ಉಚಿತ ಟೈಲರಿಂಗ್ & ಫ್ಯಾಶನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ! ಹೀಗೆ ಅಪ್ಲೈ ಮಾಡಿ

IMG 20240719 WA0002

ಉಚಿತ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ತರಬೇತಿಗೆ(Free fashion designing and tailoring training ) ಅರ್ಜಿ ಆಹ್ವಾನ! ಆಸಕ್ತರು ಅರ್ಜಿ ಸಲ್ಲಿಸಬಹುದು.

ಇಂದು ಜನರು ತಮ್ಮ ಉಡುಗೆ ತೊಡುಗೆಗಳ ಬಗ್ಗೆ ಹೆಚ್ಚು ಆಸಕ್ತಿಯನ್ನು ಹೊಂದಿದ್ದಾರೆ. ದಿನದಿಂದ ದಿನಕ್ಕೆ ಮಾರುಕಟ್ಟೆಯಲ್ಲಿ ಹಲವಾರು ಡಿಸೈನ್ ಗಳ (design) ವಿವಿಧ ರೀತಿಯ ಉಡುಪುಗಳನ್ನು ಕಾಣುತ್ತೇವೆ. ಎಲ್ಲರೂ ಹೊಸ ಹೊಸ ಉಡುಪುಗಳನ್ನು ಧರಿಸಲು ಇಚ್ಛಿಸುತ್ತಾರೆ. ಹೊಸ ಮಾದರಿಯ ಉಡುಪುಗಳು ರೂಪುಗೊಳ್ಳಲು ಕಾರಣ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಇವುಗಳನ್ನು ಕಲಿಯಲು ಅನೇಕ ಜನರು ಇಷ್ಟಪಡುತ್ತಾರೆ. ಮುಖ್ಯವಾಗಿ ಹೆಣ್ಣುಮಕ್ಕಳು ಈ ಕ್ಷೇತ್ರದಲ್ಲಿ ವಿಶೇಷ ಆಸಕ್ತಿಯನ್ನು (special interest) ಹೊಂದಿರುತ್ತಾರೆ. ಇದೀಗ ಫ್ಯಾಶನ್ ಡಿಸೈನಿಂಗ್ ಹಾಗೂ ಟೈಲರಿಂಗ್ ಕಲಿಯಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಉಚಿತ 30 ದಿನಗಳ ತರಬೇತಿಗೆ ಅರ್ಜಿಯನ್ನು (Free Tailoring Training) ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಸಬಹುದಾಗಿದ್ದು, ವಯೋಮಿತಿ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸೇರಿದಂತೆ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ (Dharmasthala Manjunatheshwara Education trust) ಮತ್ತು ಕೆನರಾ ಬ್ಯಾಂಕ್‌ನ (Canara bank) ಸಹಯೋಗದಲ್ಲಿ ಉಚಿತ ತರಬೇತಿ :

ಫ್ಯಾಶನ್ ಡಿಸೈನಿಂಗ್ (Fashion Designing) ಹಾಗೂ ಟೈಲರಿಂಗ್‌ (Tailoring ) 30 ದಿನಗಳ ಉಚಿತ ತರಬೇತಿಯನ್ನು ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಜುಲೈ 23 ಕೊನೆಯ ದಿನವಾಗಿದೆ.

ಆಗಸ್ಟ್ 1 (August 1st) ರಿಂದ ಉಚಿತ ತರಬೇತಿ ಆರಂಭ (classes open) :

ಫ್ಯಾಶನ್ ಡಿಸೈನಿಂಗ್‌ ಹಾಗೂ ಟೈಲರಿಂಗ್ ತರಬೇತಿಯು ಆಗಸ್ಟ್ 1 ರಿಂದ ಆರಂಭವಾಗಲಿದ್ದು, ಗ್ರಾಮೀಣ ಪ್ರದೇಶದ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ಪಡೆಯಲು ಇರಬೇಕಾದ ವಯೋಮಿತಿ (age limit) :

ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 45 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯಲು ಬರಬೇಕು.

ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು (documents) :

ಆಧಾರ್ ಕಾರ್ಡ್
ನರೇಗಾ ಜಾಬ್ ಕಾರ್ಡ್
ರೇಷನ್ ಕಾರ್ಡ್
ಮುಖ್ಯವಾಗಿ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಗಮನಿಸಿ (notice) :

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ (Rudset Organisation) ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೊಬೈಲ್ : 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!