ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರತಿನಿಧಿಗಳು ಮನೆಗೆ ಬರುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲಾ ತಿಳಿದಿರುವಂತೆ ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯವಾಗಲೆಂದು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡುವ ಕಾರ್ಯಚರಣೆ ನಡೆಯುತ್ತಿತ್ತು. ಈಗ ಪ್ರಜಾಪ್ರತಿನಿಧಿಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ನೇಮಕ ಮಾಡಿ ಆಗಿದೆ. ಹಾಗಾಗಿ ಇದೇ ಆಗಸ್ಟ್ ತಿಂಗಳಿನಿಂದ ಪ್ರಜಾಪ್ರತಿನಿಧಿಗಳು ಎಲ್ಲರ ಮನೆ ಮನೆಗೆ ಬಂದು ಅರ್ಜಿಯನ್ನು ಸಲ್ಲಿಸಿ ಕೊಡುತ್ತಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಇನ್ನು ಮನೆಯಿಂದಲೇ ಹಾಕಬಹುದು :
ನಿಮಗೆಲ್ಲರಿಗೂ ತಿಳಿದಿರುವಂತೆ ಜುಲೈ ನ ಅಂತ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಸಹಾಯ ಮಾಡಲೆಂದು ಪ್ರಜಾ ಪ್ರತಿನಿಧಿಗಳ ಆಯ್ಕೆಯನ್ನು ಮಾಡಲಾಗುತ್ತಿತ್ತು. ಈಗ ಎಲ್ಲಾ ಜಿಲ್ಲೆಗಳಲ್ಲಿ, ಆಯಾ ಮಂಡಳಿಗೆ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಗಿದಿದೆ. ಇದೀಗ ಆಗಸ್ಟ್ 1ನೆ ತಾರೀಖಿನಿಂದ ಸರ್ಕಾರ ಒಂದು ಹೆಜ್ಜೆ ಮುಂದಿಟ್ಟಿದ್ದು ಸೇವಾ ಪ್ರತಿನಿಧಿಗಳು ಅರ್ಜಿದಾರರ ಮನೆಗಳಿಗೆ ಬಂದು ಅರ್ಜಿಯನ್ನ ಸ್ವೀಕಾರ ಮಾಡುವ ಅಥವಾ ಸ್ಥಳದಲ್ಲಿಯೇ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ ಅಂತ ಹೇಳಲಾಗ್ತಿದೆ. ಹೌದು ಗ್ರಾಮೀಣ ಭಾಗದಲ್ಲಿ ಯೋಜನೆಯ ಲಾಭ ಪಡೆದುಕೊಳ್ಳುವಲ್ಲಿ ಫಲಾನುಭವಿಗಳು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಮಧ್ಯೆ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಸುಲಭ ಮಾಡಿಕೊಡುವ ಉದ್ದೇಶದಿಂದ ಇದೀಗ ಸೇವಾ ಪ್ರತಿನಿಧಿಗಳು ಮನೆ ಬಾಗಿಲಿಗೆ ಬರಲಿದ್ದಾರೆ.
ಅರ್ಜಿಯನ್ನು ಸಲ್ಲಿಸಲು ಪ್ರಜಾಪ್ರತಿನಿಧಿಗಳು ಮನೆಗೆ ಬಂದಾಗ ನೀವು ಏನೇನು ಸಿದ್ಧಪಡಿಸಿಕೊಳ್ಳಬೇಕು?:
ಗ್ರಾಮ್ ಒನ್ ಅಥವಾ ಬೇರೆ ಸರ್ಕಾರಿ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಲಾಗುತ್ತಿತ್ತೋ ಹಾಗೆಯೇ ಪ್ರಜಾಪ್ರತಿನಿಧಿಗಳು ನಿಮ್ಮ ಮನೆಗೆ ಅರ್ಜಿಯನ್ನು ಸಲ್ಲಿಸಲು ಬರುತ್ತಾರೆ. ಅವರು ಬಂದಾಗ ನೀವು ರೇಷನ್ ಕಾರ್ಡ್ ನಂಬರ್ ಹಾಗೂ ಆಧಾರ್ ಕಾರ್ಡ್ ನಂಬರ್ ಅನ್ನ ನೀಡಬೇಕು ನಂತರ EKYC ಆಗಿರುವ ನಂಬರ್ ಗೆ ಬರುವ ಒಟಿಪಿಯನ್ನ ಹೇಳಿ ಅರ್ಜಿಯನ್ನ ಸಲ್ಲಿಸಬಹುದು.
ಪ್ರಜಾಪ್ರತಿನಿಧಿಗಳನ್ನು ಹೇಗೆ ಗುರುತಿಸುವುದು :
ಮನೆಗೆ ಬಂದ ವ್ಯಕ್ತಿಯು ಪ್ರಜಾಪ್ರತಿನಿಧಿಯೇ ಅಥವಾ ಬೇರೆ ಯಾರು ಎಂಬುದನ್ನು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೀವು ಬ್ಯಾಂಕಿನ ಡೀಟೇಲ್ಸ್ ಹಾಗೂ ಇನ್ನಿತರ ವಯಕ್ತಿಕ ಮಾಹಿತಿಗಳನ್ನು ತಿಳಿಸುವುದರಿಂದ ಬಂದ ವ್ಯಕ್ತಿಯು ಪ್ರಜಾಪ್ರತಿನಿಧಿಯೇ ಎಂದು ಒಮ್ಮೆ ಕನ್ಫರ್ಮ್ ಮಾಡಿಕೊಳ್ಳಿ. ಎಲ್ಲಾ ಪ್ರಜಾಪ್ರತಿನಿಧಿಗಳಿಗೆ ಸರ್ಕಾರದಿಂದ ಒಂದು ಐಡಿ ಕಾರ್ಡ್ ಅನ್ನು ನೀಡಲಾಗಿರುತ್ತದೆ. ಅಷ್ಟೇ ಅಲ್ಲದೆ ಲಾಗಿನ್ ಆಗಲು ID ಹಾಗೂ ಪಾಸ್ವರ್ಡ್ ಅನ್ನು ಕೂಡ ಅವರಿಗೆ ನೀಡಲಾಗಿರುತ್ತದೆ. ಆದ್ದರಿಂದ ನೀವು ಅವರ ಐಡಿ ಕಾರ್ಡ್ಗಳನ್ನು ನೋಡಿ ಇವರೇ ಪ್ರಜಾ ಪ್ರತಿನಿಧಿಗಳು ಎಂದು ಗುರುತಿಸಬಹುದಾಗಿದೆ. ಇದರಿಂದಾಗಿ ನಿಮ್ಮ ಮಾಹಿತಿಗಳು ದುರುಪಯೋಗ ಪಡಿಸಿಕೊಳ್ಳುವುದನ್ನು ಕಾಪಾಡಿಕೊಳ್ಳಬಹುದು. ಪ್ರತಿ ಸಾವಿರ ರೇಷನ್ ಕಾರ್ಡುಗಳಿಗೆ ಎರಡು ಪ್ರಜಾಪ್ರತಿನಿಧಿಗಳನ್ನು ನೇಮಿಸಿರುತ್ತಾರೆ. ಪ್ರತಿನಿಧಿಗಳಿಗೆ ನೀಡಿದ ರೇಷನ್ ಕಾರ್ಡ್ ದಾರರಿಗೆ ಮಾತ್ರ ಅವರು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇನ್ನು ಮುಂದೆ ಸರ್ಕಾರಿ ಕೇಂದ್ರಗಳಲ್ಲಿ ಗಂಟೆಗಟ್ಟಲೆ ಕ್ಯೂ ನಿಲ್ಲುವ ಪರಿಸ್ಥಿತಿ ಇರುವುದಿಲ್ಲ. ಮನೆಯಲ್ಲಿಯೇ ಕುಳಿತುಕೊಂಡು ಆರಾಮಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ