ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಎಲ್ಲಾ ಮನೆಯ ಯಜಮಾನರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಇನ್ನೂ ಬಂದಿಲ್ಲವಾದರೆ, ಹಣ ಬರಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮೀ (Gruhalakshmi Scheme) ಯೋಜನೆಯ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡುವ ಈ ಯೋಜನೆಗೆ ರಾಜ್ಯದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 1.1 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಯೋಜನೆ ಜಾರಿಯಾಗಿ ಒಂದು ತಿಂಗಳು ಕಳೆದರೂ ಲಕ್ಷಾಂತರ ಮಹಿಳೆಯರ ಬ್ಯಾಂಕ್ ಖಾತೆಗೆ (Bank Account) ಹಣ ಬಂದಿಲ್ಲ. ಇಷ್ಟಕ್ಕೂ ಗೃಹಲಕ್ಷ್ಮೀ ಖಾತೆಗೆ ಹಣ ಬಾರದೇ ಇದ್ದ ಮಹಿಳೆಯರು ಏನು ಮಾಡ್ಬೇಕು ಎಂಬ ಆತಂಕಕ್ಕೆ ಇಲ್ಲಿದೆ ಉತ್ತರ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
1) ಮೊದಲು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಟೇಟಸ್ ಪರಿಶೀಲಿಸಿ.
ಈ ಕೆಳಗಿನಂತೆ ನಿಮಗೆ ಇದುವರೆಗೂ ಮೆಸೇಜ್ ಬಂದಿಲ್ಲವಾದರೆ, ಖಂಡಿತ ನೀವು ನಿಮ್ಮ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬೇಕು, ಹೇಗೆಂದರೆ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಗೃಹಲಕ್ಷ್ಮಿ ಯೋಜನೆಯ ಈ ಸಂಖ್ಯೆಗೆ 8147500500 ಟೆಕ್ಸ್ಟ್ ಮೆಸೇಜ್ ಮಾಡಬೇಕು.
ನಂತರ ಈಗಾಗಲೇ ನೀವು ಅರ್ಜಿ ಸಲ್ಲಿಸಿದರೆ ಕೆಳಗಿನ ರೀತಿ ನಿಮಗೆ ಮರಳಿ ಸಂದೇಶ ಬರುತ್ತದೆ.
ಒಂದು ವೇಳೆ ನೀವು ಅರ್ಜಿ ಸಲ್ಲಿಸದೆ ಇದ್ದಲ್ಲಿ ಅಥವಾ ಅರ್ಜಿ ಸಲ್ಲಿಕೆ ಆಗದೆ ಇದ್ದಲ್ಲಿ ಕೆಳಗಿನ ರೀತಿ ಮರು ಸಂದೇಶ ಬರುತ್ತದೆ. ಹೀಗೆ ಬಂದಾಗ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ
2) ನೀವು ಮೊದಲು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮೂರರಲ್ಲಿ ಕೂಡ ಕುಟುಂಬದ ಮುಖ್ಯಸ್ಥೆಯ ಹೆಸರು ಒಂದೇ ರೀತಿ ಇರಬೇಕು. ಇದನ್ನು ಮೊದಲು ಚೆಕ್ ಮಾಡಿಕೊಳ್ಳಿ. ಉದಾಹರಣೆಗೆ : ರಮಾದೇವಿ ಎಂದು ಆಧಾರ್ ಕಾರ್ಡ್ ನಲ್ಲಿ ಇರುತ್ತೆ, ರೇಷನ್ ಕಾರ್ಡ್ ನಲ್ಲಿ ರಮಾ ಎಂದು ಮಾತ್ರ ಇರುತ್ತದೆ. ಇಂತಹ ತಪ್ಪುಗಳು ಆಗಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಿ.ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು.
3) ಹಣ ವರ್ಗಾವಣೆ ಮಾಡುವಾಗ ಅವರ ಖಾತೆಗಳು ಎರರ್ ಬರುತ್ತಿವೆ ಎನ್ನಲಾಗಿದೆ. ಮಹಿಳೆಯರು ಅವರ ಖಾತೆಗಳನ್ನು ಬಳಕೆ ಮಾಡದ ಕಾರಣ ಅವುಗಳು ಕ್ಲೋಸ್ ಆಗಿದೆ. ಹಾಗಾಗಿ ಎರರ್ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್ ಖಾತೆ ರದ್ದಾಗಿರುವ ಕಾರಣದಿಂದ ಅಂತಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಹಣ ಬಾರದ ಮಹಿಳೆಯರು ಕೂಡಲೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ಪರಿಶೀಲನೆ ಮಾಡಿಸಿ.
ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper
ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.
ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.
ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.
ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.
4) ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಆಗಿದೆಯೇ ಎನ್ನುವುದನ್ನು ಧೃಡಪಡಿಸಿಕೊಳ್ಳಬೇಕು. ಹಾಗೂ ನಿಮ್ಮ ರೇಷನ್ ಕಾರ್ಡ್ ಸಕ್ರಿಯವಾಗಿದೆ ಎನ್ನುವುದನ್ನು ಪರಿಶೀಲಿಸಿಕೊಳ್ಳಬೇಕು. ಇ ಕೆವೈಸಿ ಆಗದೇ ಇದ್ದರೆ ಹತ್ತಿರದ ಸೇವಾ ಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗೆ ಹೋಗಿ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಮತ್ತು ಬಯೋಮೆಟ್ರಿಕ್ ಮಾಹಿತಿ ನೀಡಿ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಕೊಳ್ಳಿ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ