ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ತಿಂಗಳು 19 ನೇ ತಾರೀಖಿನಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಅಧಿಕೃತ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಹಾಗಾಗಿ ಅರ್ಜಿ ಸಲ್ಲಿಸಲು ಯಾರು ಅರ್ಹರು, ಏನೆಲ್ಲಾ ದಾಖಲಾತಿಗಳು ಬೇಕು ಹಾಗೂ ಹೇಗೆ ಅರ್ಜಿ ಸಲ್ಲಿಸಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ !
ಚುನಾವಣೆಗೂ ಮುನ್ನ ಬರವಸೆಯನ್ನು ನೀಡಿದಂತೆ ಗೃಹಲಕ್ಷ್ಮಿ ಯೋಜನೆಯು ಜಾರಿಗೆ ಬಂದೇ ಬಿಟ್ಟಿತು, ಈ ವಿಷಯ ಈಗಾಗಲೇ ನಿಮಗೆಲ್ಲರಿಗೂ ಹಳೆಯದಾಗಿದೆ ಆದರೆ ಇವತ್ತಿನ ಹೊಸ ವಿಷಯ ಏನೆಂದರೆ, ಇದೇ ತಿಂಗಳು 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಯೋಜನೆ ಬಗ್ಗೆ ಗೊಂದಲಗಳಿದ್ದರೆ ಈ ಸಂಖ್ಯೆಗೆ SMS ಅಥವಾ ಕರೆ ಮಾಡಿ
ಯೋಜನೆ ಬಗ್ಗೆ ಯಾವುದೇ ಗೊಂದಲಗಳಿದ್ದರೂ 1902 ಸಂಖ್ಯೆಗೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ SMS ಸಂದೇಶ ಅಥವಾ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯ ಹಣ ಇವರಿಗೆ ಬರುವುದಿಲ್ಲ
- ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
- GST ಪಾವತಿ ಮಾಡುವ ಕುಟುಂಬಗಳು
- APL, BPL ಕಾರ್ಡ್ ಹೊಂದಿರದ ಕುಟುಂಬಗಳು
- ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
- ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮೀ ಯೋಜನೆಗೆ ಯಾರು ಅರ್ಹರು..?
ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ರೇಷನ್ ಕಾರ್ಡ್ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್‌ಎಂಎಸ್ ಮೂಲಕ ರವಾನೆ ಮಾಡಲಾಗುವುದು.
‘ಗೃಹಲಕ್ಷ್ಮೀ’ಯೋಜನೆಗೆ ನೋಂದಣಿಗೆ ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆಯ ಪಾಸ್ ಬುಕ್ ಬೇಕಾಗಿರುತ್ತದೆ. ಒಂದು ವೇಳೆ ಆಧಾರ್ ನಂಬರ್ ಜೋಡಣೆಯಾಗಿರುವ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಆ ಖಾತೆಯ ಪಾಸ್ ಬುಕ್ ಅಗತ್ಯ. ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುತ್ತದೆ.
ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ಮನೆಗೆ ತಲುಪಿಸಲಾಗುವುದು. ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ ಎಸ್ ಎಂಎಸ್ ಮೂಲಕ ಮಂಜೂರಾತಿ ಸಂದೇಶ ರವಾನೆ ಮಾಡಲಾಗುತ್ತದೆ. ಫಲಾನುಭವಿಯ ಆಧಾರ್ ಜೋಡಣೆಯಾಗಿರುವ ಖಾತೆಗೆ ಡಿಬಿಟಿ ಮೂಲಕ ಹಣ ಜಮೆ ಮಾಡುತ್ತೇವೆ. ಬೇರೆ ಖಾತೆಗೆ ಆರ್ ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ ಶುಲ್ಕ, ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿಪಡಿಸಿಲ್ಲ.
ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.
ರೇಷನ್ ಕಾರ್ಡ್ ಇಲ್ಲದೆ ಇರುವವರು ಹೇಗೆ ಅರ್ಜಿ ಸಲ್ಲಿಸಬಹುದು?
ಈಗಾಗಲೇ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆ ದಿನಾಂಕ ಇರುವುದಿಲ್ಲ. ಹಾಗಾಗಿ ಇನ್ನೇನು ಕೆಲವು ದಿನಗಳಲ್ಲಿ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಬಹುದು. ಕೆಲವು ಮೂಲಗಳ ಪ್ರಕಾರ ಜುಲೈ 30 ರಿಂದ ಅವಕಾಶವಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತಿದ್ದಂತೆ ನೀವು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಪಡೆದುಕೊಂಡು ತಕ್ಷಣವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೌದು ಎಪಿಎಲ್ ಕಾರ್ಡಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಇದೊಂದು ಆಧಾರ್ ಕಾರ್ಡ್ ನೊಂದಿಗೆ ಗುರುತಿನ ಚೀಟಿಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ಇಲ್ಲದೇ ಇರುವವರು ಚಿಂತೆ ಮಾಡಬೇಕಾಗಿಲ್ಲ. ಸ್ವಲ್ಪ ದಿನ ಕಾಯ್ದು ಹೊಸ ರೇಷನ್ ಕಾರ್ಡ್ ಪಡೆದುಕೊಂಡು ಗೃಹ ಲಕ್ಷ್ಮೀ ಯೋಜನೆಗೆ ಸಲ್ಲಿಸಿ ರೂ.2000 ಹಣವನ್ನು ಪಡೆದುಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ !
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಆಪ್ ತಯಾರಾಗಿದೆ ಈಗಾಗಲೇ ಅದನ್ನು ಟೆಸ್ಟ್ ಕೂಡ ಮಾಡಲಾಗಿದೆ ನಾಗರಿಕರು ಕೇವಲ ಎರಡರಿಂದ ಮೂರು ನಿಮಿಷದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು. ಆಪ್ ಮೂಲಕ ಫಲಾನುಭವಿಗಳು ಉಚಿತ ಅರ್ಜಿ ಸಲ್ಲಿಸಬಹುದು ಮತ್ತು ಮಧುವರ್ತಿಗಳ ಹಾವಳಿ ತಪ್ಪಿಸಲು ಆಪ್ ತಯಾರಿಸಿದ್ದೇವೆ ಎಂದು ಹೇಳಿದರು.
ರೇಷನ್ ಕಾರ್ಡ್ ಆಧಾರಿತ ಗೃಹಲಕ್ಷ್ಮಿ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ
ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಹಂತ 3: ಲೋಗಿನ್ ಅದ ನಂತರ ನಿಮಗೆ ಸರ್ವಿಸ್ ಗಳು ದೊರೆಯುತ್ತದೆ ಅದರಲ್ಲಿ, ಗೃಹಲಕ್ಷ್ಮಿ ಯೋಜನೆ ಫ್ರೀ ಅಪ್ರೂಡ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 4: ನಂತರ ನೀವು ನಿಮ್ಮ ವಯಕ್ತಿಕ ವಿವರಗಳಾದ ಪಡಿತರ ಚೀಟಿ ಸಂಖ್ಯೆ ಹಾಗೂ ಇನ್ನಿತರೆಗಳನ್ನು ಭರ್ತಿ ಮಾಡಿ
ಹಂತ 5: ನಂತರ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಿ. ನಂತರ ಸ್ವಯಂ ಘೋಷಣೆಯನ್ನು ಮಾಡಿ, I agree ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.
ಹಂತ 6: ನಂತರ ಆಧಾರ್ ದೃಢೀಕರಣವನ್ನು ಮಾಡಿಕೊಂಡು ಓಟಿಪಿಯನ್ನು ನೋಂದಾಯಿಸಬೇಕು. ನಂತರ ಸ್ವೀಕೃತಿಯನ್ನು ನೀಡಲಾಗುತ್ತದೆ. ಹೀಗೆ ರೇಷನ್ ಕಾರ್ಡನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಆಧಾರ್ ಕಾರ್ಡ್ ಆಧಾರಿತ ಗೃಹಲಕ್ಷ್ಮಿ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಸೇವಾ ಸಿಂಧುವಿನ ಅಕೌಂಟಿಗೆ ಲಾಗಿನ್ ಆದ ನಂತರ ಆಧಾರ್ ಆಧಾರಿತ ದೃಢೀಕರಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಎಂಬ ಆಯ್ಕೆಯನ್ನು ಮಾಡಿ.
ಹಂತ 2: ನಂತರ ಓಟಿಪಿಯನ್ನು ಹಾಕಿ ಕ್ರೂಢೀಕರಣವನ್ನು ಮಾಡಿಕೊಳ್ಳಬೇಕು
ಹಂತ 3 : ನಂತರ ಮನೆಯ ಯಜಮಾನಿಯ ವಿವರಗಳನ್ನು ಹಾಕಬೇಕು, ಹಾಗೆಯೇ ನಿಮ್ಮ ಭಾವಚಿತ್ರವನ್ನು ಕೂಡ ಕೇಳಲಾಗುತ್ತದೆ.
ಹಂತ 4: ಮುಂದುವರೆದು ಕುಟುಂಬ ಸದಸ್ಯರ ವಿವರಗಳನ್ನು ನೋಂದಣಿ ಮಾಡಬೇಕು.
ಹಂತ 5: ನಂತರ ಘೋಷಣೆಯನ್ನು ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹೀಗೆ ಎರಡು ವಿಧಾನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಡೆಮೋ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಈ ಟೆಸ್ಟಿಂಗ್ ವಿಧಾನಗಳು ಯಶಸ್ವಿಯಾದ ನಂತರ ಅಧಿಕೃತವಾಗಿ ಸರ್ಕಾರದಿಂದ ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇಂತಹ ಖುಷಿಯ ಸಮಾಚಾರವನ್ನು, ಹಾಗೆಯೆ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ