ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ದಿನಾಂಕವನ್ನು ಗೊತ್ತು ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಇದಕ್ಕೆ ಬೇಕಾದ ದಾಖಲೆಗಳು, ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅಂತೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಯಿತು :
Application for Gruhalakshmi Yojana started: ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರೂ.2000 ಗಳನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದರು. ಈ ಕಾಯುವಿಕೆಗೆ ಇಂದು ತೆರೆ ಬಿದ್ದಿದೆ. ಇಂದಿನಿಂದ ಅಂದರೆ ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗಿದೆ. ಮೈಸೂರಿನ ತಾಯಿಯಾದ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಖುದ್ದಾಗಿ ಇದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು 27ರಿಂದ ಸಲ್ಲಿಸಬಹುದು, ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಹಣವನ್ನು ಖರ್ಚು ಮಾಡುವ ಅವಶ್ಯಕತೆ ಇಲ್ಲ. ಗೃಹಲಕ್ಷ್ಮಿಯ ಅರ್ಜಿಯನ್ನು ಸಲ್ಲಿಸಲು ಆಪ್(App) ಅನ್ನು ಬಿಡುಗಡೆ ಮಾಡಲಾಗಿದೆ. ಅದರಿಂದಲೇ ಒಂದು ರೂಪಾಯಿಯ ಖರ್ಚು ಕೂಡ ಇಲ್ಲದೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಿ ಕೊಡಲಾಗುತ್ತಿದೆ ಎಂದು ಮೈಸೂರಿನಲ್ಲಿ ಹೇಳಿದರು.
ಈ ಮಾಹಿತಿ ಜೊತೆಗೆ, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ. ಹಣ ಡೆಪಾಸಿಟ್ ಮಾಡಲಾಗುತ್ತೆ ಎಂದು ಕೂಡ ಸ್ಪಷ್ಟಪಡಿಸಿದರು. ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರು ಉತ್ಸಾಹದಿಂದ ಓಡಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರಲೆಂದು ಹರಿಕೆಯನ್ನು ಹೊತ್ತಿದ್ದ ಅವರು ಹರಕೆಯನ್ನು ತೀರಿಸಲು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದರು ಹಾಗೆಯೇ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲೆಂದು ಕೂಡ ದೇವಿ ಹತ್ತಿರ ಪ್ರಾರ್ಥನೆಯನ್ನು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಆನ್ಲೈನ್ ಮೂಲಕ ಪ್ರತ್ಯೇಕ ಆ್ಯಪ್ ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಎಂದು ತಿಳಿಸಿದ್ದಾರೆ.
ದಾಖಲಾತಿಗಳು:
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಫೋಟೋ
ರೇಷನ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ:
ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
GST ಪಾವತಿ ಮಾಡುವ ಕುಟುಂಬಗಳು
APL, BPL ಕಾರ್ಡ್ ಹೊಂದಿರದ ಕುಟುಂಬಗಳು
ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ
ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ
ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ