‘ಗೃಹಲಕ್ಷ್ಮಿ’ ಯೋಜನೆಗೆ ಒಂದು ವರ್ಷದ ಸಂಭ್ರಮ, 12ನೇ ಕಂತಿನ ಬಿಗ್ ಅಪ್ಡೇಟ್ ಇಲ್ಲಿದೆ!

IMG 20240901 WA0006

ಗೃಹಿಣಿಯರಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಯೋಜನೆಗೆ ಒಂದು ವರ್ಷ. ಗೃಹಿಣಿಯರ ಖಾತೆಗೆ 25 ಸಾವಿರ ಕೋಟಿ ರೂ. ವರ್ಗಾವಣೆ.

ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ(BPL & APL ration card) ಕುಟುಂಬದ ಯಜಮಾನಿಯು ಈ ಯೋಜನೆಗೆ ಅರ್ಹಳಾಗಿರುತ್ತಾಳೆ. ರೇಷನ್ ಕಾರ್ಡ್ (Ration card) ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಉದ್ದೇಶ (Purpose) :

ಆರ್ಥಿಕವಾಗಿ ಸಬಲೀಕರಣ : ರಾಜ್ಯದ
ಮಹಿಳೆಯರಯನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು (State government) ಈ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ಕುಟುಂಬದ ನಿರ್ವಹಣೆಗೆ ಸಹಾಯ : ಪ್ರತಿ ಕುಟುಂಬದ ನಿರ್ವಹಣೆಯಲ್ಲಿ ಮನೆ ಒಡತಿಯ ಪಾತ್ರ ಬಹು ಮುಖ್ಯವಾಗಿರುತ್ತದೆ. ಆದ್ದರಿಂದ ಮನೆ ಯಜಮಾನಿ ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ” ಯನ್ನು ರೂಪಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ :

2023ರ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ್ ರಾಹುಲ್ ಗಾಂಧಿಯು ಈ ಯೋಜನೆಗೆ ಚಾಲನೆ ನೀಡಿದ್ದರು. ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ಕ್ಕೆ ಒಂದು ವರ್ಷ ಪೂರ್ಣಗೊಂಡಿದ್ದು, ಗೃಹಿಣಿಯರಿಗೆ ಮಾಸಿಕ 2000 ರೂ. ನೀಡುವ ಈ ಯೋಜನೆ ಫಲಾನುಭವಿಗಳ ಖಾತೆಗೆ ಇದುವರೆಗೆ 25,248 ಕೋಟಿ ರೂ. ಜಮಾ ಮಾಡಲಾಗಿದೆ.

ಹಲವು ಪಾವತಿ ದಾರರಿಗೆ ಈ ಯೋಜನೆಗೆ ಸೌಲಭ್ಯ (Facilities) ರದ್ದು :

ಅರ್ಹರು ಈಗಲೂ ಯೋಜನೆಯ ಫಲಾನುಭವಿಗಳಾಗಲು ಅವಕಾಶವಿದೆ. ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಮಹಿಳೆಯರಿಗೆ ಯೋಜನೆ ಪ್ರಯೋಜನ ಸಿಗಲಿದೆ. ಆದಾಯ ತೆರಿಗೆ, ಜಿಎಸ್ ಟಿ (GST) ಪಾವತಿದಾರರು ಸೇರಿದಂತೆ ಶ್ರೀಮಂತರು ಯೋಜನೆಯ ಸೌಲಭ್ಯ ಪಡೆಯದಂತೆ ನಿಯಮಾವಳಿ ರೂಪಿಸಲಾಗಿದೆ.

ಜೂನ್ ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಯಾವಾಗ?

ಗೃಹಲಕ್ಷ್ಮಿ ಯೋಜನೆಯನ್ನು ಶುರು ಮಾಡಿ ಒಂದು ವರ್ಷದ ಸಂಭ್ರಮದಲ್ಲಿರುವ ಈ ಸಮಯದಲ್ಲಿ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತನಾಡಿ, ಈಗಾಗಲೇ ಹಲವಾರು ಜಿಲ್ಲೆಯ ಮಹಿಳೆಯರಿಗೆ ಜೂನ್ ಕಂತಿನ ಹಣ ಜಮೆ ಆಗಿದೆ. ತಾಂತ್ರಿಕ ದೋಷದಿಂದಾಗಿ ಹಣ ಜಮಾ ಆಗುವುದು ತಡವಾಗಿದ್ದೂ ಈಗ ಎಲ್ಲ ಸಮಸ್ಯೆಗಳು ಬಗೆಹರಿದಿದೆ. ಜೂನ್-ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ರದ್ದು ಮಾಡುವುದಿಲ್ಲ ಎಂದು ಭರವಸೆಯನ್ನು ನೀಡಿದ್ದಾರೆ.

ಈ ಯೋಜನೆಯ ಉಪಯೋಗವನ್ನು ಪಡೆಯುತ್ತಿರುವ ಫಲಾನುಭವಿಗಳ ಪಟ್ಟಿ ಹೀಗಿದೆ :

ಬಜೆಟ್ ನಲ್ಲಿ 28,608 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಯೋಜನೆಗೆ ಹಣಕಾಸು ಮುಗ್ಗಟ್ಟು ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 9.83 ಲಕ್ಷ ಫಲಾನುಭವಿಗಳಿದ್ದು, ಪ್ರಥಮ ಸ್ಥಾನದಲ್ಲಿದೆ. 1.15 ಲಕ್ಷ ಫಲಾನುಭವಿ ಮಹಿಳೆಯರು ಇರುವ ಕೊಡಗು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 8.20 ಲಕ್ಷ ಫಲಾನುಭವಿಗಳಿದ್ದಾರೆ.

ಈಗಲೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ (Application) ಸಲ್ಲಿಸಬಹುದು :

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಸಿರುವ ಅರ್ಹ ಮನೆ ಒಡತಿಯರಿಗೆ ಈಗಾಗಲೇ 7 ಕಂತಿನ 14,000 ರೂಪಾಯಿ ಜಮಾ ಮಾಡಲಾಗಿದೆ. ನೀವು ಕೂಡ ಅರ್ಹರಾಗಿದ್ದರೆ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆದುಕೊಳ್ಳಬಹುದು.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!