ಕರ್ನಾಟಕದಲ್ಲಿ ವ್ಯಾಪಕ ಜನಪ್ರಿಯತೆಯನ್ನು ಗಳಿಸಿರುವ ಈ ಯೋಜನೆಯು ನೇರ ಲಾಭ ವರ್ಗಾವಣೆ (ಡಿಬಿಟಿ) ಅರ್ಹ ಫಲಾನುಭವಿಗಳಿಗೆ ಪ್ರತಿ ಕಂತಿಗೆ ರೂ.2,000 ರಂತೆ ಇಲ್ಲಿಯವರೆಗೆ 15 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಒಟ್ಟು ರೂ. 30,000 ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಹಾಗೂ 14 ಮತ್ತು 15ನೇ ಕಂತಿನ ಒಟ್ಟು ನಾಲ್ಕು ಸಾವಿರ ರೂಪಾಯಿ ಜಮಾ ಆಗುವ ಕುರಿತು ಬಿಗ್ ಅಪ್ಡೇಟ್ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ₹2,000 ಗೃಹಿಣಿಯರ ಖಾತೆಗೆ ಜಮಾ!
ಈಗಾಗಲೇ ಹಾವೇರಿ ಜಿಲ್ಲೆಯಲ್ಲಿ ಹಲವಾರು ಮಹಿಳೆಯರಿಗೆ ಇದೇ ತಿಂಗಳು 2000 ಹಣ ಜಮಾ ಆಗಿರುವ ಡಿ ಬಿ ಟಿ ಸ್ಟೇಟಸ್ ಅನ್ನು ನೀವು ಕೆಳಗೆ ಗಮನಿಸಬಹುದು. ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಈಗಾಗಲೇ ಒಂದು ವರ್ಷ ಆಗುತ್ತಿದ್ದು. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಈಗಾಗಲೇ ರಾಜ್ಯದ 1.18 ಕೋಟಿ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಪಡೆಯುತ್ತಿದ್ದಾರೆ. ಇನ್ನು ಹಲವು ಜನರಿಗೆ ಹಣ ಬಂದು ತಲುಪಿಲ್ಲ ಎನ್ನುವ ಆರೋಪಗಳಿದ್ದು. ಅಂತಹ ಫಲಾನುಭಗಳು ನೀವು ನೀಡಿರುವ ದಾಖಲೆಗಳು ಸರಿಯಾಗಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಿರುವ ಮಹಿಳೆಯರ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಇದೆಲ್ಲವೂ ಸರಿ ಇದ್ದರೆ ಮಾತ್ರ ಹಣ ಬರುತ್ತದೆ.
ಇನ್ನೇನು ಜನವರಿ ತಿಂಗಳ 16ನೇ ಕಂತಿನ ಹಣವನ್ನು ಇದೇ ಬರುವ 12ನೇ ತಾರೀಕಿಗೆ ಜಮಾ ಮಾಡಲಾಗುವುದು ಎಂದು ಹೇಳಲಾಗುತ್ತಿದೆ.
ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.
ಈಗಾಗಲೇ ಡಿಸೆಂಬರ್ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ವರ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 12 ಮತ್ತು 13ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !
ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App: Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.