ಬೆಂಗಳೂರು ಕಂಠಿರವ ಸ್ಟೇಡಿಯಂ (Kantirava stadium) ನಲ್ಲಿ ನಡೆದ ವಿಶ್ವ ಅಂಗವಿಕಲರ ದಿನಾಚರಣೆ(Disability Day 2023)ಯ ಅಂಗವಾಗಿ, 4,000 ವಿಶೇಷ ಚೇತನರಿಗೆ(ಅಂಗವಿಕಲರಿಗೆ) ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು (A motorized two-wheeler) ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಸ್ಪಷ್ಟಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ನಡೆದ ಇನ್ನು ಹೆಚ್ಚಿನ ವಿಚಾರಗಳ ಕುರಿತು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ನಮ್ಮ ವರದಿಯನ್ನು ಸಂಪೂರ್ಣವಾಗಿ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕಂಠೀರವ ಒಳಾoಗಣ ಕ್ರೀಡಾಂಗಣದಲ್ಲಿ ಭಾನುವಾರ ‘ವಿಶ್ವ ಅಂಗವಿಕಲರ ದಿನಾಚರಣೆ’ ಹಮ್ಮಿಕೊಳ್ಳಾಯಿತು. ಈ ಕಾರ್ಯಕ್ರಮದಲ್ಲಿ ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (lakshmi Hebalkar) ಅವರು ಸಹ ಉಪಸ್ಥಿತರಿದ್ದರು.
‘ಪ್ರಸಕ್ತ ಸಾಲಿನಲ್ಲಿ ಬುದ್ಧಿಮಾಂದ್ಯ ಮಕ್ಕಳಿಗಾಗಿ ಏಳು ಜಿಲ್ಲೆಗಳಲ್ಲಿ 10 ವಸತಿ ಶಾಲೆಗಳನ್ನು ನಿರ್ಮಿಸಲು ₹ 2 ಕೋಟಿ ವೆಚ್ಚವನ್ನು ಮೀಸಲಿಡಲಾಗಿದೆ. ಅಂಗವಿಕಲರ ಶೈಕ್ಷಣಿಕ, ವೈದ್ಯಕೀಯ, ಪುನರ್ವಸತಿ, ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿಗೆ ₹ 284.27ಕೋಟಿ ರೂಪಾಯಿಗಳನ್ನು ಸರ್ಕಾರ ನೀಡುತ್ತದೆ. ಮರಣ ಹೊಂದಿದ ಅಂಗವಿಕಲರಿಗೆ ನೀಡುವ ಪರಿಹಾರ ಮೊತ್ತವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಸಲಾಗಿದೆ’ ಎಂದು ಮಾತನಾಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
‘2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 13,24,205 ವಿಕಲಚೇತನರಿದ್ದಾರೆ. ಅಂಗವಿಕಲರು ಸಮಾಜಕ್ಕೆ ಹೊರೆ ಅಲ್ಲ. ಇತ್ತೀಚಿಗೆ ಎಲ್ಲಾ ರೀತಿಯ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ತೋರುತ್ತಿದ್ದಾರೆ. ಅವರು ಕೂಡಾ ಸಾಮಾನ್ಯರಂತೆ ಎಲ್ಲ ಅವಕಾಶಗಳನ್ನು ಪಡೆದು ಉದ್ಯೋಗ, ಬದುಕಿಗೆ ಹಕ್ಕುಗಳನ್ನು ಪಡೆದಿದ್ದಾರೆ. ಅಂಗವಿಕಲರಿಗೆ ಶಿಕ್ಷಣ, ಉದ್ಯೋಗಗಳಲ್ಲಿ ಸಮಾನ ಅವಕಾಶ ದೊರಕಿಸುವುದು ಸರ್ಕಾರದ ಕರ್ತವ್ಯ’ ಎಂದಿದ್ದಾರೆ.
‘ ಇತ್ತೀಚಿನ ಜನ ಸ್ಪಂದನ ಕಾರ್ಯಕ್ರಮದಲ್ಲಿ ಬಹಳಷ್ಟು ಸಂಖ್ಯೆಯಲ್ಲಿ ಅಂಗವಿಕರು ಭಾಗವಹಿಸಿದ್ದರು, ಉದ್ಯೋಗ, ಶಿಕ್ಷಣ ಹಾಗೂ ವಾಹನ ಖರೀದಿಗೆ ನೆರವು ನೀಡುವಂತೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ’ ಎಂದು ಸಿಎಂ ಸ್ಪಷ್ಟಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
Almost 99% fake news in nedds of public all group
Dear sir Thank you for your comment. We will not publish any fake news on our website. Kindly contact our support number 9901760108 for the clarification