ಈಗಾಗಲೇ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಅವುಗಳು ಈಗ ಜಾಲ್ತಿಯಲ್ಲಿವೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ( Gruhalakshmi Scheme ) ಒಂದಾಗಿದೆ. ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವಾರು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದ್ದು, ಅದರಲ್ಲಿ ಇನ್ನು ಕೆಲವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿಲ್ಲ. ಹಲವಾರು ತಾಂತ್ರಿಕ ಸಮಸ್ಯೆಗಳು ಇದ್ದವು. ಆದರೆ ಇದೀಗ ಆ ಎಲ್ಲ ಸಮಸ್ಯೆಗಳನ್ನು ಬಗೆ ಹರಿಸಿ ಹಣ ಜಮಾ ಆಗುವಂತೆ ಮಾಡಿದೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ರೂಲ್ಸ್ ಗಳನ್ನು ( New Rules in Gruhalakshmi Scheme ) ತರಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮುಂದಿನ ಕಂತಿನ ಹಣ ಫಲಾನುಭವಿಗಳ ಖಾತೆಗೆ ಲಭ್ಯವಿದೆ :
ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಹಿಂದಿನ ಕಂತಿನ ಹಣ ಯಜಮಾನಿಯರ ಖಾತೆಗೆ ಜಮಾ ಆಗಿದೆ. ಒಟ್ಟಾರೆ 8000 ರೂಪಾಯಿ ಹಣವನ್ನು ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ಕಂತಿನ ಹಣ ಸದ್ಯದಲ್ಲಿಯೇ ಗೃಹಿಣಿಯರ ಖಾತೆಗೆ ಜಮಾ ಆಗಲಿದೆ. ರಾಜ್ಯ ಸರಕಾರದ ಗೃಹಲಕ್ಷ್ಮೀ ಕ್ಯಾಂಪ್ ( Gruhalkshmi Camp ) , ಗೃಹಲಕ್ಷ್ಮೀ ಅದಾಲತ್ ( Gruhalakshmi Adalath ) ಕೂಡ ತಕ್ಕಮಟ್ಟಿಗೆ ಯಶಸ್ವಿಯಾಗಿ ಮೂಡಿಬರುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಯಶಸ್ವಿ ಫಲ :
ಕರ್ನಾಟಕ ಸರಕಾರ ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆಯ ಹಣ ಗೃಹಿಣಿಯರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆಯ ಮೂಲಕ ಪ್ರತೀ ತಿಂಗಳು ಹಣ ವರ್ಗಾವಣೆ ಆಗುತ್ತಿದೆ. ಇನ್ನು ನೋಡುವುದಾದರೆ ವಾರ್ಷಿಕವಾಗಿ ಪ್ರತೀ ಕುಟುಂಬದ ಯಜಮಾನಿಗೆ 24000 ರೂಪಾಯಿಯನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಕರ್ನಾಟಕ ರಾಜ್ಯದಲ್ಲಿ ಈ ಯೋಜನೆಯ ಲಾಭವನ್ನು ಈಗಾಗಲೇ ಕೋಟ್ಯಾಂತರ ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಈ ಒಂದು ಸರ್ಕಾರದ ಯಶಸ್ವಿ ಯೋಜನೆಯಾಗಿದೆ ಎಂದು ಹೇಳಬಹುದು.
ಹೊಸ ರೂಲ್ಸ್ ( New Rules ) ಅನ್ನು ಪಾಲಿಸದಿದ್ದರೆ 5ನೇ ಕಂತಿನ ಹಣ ಜಮಾ ಆಗುವುದಿಲ್ಲ :
ಈಗಾಗಲೇ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಹೊಸ ರೂಲ್ಸ್ ಗಳನ್ನು ಜಾರಿಗೊಳಿಸಿದೆ. ಹಾಗೆಯೇ ಗೃಹಲಕ್ಷ್ಮಿ ಫಲಾನುಭವಿಗಳು ಏನಾದರೂ ಈ ರೂಲ್ಸ್ ಗಳನ್ನು ಪಾಲಿಸದಿದ್ದರೆ 5 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದು ಕಡ್ಡಾಯ ವಾಗಿ ತಿಳಿಸಿದೆ.
ಹಾಗಾದರೆ ಆ ಹೊಸ ರೂಲ್ಸ್ ಯಾವುದು ಮತ್ತು ಅದಕ್ಕಾಗಿ ಏನು ಮಾಡಬೇಕು ಎಂದು ತಿಳಿದು ಕೊಳ್ಳೋಣ ಬನ್ನಿ.
ಗೃಹಲಕ್ಷ್ಮಿ ಯೋಜನೆಗೆ ಇ ಕೆವೈಸಿ ಕಡ್ಡಾಯ ( EKYC is Compulsory ) :
ಗೃಹಲಕ್ಷ್ಮೀ ಯೋಜನೆಯಲ್ಲಿ ಹಣ ಯಜಮಾನಿಯರ ಖಾತೆಗೆ ಜಮಾ ಅಗಬೇಕಿದ್ದರೆ ಇ ಕೆವೈಸಿ ಕಡ್ಡಾಯವಾಗಿ ಮಾಡಿಸಲೇಬೇಕು. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್‌ನಲ್ಲಿ (Ration Card) ಇರುವ ಪ್ರತಿಯೊಬ್ಬ ಸದಸ್ಯರು ಕೂಡ ಇ ಕೆವೈಸಿ ಮಾಡಿಸಲೇಬೇಕಾಗಿದೆ ಎಂದು ತಿಳಿಸಿದ್ದಾರೆ.
ಬ್ಯಾಂಕ್ ಖಾತೆ ಇ-ಕೆವೈಸಿ ಮಾಡಿಸಿದೆಯೇ ಇಲ್ಲವೋ ಎಂದು ಸ್ಟೇಟಸ್ (ekyc Status Check) ಚೆಕ್ ಮಾಡುವ ವಿಧಾನ:
ನಿಮ್ಮ ಬ್ಯಾಂಕ್ ಖಾತೆ(Bank account) ಇ-ಕೆವೈಸಿ ಆಗಿದೆಯೋ ಇಲ್ಲವೋ ಅನ್ನೋದನ್ನು ನೀವು ಮನೆಯಲ್ಲಿಯೇ ಕುಳಿತು ಚೆಕ್ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಸ್ಟೇಟಸ್ ಚೆಕ್ ಮಾಡುವ ವಿಧಾನ ಹೀಗಿದೆ ( Steps of status Checking ) :
ಹಂತ 1 : ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು: https://ahara.kar.nic.in/Home/EServices .
ಹಂತ 2 : ನಂತರ ಹೋಮ್ ಪೇಜ್‌ನಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಆಯ್ಕೆ ದೊರೆಯುತ್ತದೆ.
ಹಂತ 3 : ನಂತರ ಅದರ ಮೇಲೆ ಕ್ಲಿಕ್ ಮಾಡುತ್ತಿದ್ದಂತೆಯೇ ಹೊಸ ಪುಟ ತೆರೆದು ಕೊಳ್ಳುತ್ತದೆ. ಅಲ್ಲದೇ ಅಲ್ಲಿ ಮೂರು ಲಿಂಕ್‌ಗಳು ಕಾಣಿಸುತ್ತವೆ.
ಹಂತ 4 : ರೇಷನ್ ಕಾರ್ಡ್ ತಿದ್ದುಪಡಿ ಆಯ್ಕೆಯನ್ನು ಕ್ಲಿಕ್ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ. ಆ ಲಿಂಕ್ ಕ್ಲಿಕ್ ಮಾಡಿದ ಬಳಿಕ, ಜಿಲ್ಲೆಯನ್ನು ಕ್ಲಿಕ್ ಮಾಡಿ. ನಂತರ ಹೊಸ ಪುಟದ ತೆರೆಯುತ್ತಿದ್ದಂತೆಯೇ ನೀವು ಓಟಿಪಿ ಆಯ್ಕೆಯನ್ನು ಸೆಲೆಕ್ಟ್ ಮಾಡಬೇಕು.
ಹಂತ 5 : ಓಟಿಪಿ ಆಯ್ಕೆ ಮಾಡಿಕೊಂಡು, ನಿಮ್ಮ ರೇಷನ್ ಕಾರ್ಡ್ ಸಂಖ್ಯೆಯನ್ನು ನಮೋದಿಸಿದ್ರೆ, ನಿಮ್ಮ ಮೊಬೈಲ್‌ಗೆ ಒಟಿಪಿ ಬರಲಿದೆ.
ಹಂತ 6 : ಒಟಿಪಿ (OTP) ನಮೋದಿಸಿದ ನಂತರ ನಿಮ್ಮ ಕುಟುಂಬ ಸದಸ್ಯರ ಆಯ್ಕೆ ತೆರೆದುಕೊಳ್ಳಲಿದೆ. ಯಾವ ಸದಸ್ಯರ ಹೆಸರನ್ನು ಸೆಲೆಕ್ಟ್ ಮಾಡುತ್ತೇವೋ ಅವರ ಕೆವೈಸಿ ಆಗಿದೆಯೋ ಇಲ್ಲವೋ ಅನ್ನುವ ಮಾಹಿತಿ ಆ ಪೇಜ್ ನಲ್ಲಿ ಪಡೆಯಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.