ಕರ್ನಾಟಕ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ(Health and family welfare department) 34,967 ಮಂಜೂರಾತಿ ಹುದ್ದೆಗಳ ಪೈಕಿ, 14,523 ಹುದ್ದೆಗಳು ಖಾಲಿ ಇರುವುದಾಗಿ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರು ಈ ಮಾಹಿತಿ ಸಲ್ಲಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ಭರ್ತಿಗೆ ಕ್ರಮ :
ಆರೋಗ್ಯ ಇಲಾಖೆಯಲ್ಲಿ ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರೂ ಸೇರಿದಂತೆ ಒಟ್ಟು 34,967 ಹುದ್ದೆಗಳ ಪೈಕಿ, 20,444 ಹುದ್ದೆಗಳು ಈಗಾಗಲೇ ಭರ್ತಿಯಾಗಿವೆ. ಇನ್ನೂ 14,523 ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ.
ಪ್ರಸ್ತುತ ಸ್ಥಿತಿ ಮತ್ತು ಮುನ್ಸೂಚನೆಗಳು :
ಖಾಲಿ ಇರುವ ಹುದ್ದೆಗಳ ನಡುವೆಯೂ, 16,501 ಹುದ್ದೆಗಳು ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿವೆ. ಗ್ರಾಮೀಣದಲ್ಲಿ ಕಡ್ಡಾಯ ಸೇವೆಯಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ.
ಹೊಸ ನೇಮಕಾತಿ ಪ್ರಕ್ರಿಯೆಗಳು ಈ ಕೆಳಗಿನಂತಿವೆ:
204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು: ಭರ್ತಿ ಪ್ರಕ್ರಿಯೆಯಲ್ಲಿವೆ.
413 ಹುದ್ದೆಗಳ ಭರ್ತಿ ಪ್ರಸ್ತಾವನೆ: ಈಗಾಗಲೇ ಪರಿಶೀಲನೆಯಲ್ಲಿದೆ.
498 ಫಾರ್ಮಸಿ ಅಧಿಕಾರಿಗಳ ನೇಮಕಾತಿ: ಪ್ರಗತಿಯಲ್ಲಿದೆ.
705 ಹುದ್ದೆಗಳ ಭರ್ತಿ ಪ್ರಸ್ತಾವನೆ: ಪ್ರಸ್ತುತ ಪರಿಶೀಲನೆಯಲ್ಲಿದೆ.
ಡಿ ಗ್ರೂಪ್ ಹುದ್ದೆಗಳ ಭರ್ತಿಗೆ ಹೊಸದಾಗಿ ಕ್ರಮ ಕೈಗೊಳ್ಳಲಾಗಿದೆ.
ಆರೋಗ್ಯ ಇಲಾಖೆಯಲ್ಲಿ 10,253 ಡಿ ಗ್ರೂಪ್(D group) ಹುದ್ದೆಗಳು ಖಾಲಿ ಇದ್ದು, ಶೇ 75ರಷ್ಟು ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.
ಈ ಹುದ್ದೆಗಳ ಭರ್ತಿಯಿಂದ ರಾಜ್ಯದ ಆರೋಗ್ಯ ಸೇವೆಗಳ ಶಕ್ತಿ ಹೆಚ್ಚಿಸುವಲ್ಲಿ ಗಮನಾರ್ಹ ಭೂಮಿಕೆ ನಿರ್ವಹಿಸಲಿದೆ ಎಂದು ರಾಜ್ಯ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.