ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿಯ ಹಣವು ಇನ್ನೂ ಅನೇಕ ಮಹಿಳೆಯರಿಗೆ ಏಕೆ ಬಂದಿಲ್ಲ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿನ್ನೆ ಅಂದರೆ ಮಂಗಳವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಯಾವ ಕಾರಣಕ್ಕಾಗಿ ಇನ್ನೂ ಹಣ ಜಮಾ ಆಗಿಲ್ಲ?, ಮತ್ತು ಯಾವಾಗ ಹಣ ಬರುತ್ತದೆ?, ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿಯ ಹಣ ಇನ್ನು ಕೆಲವರಿಗೆ ಯಾಕೆ ಬಂದಿಲ್ಲ?:
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, ಅನೇಕ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಯಾವ ಕಾರಣಕ್ಕಾಗಿ ಹಣ ಬಂದಿಲ್ಲ ಎನ್ನುವ ಗೊಂದಲದಲ್ಲಿರುವ ಇವರಿಗೆ ಸುದ್ದಿಗೋಷ್ಠಿಯ ಮುಖಾಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಈಗಾಗಲೇ ಇಲಾಖೆಯ ವತಿಯಿಂದ ಹಣ ಬಿಡುಗಡೆಯಾಗಿದೆ, ಇಲಾಖೆಯಿಂದ ಬಿಡುಗಡೆಯಾದ ಹಣವು ಬ್ಯಾಂಕುಗಳಿಗೆ ವರ್ಗಾವಣೆಯಾಗುತ್ತದೆ, ನಂತರ ಬ್ಯಾಂಕ್ ಸಿಬ್ಬಂದಿಗಳು ಆಯಾ ಫಲಾನುಭವಿಗಳ ಖಾತೆಗೆ ಹಣವನ್ನು ಜಮಾ ಮಾಡುತ್ತಾರೆ. ಬ್ಯಾಂಕಿನಲ್ಲಿ ಒಂದು ದಿನಕ್ಕೆ ಇಂತಿಷ್ಟು ಹಣವನ್ನು ಜಮಾ ಮಾಡಬೇಕು ಎಂಬ ನಿಯಮವಿರುತ್ತದೆ ಹಾಗಾಗಿ ಎಲ್ಲಾ ಫಲಾನುಭವಿಗಳಿಗೆ ಒಂದೇ ದಿನದಲ್ಲಿ ಹಣವನ್ನು ಖಾತೆಗೆ ವರ್ಗಾವಣೆ ಮಾಡಲು ಆಗುವುದಿಲ್ಲ. ಆದ್ದರಿಂದ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇನ್ನೇನು ಎರಡು ಅಥವಾ ಮೂರು ದಿನಗಳಲ್ಲಿ ಅಂದರೆ ಶನಿವಾರದ ಒಳಗೆ ಎಲ್ಲಾ ಫಲಾನುಭವಿಗಳಿಗೆ ಹಣ ಜಮಾವಾಗುತ್ತದೆ ಎಂದು ಸುದ್ದಿಗೋಷ್ಠಿಯ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ. 59 ಲಕ್ಷ ಫಲಾನುಭವಿಗಳಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.
ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಖಾತೆಗೆ ಹಣವನ್ನು ಏಕೆ ಹಾಕಲು ಆಗುತ್ತಿಲ್ಲ?:
ಈಗಾಗಲೇ 59 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲಾಗಿದ್ದು, ಏಳರಿಂದ ಎಂಟು ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಯ ಅಕೌಂಟ್ ಎರರ್ ತೋರಿಸುತ್ತದೆ. ಈ 8 ಲಕ್ಷ ಫಲಾನುಭವಿಗಳಿಗೆ ಹಣ ಏಕೆ ವರ್ಗಾವಣೆ ಆಗುತ್ತಿಲ್ಲ ಎಂದರೆ, ಅವರು ಹಲವಾರು ವರ್ಷಗಳಿಂದ ಆ ಖಾತೆಯನ್ನು ಬಳಕೆ ಮಾಡದಿರುವುದು ಒಂದು ದೊಡ್ಡ ಸಮಸ್ಯೆಯಾಗಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ನೀಡಿದ ಖಾತೆಯಲ್ಲಿ ಯಾವುದೇ ರೀತಿಯ ವಹಿವಾಟುಗಳು ಇಲ್ಲದೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂತವರ ಖಾತೆಯ ಫಲಾನುಭವಿಗಳ ಹೆಸರುಗಳನ್ನು ಪಟ್ಟಿ ಮಾಡಿ ಆಯಾ ಗ್ರಾಮದ ಆಶಾ ಕಾರ್ಯಕರ್ತರಿಗೆ ಪಟ್ಟಿಯನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಆ ಜನರಿಗೆ ವಿಷಯವನ್ನು ಮುಟ್ಟಿಸಿ, ಖಾತೆಯನ್ನು ಸರಿ ಮಾಡಿಸಿಕೊಳ್ಳುವಂತೆ ಸೂಚಿಸುತ್ತಾರೆ. ನಂತರ ಆ ಏಳರಿಂದ ಎಂಟು ಫಲಾನುಭವಿಗಳಿಗೆ ಗೃಹಲಕ್ಷ್ಮಿಯ ಹಣ ಜಮಾ ಆಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇನ್ನು ಉಳಿದ ಫಲಾನುಭವಿಗಳಿಗೆ ಶನಿವಾರದ ಒಳಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳು ಜಮಾ ಆಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಹಣದ ಜಮಯ್ಯ ಬಗ್ಗೆ ಮಾಹಿತಿಯನ್ನು ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ, ಮುಖ್ಯವಾಗಿ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ