ನಮಸ್ಕಾರ ಓದುಗರಿಗೆ ಇವತ್ತಿನ ವರದಿಯಲ್ಲಿ ನಾವು ನಿಮಗೆ ರಾಜ್ಯ ಸರ್ಕಾರಿ ನೌಕರರ ತುಟ್ಟಭತ್ಯೆ(DA) ಹೆಚ್ಚಳದ ಬಗ್ಗೆ ಮಾಹಿತಿಯನ್ನು ನೀಡಲಾಗುವುದು.
ರಾಜ್ಯ ಸರ್ಕಾರಿ(State Government) ನೌಕರರಿಗೆ ದಸರಾ ಬಂಪರ್ ಉಡುಗೊರೆ ಸಿಕ್ಕಿದೆ ಎಂದೇ ಹೇಳಬಹುದಾಗಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.3.75 ರಷ್ಟು ಹೆಚ್ಚಿಸಿ ಇದೀಗ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಸರ್ಕಾರಿ ನೌಕಕರಿಗೆ ಶೇ.3.75 ರಷ್ಟು DA ಹೆಚ್ಚಳ:
ಹೌದು, ಬುಧವಾರವಷ್ಟೇ ಕೇಂದ್ರ ಸರ್ಕಾರವು ತನ್ನ ಸರ್ಕಾರಿ ನೌಕರರಿಗೆ ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದೆ ಅಕ್ಟೋಬರ್ 21 ಶನಿವಾರ ರಂದು ರಾಜ್ಯ ಸರ್ಕಾರ ಕೂಡಾ ತನ್ನ ನೌಕರರಿಗೆ ಶೇಕಡ 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದ್ದಂತೆಯೇ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ ಎಂದೇ ಇಲ್ಲಿ ತಿಳಿಯಬಹುದು. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.
ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾಗಿದೆ. UGC / AICTE/ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ. ಮೂಲಕ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇಕಡ 3.75ರಷ್ಟು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಂಘ ಡಿಎ.(DA) ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಈ ಮನವಿ ಪುರಸ್ಕರಿಸಿ ,ರಾಜ್ಯ ಸರ್ಕಾರ ಡಿಎ ಅನ್ನು ಶೇಕಡ 3.75ರಷ್ಟು ಹೆಚ್ಚಳ ಮಾಡಿ ನಮ್ಮ ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ಕೊಟ್ಟಿದೆ. ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ