ಗ್ರಾಮ ಪಂಚಾಯತಿಯ ಎಲ್ಲಾ ರೀತಿಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ಈ ಸಂಖ್ಯೆಗೆ ಕರೆ ಮಾಡಿ👇
ಗ್ರಾಮಪಂಚಾಯಿತಿ ಇಂದ ಇಂದು ಹಲವಾರು ಯೋಜನೆಗಳು, ಸಾಲ ಸೌಲಭ್ಯಗಳು ಜಾರಿಯಲ್ಲಿವೆ. ಅಷ್ಟೇ ಅಲ್ಲದೆ ಹಲವಾರು ಜನರು ಅನೇಕ ರೀತಿಯ ಸೌಲಭ್ಯಗಳನ್ನು ಪಡೆಯುತ್ತಾರೆ. ಆದರೆ ಹಲವಾರು ಜನರಿಗೆ ಗ್ರಾಮ ಪಂಚಾಯಿತಿ (Gram Panchayath) ಇಂದ ದೊರೆಯುವ ಅನೇಕ ಸೌಲಭ್ಯಗಳ ಬಗ್ಗೆ ಸರಿಯಾದ ಮಾಹಿತಿ ತಿಳಿದಿರುವುದಿಲ್ಲ. ಆದರೆ ಇದೀಗ ಯೋಚಿಸುವ ಅಗತ್ಯವಿಲ್ಲ. ಯಾಕೆಂದರೆ ಗ್ರಾಮ ಪಂಚಾಯಿತಿಗಳಿಂದ ಏನೆ ಮಾಹಿತಿಯನ್ನು ಪಡೆಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ಕುಂದು ಕೊರತೆಗಳ ಬಗ್ಗೆ ಮಾಹಿತಿ ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ :
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು (Problems) ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬಿಡುಗಡೆ ಮಾಡಿರುವ ಹೊಸ ಸಹಾಯವಾಣಿ ಸಂಖ್ಯೆ :
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಮಾಹಿತಿ ಮತ್ತು ಕುಂದು ಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ (Help line number ) : “8277506000”
ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಯಾವೆಲ್ಲ ಮಾಹಿತಿ ಪಡೆಯಬಹುದು?
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ (panchayathraj) ಇಲಾಖೆಯ ಎಲ್ಲಾ ಯೋಜನೆಗಳ ಮಾಹಿತಿಯನ್ನು ತಿಳಿಯಲು ಈ ನಂಬರ್ ಗೆ ಕರೆ ಮಾಡಬಹುದು.
ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಸಲ್ಲಿಸಬಹುದು. ನಿಮ್ಮೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.
ನಿಮಗೆ ಆಸ್ತಿ ತೆರಿಗೆ ಕಟ್ಟುವ ಬಗ್ಗೆ ಮಾಹಿತಿಯನ್ನು ಸಹ ಕರೆ ಮಾಡಿ ತಿಳಿದುಕೊಳ್ಳಬಹುದು.
ಹೊಸ ಏಕೀಕೃತ ಸಹಾಯವಾಣಿ ಸಂಖ್ಯೆಯ ಲಾಭಗಳು (benefits) :
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಮಾಹಿತಿಯನ್ನು ಈ ಏಕೀಕೃತ ಸಹಾಯವಾಣಿಗೆ ಕರೆ ಮಾಡಿ ತಿಳಿಯಬಹುದು ಎಲ್ಲದಕ್ಕೂ ಬೇರೆ ಬೇರೆ ಉಚಿತ ಸಹಾಯವಾಣಿ ಸಂಪರ್ಕಿಸುವ ಗೊಂದಲ ಇರುವುದಿಲ್ಲ.
ಈ ಸಹಾಯವಾಣಿ ಸಂಖ್ಯೆಗೆ ಯಾವ ಸಮಯದಲ್ಲಿ ಕರೆ ಮಾಡಬಹುದು ?
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ 8277506000 ಸಹಾಯವಾಣಿಗೆ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯ ವರೆಗೆ ಕರೆ ಮಾಡಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ