ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಗೃಹಲಕ್ಷ್ಮೀ ಯೋಜನೆಯ 2000 ರೂಪಾಯಿ ಸಹಾಯಧನ 2ನೇ ಕಂತು ಬಿಡುಗಡೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಮಹಿಳೆಯರ ಕೈಗೆ ಹಣ ಸಿಕ್ಕಿದ್ದು, ಬಾಕಿ ಇರುವ ಕಡೆಗಳಲ್ಲಿ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಇನ್ನು 3ನೇ ಕಂತಿನ ಹಣದ ಬಗ್ಗೆ & ಇದುವರೆಗೂ ಹಣ ಬರದೇ ಇರುವ ಪಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಆಗುವ ದಿನಾಂಕದ ಬಗ್ಗೆ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇದುವರೆಗೂ ಹಣ ಬರದೇ ಇದ್ದವರಿಗೆ ಒಟ್ಟಿಗೆ 6 ಸಾವಿರ ರೂ. ಖಾತೆಗೆ ಬರುತ್ತೆ
ಬುಧವಾರ ಬೆಂಗಳೂರಿನ ಮಲ್ಲೇಶ್ವರಂ ನ ಬೆಂಗಳೂರು ಒನ್ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡು ಇದುವರೆಗೂ ಹಣ ಬರದೇ ಇರುವ ಫಲಾನುಭವಿಗಳು ಚಿಂತೆ ಮಾಡಬೇಕಿಲ್ಲ, ಮೂರು ತಿಂಗಳ ಒಟ್ಟು ಬಾಕಿಯಾದ 6000 ರೂಪಾಯಿಯನ್ನು ಪೂರ್ಣವಾಗಿ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು. ದೀಪಾವಳಿ ಹಬ್ಬದ ವೇಳೆಗೆ ಅಥವಾ ಮುಂದಿನ 15 ದಿನಗಳೊಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು.ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದು ತಿಳಿಸಿದರು. ಇದರ ಜೊತೆಗೆ ‘1902’ ಹೆಲ್ಪ್ ಲೈನ್ ನಂಬರ್ ಇದ್ದು, ಇದಕ್ಕೆ ಕೆರೆಮಾಡಿ ಮಹಿಳೆಯರು ಮಾಹಿತಿಯನ್ನ ಪಡೆದುಕೊಳ್ಳಬಹುದು ಎಂದರು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ