ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್..! ಜುಲೈ-ಆಗಸ್ಟ್ ಕಂತಿನ ಹಣ ಈ ದಿನ ಬಿಡುಗಡೆ! ಇಲ್ಲಿದೆ ಡೀಟೇಲ್ಸ್

IMG 20241003 WA0000

ಸರ್ಕಾರದಿಂದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್,  ಜುಲೈ-ಆಗಸ್ಟ್ ಕಂತಿನ ಹಣ ಬಿಡುಗಡೆ ಬಗ್ಗೆ ಇಲ್ಲಿದೆ ಮಾಹಿತಿ..!

ರಾಜ್ಯದ ಮಹಿಳೆಯರ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು (Gruha Lakshmi Scheme Karnataka) ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಸರ್ಕಾರವು ಈ ಯೋಜನೆಯಡಿಯಲ್ಲಿಕುಟುಂಬದ ಯಜಮಾನಿಯ ಖಾತೆಗೆ ಮಾಸಿಕ ರೂ. 2000/- ಹಣ ವಿತರಣೆ ಮಾಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಈಗಾಗಲೇ 11 ಕಂತಿನ ಹಣ ಮಹಿಳೆಯರು ಪಡೆದಿದ್ದಾರೆ :

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮೊದಲು ನೀಡಿದ್ದ ಆಶ್ವಾಸನೆಯಂತೆ ಪಂಚ ಗ್ಯಾರಂಟಿ ಯೋಜನೆಗಳಲ್ಲಿ (guarantee schemes) ಒಂದಾಗಿರುವ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ ಇದುವರೆಗೂ ಗೃಹಲಕ್ಷ್ಮಿ ಫಲಾನುಭವಿಗಳು ಪ್ರತೀ ತಿಂಗಳಿಗೆ 2000 ದಂತೆ 11 ಕಂತಿನ ಹಣ ಪಡೆದಿದ್ದಾರೆ. ಇದು ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಜೀವನ ನಡೆಸಲು ಅಥವಾ ಮನೆಯ ನಿರ್ವಹಣೆಗೆ ಬಹಳ ಉಪಯುಕ್ತವಾಗಿದೆ.

ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಜಮಾದ ಬಗ್ಗೆ ಸರ್ಕಾಕ್ಕೆ ಮನವಿ  :

ಹೌದು ಇದೀಗ ಗೃಹಲಕ್ಷ್ಮಿ ಯೋಜನೆಯ ಜುಲೈ ಹಾಗೂ ಆಗಸ್ಟ್ ತಿಂಗಳ  ಹಣ ಯಾವಾಗ ಬರುತ್ತೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಸರ್ಕಾರವನ್ನು ಕೇಳುತ್ತಾ ಬಂದಿದ್ದಾರೆ. ಆದರೆ ಇದೀಗ ಗೃಹಲಕ್ಷ್ಮಿಯರಿಗೆ ಸರ್ಕಾರ (government) ಗುಡ್ ನ್ಯೂಸ್ ನೀಡಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು  ತಿಳಿದುಕೊಳ್ಳೋಣ ಬನ್ನಿ.

ಜುಲೈ ಹಾಗೂ ಆಗಸ್ಟ್ ತಿಂಗಳಿನ ಹಣ ಅಕ್ಟೋಬರ್ ತಿಂಗಳಿನಲ್ಲಿ ಜಮಾ ಆಗಲಿದೆ :

ಮಹಿಳಾ ಮತ್ತು ಮಕ್ಕಳ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಅವರು, ಎರಡು ಕಂತಿನ ಹಣವನ್ನು ಏಕಕಾಲದಲ್ಲಿ ನೀಡುವುದಾಗಿ ಮಾಹಿತಿ ನೀಡಿದ್ದರು. ಆದ್ರೆ ಅದು ಸಾಧ್ಯವಿಲ್ಲ. ಈಗ ಎರಡು ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತದೆ ಎಂದು ಫಲಾನುಭವಿಗಳು ಕಾಯುತ್ತಿದ್ದಾರೆ. ಮಾಹಿತಿಯ ಪ್ರಕಾರ ಜುಲೈ ಹಾಗೂ ಆಗಸ್ಟ್ ತಿಂಗಳಿನ ಹಣ ಅಕ್ಟೋಬರ್ ತಿಂಗಳಿನಲ್ಲಿ ಫಲಾನುಭವಿಗಳಿಗೆ ದೊರೆಯುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ.

ಜುಲೈ ಹಾಗೂ ಆಗಸ್ಟ್ ತಿಂಗಳಿನ ಹಣ ಆದಷ್ಟು ಬೇಗ ಬಿಡುಗಡೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ :

ಗೃಹಲಕ್ಷ್ಮಿ ಯೋಜನೆ ಬಂದ್ ಆಗುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸ್ಪಷ್ಟಪಡಿಸಿದ್ದಾರೆ. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಆಗಸ್ಟ್ ನಲ್ಲಿ ಜಮಾ ಆಗಿದೆ. ಜುಲೈನಿಂದ ಸೆಪ್ಟೆಂಬರ್‌ವರೆಗೆ ಮೂರು ತಿಂಗಳ ಹಣ ಬಿಡುಗಡೆ ಬಾಕಿಯಿದೆ. ಆದರೆ ಇದೀಗ ಈ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆದಿದ್ದು, ಇದರ ಬಳಿಕ ಆಗಸ್ಟ್ ಹಣವೂ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!