Free Training: ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಈಗಲೇ ಅಪ್ಲೈ ಮಾಡಿ!

IMG 20240627 WA0001

ಉಚಿತ ಊಟ, ವಸತಿಯೊಂದಿಗೆ ಕೋಳಿ ಸಾಕಾಣಿಕೆ(poultry farming) ತರಬೇತಿ : ಜುಲೈ 02 ರೊಳಗೆ ಅರ್ಜಿ ಸಲ್ಲಿಸಿ.

ಪ್ರಸ್ತುತ ದಿನಮಾನಗಳಲ್ಲಿ ಯುವಕ ಯುವತಿಯರಿಗೆ ತಮ್ಮದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಬೇಕು ಎಂಬ ಆಸೆ ಇರುತ್ತದೆ. ತಾವು ಕೂಡ ಒಂದು ಉದ್ಯಮಕ್ಕೆ ಮಾಲೀಕರಾಗಬೇಕು ಎಂಬ ಹಂಬಲವನ್ನು ಇಟ್ಟುಕೊಂಡಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (shree Dharmasthala Manjuntheshwara Education Trust) ಮತ್ತು ಕೆನರಾ ಬ್ಯಾಂಕ್‌ನ (Canara Bank) ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ (Rudset Organization) ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತು 10 ದಿನಗಳ ಕೋಳಿ ಸಾಕಾಣಿಕೆ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಪಡೆದುಕೊಂಡ ನಂತರ ತರಬೇತಿ ಪಡೆದುಕೊಂಡ ಅಭ್ಯರ್ಥಿಗೆ ಜಿಲ್ಲಾ ಮಂಡಳಿಯಿಂದ ತರಬೇತಿಯ ಪ್ರಮಾಣ ಪತ್ರವನ್ನು (Training Certificate) ಕೂಡ ನೀಡಲಾಗುತ್ತದೆ. ಪ್ರಮಾಣ ಪತ್ರವನ್ನು ಸ್ವೀಕರಿಸಿದ ಅಭ್ಯರ್ಥಿ ತಮ್ಮದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭ ಮಾಡಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕೋಳಿ ಸಾಕಾಣಿಕೆಯ (poultry farming) ತರಬೇತಿ(Training) ಯಾವ ಸ್ಥಳದಲ್ಲಿ ನಡೆಯಲಿದೆ :

ನೆಲಮಂಗಲ ತಾಲೂಕಿನ (Nelamangal Taluk) ಅರಿಶಿಣ ಕುಂಟೆಯ ಹತ್ತಿರದ ಸ್ಥಳಗಳಲ್ಲಿಯೇ ಕೋಳಿ ಸಾಕಾಣಿಕೆಯ ತರಬೇತಿಯು ನಡೆಯುತ್ತದೆ. ಯಾರೆಲ್ಲ ಸ್ವಂತ ಉದ್ಯಮ(own business)ವನ್ನು ಮಾಡಬೇಕೆಂಬ ಆಸೆ ಇಟ್ಟುಕೊಂಡಿದ್ದೀರಾ ಅವರೆಲ್ಲಾ ಕಡ್ಡಾಯವಾಗಿ ದಾಖಲಾತಿಗಳನ್ನು ಪರಿಶೀಲಿಸಿಕೊಂಡ ನಂತರ ಅರ್ಜಿ ಸಲ್ಲಿಕೆಯನ್ನು ಮಾಡಬಹುದು. ಜುಲೈ 02 (July 02) ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ತರಬೇತಿಯ ಲಾಭ ಅರ್ಹರಿಗೆ ದೊರೆಯಲಿದ್ದು, ಯಾರೆಲ್ಲ ಜುಲೈ 02 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಿರುತ್ತಾರೋ ಅವರು ಈ ಉಚಿತ ತರಬೇತಿಯ ಲಾಭವನ್ನು ಪಡೆದುಕೊಳ್ಳಬಹುದು.

ಕೋಳಿ ಸಾಕಾಣಿಕೆ(poultry farming) ಉಚಿತ ತರಬೇತಿಯ ಹೇಗಿರುತ್ತದೆ :

ಯಾವ ರೀತಿ ಕೋಳಿ ಸಾಕಾಣಿಕೆಯನ್ನು ಮಾಡಬೇಕು ಎಂಬ ಮಾಹಿತಿಯನ್ನು ನೀಡುವ ಜೊತೆಗೆ ಪ್ರಸ್ತುತ ದಿನಗಳಲ್ಲಿ ಸ್ವಂತ ಉದ್ಯಮ ಮಾಡುತ್ತಿರುವಂತಹ ಅದರಲ್ಲೂ ಕೋಳಿ ಸಾಕಾಣಿಕೆಯಲ್ಲಿ ಯಾವ ರೀತಿ ಲಾಭವನ್ನು ಪಡೆದುಕೊಳ್ಳಬಹುದು ಎಂಬ ಎಲ್ಲಾ ಮಾಹಿತಿಯನ್ನು ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಕೋಳಿ ಸಾಕಾಣಿಕೆ ತರಬೇತಿಯಲ್ಲಿ ಉಚಿತವಾಗಿ ನೀಡಲಾಗುತ್ತದೆ. ಇದರ ಜೊತೆಯಲ್ಲಿ ರುಡ್ಸೆಟ್ ಸಂಸ್ಥೆಯು ಸಾಲದ ಸೌಲಭ್ಯದ ಮಾಹಿತಿಯನ್ನು ಕೂಡ  ನೀಡುತ್ತದೆ.

ಕೋಳಿ ಸಾಕಾಣಿಕೆ(poultry farming) ಉಚಿತ ತರಬೇತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು (Qualifications) :

ಅಭ್ಯರ್ಥಿಯು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.
ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬರಬೇಕು.
ಅಭ್ಯರ್ಥಿಯು ಗ್ರಾಮೀಣ ಪ್ರದೇಶದ ನಿವಾಸಿಯಾಗಿರಬೇಕು.
ಹಾಗೂ ಬಿಪಿಎಲ್ ಕಾರ್ಡ್ ಹೊಂದಿರಬೇಕು.

ಕೋಳಿ ಸಾಕಾಣಿಕೆ(poultry farming) ತರಬೇತಿಯಲ್ಲಿ ಸಿಗುವ ಸೌಲಭ್ಯಗಳು (facilities) :

ಅಭ್ಯರ್ಥಿಗೆ ಉಚಿತ ಊಟ ಮತ್ತು ವಸತಿ ಹಾಗೂ ತರಬೇತಿ ಪೂರ್ಣಗೊಂಡ ನಂತರ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಕೋಳಿ ಸಾಕಾಣಿಕೆಯ ಬಗ್ಗೆ ಸಮಗ್ರ ತರಬೇತಿಯನ್ನು ಕೇವಲ 10 ದಿನಗಳಲ್ಲಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ :

ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೆ ಭೇಟಿ ನೀಡಿ ಅರ್ಜಿ ಪಡೆದು ಅರ್ಜಿಗಳನ್ನು ಸಲ್ಲಿಸುವುದು. ಅಭ್ಯರ್ಥಿಗೆ ಹೆಚ್ಚಿನ ಮಾಹಿತಿ ಬೇಕು ಎಂದರೆ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ : ಮೊಬೈಲ್ ಸಂಖ್ಯೆ 9380162042, 9740982585

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 02, 2024

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!