ಎಲ್ಲರಿಗೂ ನಮಸ್ಕಾರ ಇವತ್ತಿನ ವರದಿಯಲ್ಲಿ, ಎಲ್ಲಾ ಮನೆಯ ಯಜಮಾನರಿಗೆ ಗೃಹಲಕ್ಷ್ಮಿ ಯೋಜನೆಯ 2000 ರೂಪಾಯಿ ಇನ್ನೂ ಬಂದಿಲ್ಲವಾದರೆ, ಹಣ ಬರಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ.ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿ ತಿಂಗಳಗಳು ಕಳೆದಿವೆ. ಈಗಾಗಲೇ ಬಹುತೇಕ ಮಂದಿಗೆ ಎರಡನೇ ಕಂತಿನ ಹಣ ಕೂಡಾ ಸಂದಾಯವಾಗುತ್ತಿದೆ. ಆದರೆ, ಕೆಲವರಿಗೆ ಮೊದಲ ತಿಂಗಳ (ಆಗಸ್ಟ್) ಹಣವೇ ಸಂದಾಯವಾಗಿಲ್ಲ. ಇದರಿಂದ ಮಹಿಳೆಯರು ಆತಂಕಕ್ಕೆ ಒಳಗಾಗಿದ್ದು, ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಯೋಚನೆ ಮಾಡ್ತಿದ್ದೀರಾ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೆಳಗೆ ಕೊಟ್ಟಿದ್ದೇವೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
80 ಲಕ್ಷಕ್ಕೂ ಅಧಿಕ ಜನರಿಗೆ ಹಣ ಜಮೆ
ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 80 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ. ಉಳಿದಂತೆ ಎರಡನೇ ಕಂತಿನ ಹಣ ಯಾವಾಗ ಅಂತ ಹಲವು ಮಂದಿ ಕಾಯುತ್ತಿದ್ದಾರೆ. ನೀವು ಯಾವಾಗ ಅರ್ಜಿ ಸಲ್ಲಿಕೆ ಮಾಡುತ್ತೀರಿ ಆ ತಿಂಗಳಿನಿಂದ ಮಾತ್ರ ಹಣ ಸಂದಾಯ ಆಗುತ್ತೆ. ಆಗಸ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡದೆ ಸೆಪ್ಟೆಂಬರ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರೆ ಆ ತಿಂಗಳಿನಿಂದ ಮಾತ್ರ ಹಣ ಬರುತ್ತದೆ. ಆಗಸ್ಟ್ ತಿಂಗಳಿನಲ್ಲಿ ಅರ್ಜಿ ಸಲ್ಲಿಕೆ ಮಾಡಿ ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ ಮೊದಲ ಕಂತಿನ ಹಣವೂ ಸೇರಿ ಒಟ್ಟು 4 ಸಾವಿರ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಇದುವರೆಗೂ ಹಣ ಬರದೇ ಇದ್ದವರು ಏನು ಮಾಡಬೇಕು?
1) ಮೊದಲು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಟೇಟಸ್ ಪರಿಶೀಲಿಸಿ.
ನೀವು ನಿಮ್ಮ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬೇಕು, ಹೇಗೆಂದರೆ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಗೃಹಲಕ್ಷ್ಮಿ ಯೋಜನೆಯ ಈ ಸಂಖ್ಯೆಗೆ 8147500500 ಟೆಕ್ಸ್ಟ್ ಮೆಸೇಜ್ ಮಾಡಬೇಕು.ನಂತರ ನಿಮ್ಮ ಮೊಬೈಲ್ಗೆ ಒಂದು ಮರು ಸಂದೇಶ ಬರುತ್ತದೆ, ಒಂದು ವೇಳೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿ ಸಂಖ್ಯೆ ಮತ್ತು ನೀವು ಅರ್ಜಿ ಸಲ್ಲಿಸಿದ ಬಗ್ಗೆ ಮಾಹಿತಿ ದೊರೆಯುತ್ತದೆ, ಇಲ್ಲವಾದರೆ ನಿಮ್ಮ ಅರ್ಜಿ ಸಲ್ಲಿಕೆ ಬಾಕಿ ಇದೆ ಎಂದು ಮೆಸೇಜ್ ಬರುತ್ತದೆ. ಒಂದು ವೇಳೆ ನಿಮ್ಮ ಅರ್ಜಿ ಬಾಕಿ ಇದ್ದರೆ ನೀವು ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ
2) ನೀವು ಮೊದಲು ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಮೂರರಲ್ಲಿ ಕೂಡ ಕುಟುಂಬದ ಮುಖ್ಯಸ್ಥೆಯ ಹೆಸರು ಒಂದೇ ರೀತಿ ಇರಬೇಕು. ಇದನ್ನು ಮೊದಲು ಚೆಕ್ ಮಾಡಿಕೊಳ್ಳಿ. ಉದಾಹರಣೆಗೆ : ರಮಾದೇವಿ ಎಂದು ಆಧಾರ್ ಕಾರ್ಡ್ ನಲ್ಲಿ ಇರುತ್ತೆ, ರೇಷನ್ ಕಾರ್ಡ್ ನಲ್ಲಿ ರಮಾ ಎಂದು ಮಾತ್ರ ಇರುತ್ತದೆ. ಇಂತಹ ತಪ್ಪುಗಳು ಆಗಿದ್ದಲ್ಲಿ ಕೂಡಲೇ ಸರಿಪಡಿಸಿಕೊಳ್ಳಿ.ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು.
3) ಹಣ ವರ್ಗಾವಣೆ ಮಾಡುವಾಗ ಕೆಲವರ ಖಾತೆಗಳು ಎರರ್ ಬರುತ್ತಿವೆ ಎನ್ನಲಾಗಿದೆ. ಮಹಿಳೆಯರು ಅವರ ಖಾತೆಗಳನ್ನು ಬಳಕೆ ಮಾಡದ ಕಾರಣ ಅವುಗಳು ಕ್ಲೋಸ್ ಆಗಿದೆ. ಹಾಗಾಗಿ ಎರರ್ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್ ಖಾತೆ ರದ್ದಾಗಿರುವ ಕಾರಣದಿಂದ ಅಂತಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಹಣ ಬಾರದ ಮಹಿಳೆಯರು ಕೂಡಲೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ಪರಿಶೀಲನೆ ಮಾಡಿಸಿ.
ಆಧಾರ್ ಕಾರ್ಡ್ ಎಷ್ಟು ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ ಎಂದು ಚೆಕ್ ಮಾಡಿಕೊಳ್ಳುವ ಸುಲಭ ವಿಧಾನ ಇಲ್ಲಿದೆ
ಆಗಸ್ಟ್ 30 ವೇಳೆಗೆ ಅರ್ಜಿ ಸಲ್ಲಿಕೆ ಮಾಡಿದ್ದ ಒಂದು ಕೋಟಿ 10 ಲಕ್ಷ ಜನರಿಗೆ ಹಣ ಸಂದಾಯ ಮಾಡಲು ಸರ್ಕಾರ ನಿರ್ಧಾರ ಮಾಡಿತ್ತು. ಇದರಂತೆ ಇಲ್ಲಿವರೆಗೂ 92 ಲಕ್ಷ ಅರ್ಹ ಫಲಾನುಭವಿಗಳಿಗೆ ಯೋಜನೆ ಮೂಲಕ ಹಣ ತಲುಪಿದೆ. ಇನ್ನೂ 18 ಲಕ್ಷದಷ್ಟು ಮನೆಯೊಡತಿಯರಿಗೆ ಇನ್ನೂ ಹಣ ಬಂದಿಲ್ಲ.
ನೇರವಾಗಿ ತೆರಳಿ ವಿಚಾರಿಸಿ
ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಜಮಾ ಆಗದಿದ್ದರೆ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕಿ ಮಾಹಿತಿ ನೀಡಿದೆ.
ಇಂತಹ ಉತ್ತಮವಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
Ration card update – ರೇಷನ್ ಕಾರ್ಡ್‌ದಾರರಿಗೆ ಇಂದಿನಿಂದ ಹೊಸ ರೂಲ್ಸ್ ಜಾರಿ : ಕೇಂದ್ರದ ಮಹತ್ವದ ಘೋಷಣೆ
Gruhalakshmi – ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಕಾಲಾವಕಾಶ – ಯಾವ ಜಿಲ್ಲೆಗೆ ಯಾವ ದಿನ ಇಲ್ಲಿದೆ ಕಂಪ್ಲೀಟ್ ಮಾಹಿತಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ