರಸಕ್ತ 2024 25 ನೇ ಸಾಲಿನ ಪ್ರವೇಶಗಳು ಪ್ರಾರಂಭವಾಗಿವೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯುವ ಅರ್ಹ ವಿದ್ಯಾರ್ಥಿಗಳು ಈ ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಉಚಿತ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಗಳು ಪ್ರಾರಂಭ
ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ ಯಾವುದೇ ಜಿಲ್ಲೆಯ ವಿದ್ಯಾರ್ಥಿಗಳು ಮುಂದಿನ ಶಿಕ್ಷಣಕ್ಕಾಗಿ ಬೆಂಗಳೂರಿನಲ್ಲಿ ವಿವಿಧ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಬಡ ಪ್ರತಿಭಾವಂತ ವೀರಶೈವ ವಿದ್ಯಾರ್ಥಿಗಳು ಈ ಉಚಿತ ಹಾಸ್ಟೆಲ್ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ನಾಗರಭಾವಿಯ ಎಂ.ಬಸವಯ್ಯ ಕಾಲೇಜಿನಲ್ಲಿ ಪಿಯುಸಿ ಕಾಮರ್ಸ್ ತರಗತಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳು, ಯಾವುದೇ ಕಾಲೇಜಿನಲ್ಲಿ ಡಿಪ್ಲೊಮಾ, ಪದವಿ ತರಗತಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೇ31ರೊಳಗೆ ಅರ್ಜಿ ಪಡೆದು, ಜೂ.5ರೊಳಗೆ ಅರ್ಜಿ ಸಲ್ಲಿಸಬೇಕು.
ವೈದ್ಯಕೀಯ, ತಾಂತ್ರಿಕ, ಸ್ನಾತಕೋತ್ತರ, 5 ವರ್ಷದ ಎಲ್‌ಎಲ್‌ಬಿ, ನರ್ಸಿಂಗ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಜೂನ್ 30 ರೊಳಗೆ ಅರ್ಜಿ ಪಡೆದು, ಜುಲೈ 05 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ದೊರೆಯುವ ವಿಳಾಸ :
ಕಾರ್ಯದರ್ಶಿಗಳು, ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ, ಎಸ್‌ಜೆಎಂ ಟವರ್ಸ್, ನಂ.18/1, ಕಲ್ಯಾಣ ಸಮುಚ್ಛಯ, 2ನೇ ಮಹಡಿ, 6ನೇ ಅಡ್ಡರಸ್ತೆ, ಗಾಂಧಿನಗರ, ಬೆಂಗಳೂರು.
ಪ್ರಮುಖ ದಿನಾಂಕಗಳು
ಕೋರ್ಸ್ | ಅರ್ಜಿ ಪಡೆಯಲು ಕೊನೆ ದಿನಾಂಕ | ಅರ್ಜಿ ಸಲ್ಲಿಸಲು ಕೊನೆ ದಿನಾಂಕ |
ಪಿಯು ಕಾಮರ್ಸ್, ಡಿಪ್ಲೊಮ ವಿದ್ಯಾರ್ಥಿಗಳು | 31-05-2024 | 05-06-2024 |
ವೈದ್ಯಕೀಯ, ತಾಂತ್ರಿಕ, ಸ್ನಾತಕೋತ್ತರ, ಬಿಎ / ಎಲ್‌ಎಲ್‌ಬಿ, ನರ್ಸಿಂಗ್ ಕೋರ್ಸ್ ವಿದ್ಯಾರ್ಥಿಗಳು | 30-06-2024 | 05-07-2024 |
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.