ಕರ್ನಾಟಕದಲ್ಲಿ ಹುದ್ದೆಗಳ ಭರ್ತಿಗೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ. ಮತ್ತು 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಹೌದು ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿರುವ ಹುದ್ದೆಗಳ ಭರ್ತಿಗೆ ಹೆಚ್ಚಿನ ಗಮನ ಹರಿಸುತ್ತಿದೆ, 15,428 ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮಹತ್ವದ ಘೋಷಣೆ ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅವರು ಧ್ವಜಾರೋಹಣ ಮಾಡಿ ಮಾತನಾಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ಭರ್ತಿಯ ಪ್ರಗತಿ:
ಹಿಂದಿನ ಸರ್ಕಾರದ ಅವಧಿಯಲ್ಲಿ ಅಧಿಸೂಚನೆಯಾಗಿ ಬಾಕಿ ಉಳಿದಿದ್ದ 670 ಹುದ್ದೆಗಳ ನೇಮಕಾತಿಯೂ ಸೇರಿ ಒಟ್ಟು 11,512 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಸ್ತುತ ವಿವಿಧ ಹಂತಗಳಲ್ಲಿ ನಡೆಯುತ್ತಿದೆ. ಈ ಕ್ರಮದಿಂದಾಗಿ ರಾಜ್ಯದ ಉದ್ಯೋಗ ಸಮಸ್ಯೆಯನ್ನು ಪರಿಹರಿಸಲು ಸಹಕಾರಿಯಾಗುವ ನಿರೀಕ್ಷೆಯಿದೆ.
ವಿದೇಶಿ ಬಂಡವಾಳ ಹೂಡಿಕೆ:
2023-24ನೇ ಸಾಲಿನಲ್ಲಿ ಕರ್ನಾಟಕವು 54,427 ಕೋಟಿ ರೂಪಾಯಿಗಳ ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿದೆ, ಇದು ದೇಶದ ಮೂರನೇ ಸ್ಥಾನದಲ್ಲಿದೆ. ಈ ವೇಳೆ ಸರ್ಕಾರವು 13 ಪ್ರಮುಖ ಉದ್ಯಮ ಒಪ್ಪಂದಗಳನ್ನು ಕೈಜೋಡಿಸಿದ್ದು, 42,915 ಕೋಟಿ ರೂಪಾಯಿಗಳ ಹೂಡಿಕೆಯಿಂದ 22,600 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.
ಮೂಲಸೌಕರ್ಯ ಮತ್ತು ಉದ್ಯೋಗಾವಕಾಶಗಳು:
ಎಕಗವಾಕ್ಷಿ ಅನುಮೋದನಾ ಸಮಿತಿಗಳು 591 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರ ಫಲವಾಗಿ 84,232 ಕೋಟಿ ರೂಪಾಯಿಗಳ ಹೂಡಿಕೆ ಮೂಲಕ 1,56,986 ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಈ ಮೂಲಕ ಕರ್ನಾಟಕವು ತನ್ನ ಪ್ರಗತಿಯನ್ನು ಮತ್ತಷ್ಟು ವಿಸ್ತರಿಸುತ್ತಿದೆ.
ಬ್ರ್ಯಾಂಡ್ ಬೆಂಗಳೂರು ಮತ್ತು ಕೃಷಿ ನವೋದ್ಯಮ:
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ 46,686 ಕೋಟಿ ರೂಪಾಯಿಗಳ ದೀರ್ಘಾವಧಿಯ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ, ಇದರಲ್ಲಿ ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಯ ನಿರ್ಮಾಣವು ಪ್ರಮುಖವಾಗಿದೆ. ಇನ್ನು, ರಾಜ್ಯದಲ್ಲಿ 50 ಸಾವಿರ ಕೋಟಿ ರೂಪಾಯಿಗಳ ಹೂಡಿಕೆ ಮೂಲಕ 1 ಲಕ್ಷ ಉದ್ಯೋಗ ಸೃಷ್ಟಿಸುವ ಹೊಸ “ಕ್ಲೀನ್ ಮೊಬಿಲಿಟಿ”(Clean Mobility) ನೀತಿಯನ್ನು ಸಿದ್ಧಪಡಿಸಲಾಗಿದೆ.
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ:
ಕಲ್ಯಾಣ ಕರ್ನಾಟಕ(Kalyan Karnataka) ಪ್ರದೇಶಕ್ಕೆ 371-ಜೆ (371-J) ಮಾನ್ಯತೆ ದೊರೆತು 10 ವರ್ಷವಾದ ಹಿನ್ನೆಲೆಯಲ್ಲಿ, 5 ಸಾವಿರ ಕೋಟಿ ರೂಪಾಯಿಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಮೇಕೆದಾಟು ಯೋಜನೆಗಳು:
ಎತ್ತಿನಹೊಳೆ ಯೋಜನೆಗೆ ಈ ವರ್ಷ 855 ಕೋಟಿ ರೂಪಾಯಿಗಳು ಮೀಸಲಾಗಿದ್ದು, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೂ ಭೂಸ್ವಾದೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸಲಾಗಿದೆ.
ಕರ್ನಾಟಕ ರಾಜ್ಯವು ಆರ್ಥಿಕ, ಸಾಮಾಜಿಕ, ಮತ್ತು ಉದ್ಯೋಗದ ದೃಷ್ಟಿಯಿಂದ ಪಾವತಿಸುವ ಪ್ರಗತಿಯ ಹಾದಿಯಲ್ಲಿ ಶ್ರಮಿಸುತ್ತಿದ್ದು, ಈ ಹೊಸ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿವೆ.ಮತ್ತು ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.