ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಚುನಾವಣಾ ಸಮಯದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಈಗಾಗಲೇ 2000 ಎನ್ನ ಪ್ರತಿ ತಿಂಗಳು ಸಂದಾಯ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಎಂಟು ಕಂತುಗಳ ಬರೋಬ್ಬರಿ 16,000 ಹಣವನ್ನು ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗಿದ್ದು. ಅನೇಕ ಮಹಿಳೆಯರು ಮೊಬೈಲ್, ಟಿವಿ, ಫ್ರಿಡ್ಜ್ ಮತ್ತು ಚಿನ್ನವನ್ನು ಖರೀದಿ ಮಾಡಿ ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ 9ನೇ ಕಂತಿನ ಹಣ ಬಿಡುಗಡೆಯಾಗಿದ್ದು ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
9ನೇ ಕಂತಿನ ಹಣ ಬಿಡುಗಡೆ
ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳ ಖಾತೆಗೆ ಏಪ್ರಿಲ್-2024 ತಿಂಗಳ ರೂ 2,000 ಹಣವನ್ನು(Gruhalakshmi april amount) ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಒಳಗೆ ಈ ಹಣ ಪ್ರತಿಯೊಬ್ಬರ ಖಾತೆಗೂ ತಲುಪಲಿದೆ. ನಿಮ್ಮ ಖಾತೆಗೆ ಹಣ ಬಂದಿದ್ಯೋ ಇಲ್ವೋ ಎಂದು ಚೆಕ್ ಮಾಡಿಕೊಳ್ಳಲು ನಿಮ್ಮ ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಅಪ್ಡೇಟ್ ಮಾಡಿಸಿ ಅಥವಾ DBT Karnataka ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಸರ್ಕಾರದಿಂದ ಬಿಡುಗಡೆಯಾಗುವ ಎಲ್ಲಾ DBT ಸ್ಟೇಟಸ್ ತಿಳಿದುಕೊಳ್ಳಿ.
ಪೆಂಡಿಂಗ್ ಹಣ ಪಡೆಯಲು ಇಲ್ಲಿದೆ ಪರಿಹಾರ
ಇದುವರೆಗೂ ಒಂದು ಕಂತಿನ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರ ಬ್ಯಾಂಕ್ ಖಾತೆಯೇ ಕಾರಣ ಎನ್ನಬಹುದು, ಆದ್ದರಿಂದ ಅಂತಹ ಮಹಿಳೆಯರು ಕೂಡಲೇ ಬ್ಯಾಂಕಿಗೆ ಭೇಟಿ ನೀಡಿ ಖಾತೆಗೆ ಅಗತ್ಯ ಇರುವ ಎಲ್ಲಾ ಅಪ್ಡೇಟ್ಸ್ ಗಳನ್ನು ಮಾಡಿಸಿ, ಅದರಲ್ಲೂ ಮುಖ್ಯವಾಗಿ ಎನ್ಪಿಸಿಐ ಮ್ಯಾಪಿಂಗ್, ಆಧಾರ್ ಕಾರ್ಡ್ ಲಿಂಕ್ ಕಡ್ಡಾಯವಾಗಿ ಮಾಡಿಸಲೇಬೇಕು. ಆಧಾರ್ ಕಾರ್ಡ್ ಹತ್ತು ವರ್ಷಗಳಷ್ಟು ಹಳೆಯದಾಗಿದ್ದರೆ ತಕ್ಷಣ ಅದನ್ನು ಆಧಾರ್ ಕಾರ್ಡ್ ತಿದ್ದುಪಡಿ ಕೇಂದ್ರದಲ್ಲಿ ತಪ್ಪದೇ ಅಪ್ಡೇಟ್ ಮಾಡಿಸಿ. ಆಧಾರ್ ಕಾರ್ಡ್ ನಲ್ಲಿ ಹೆಸರು, ಅಡ್ರೆಸ್, ಲಿಂಗ, ಜನ್ಮ ದಿನಾಂಕ ಮೊದಲಾದ ವಿವರಗಳನ್ನು ನವೀಕರಣಗೊಳಿಸಬಹುದು.
ಅತ್ತೆ ಮರಣ ಹೊಂದಿದ್ದರೆ ಏನು ಮಾಡಬೇಕು ?
ಈಗಾಗಲೇ ಮನೆ ಯಜಮಾನಿ ಅತ್ತೆಯಾಗಿದ್ದು ಒಂದು ವೇಳೆ ಅವರು ಮರಣ ಹೊಂದಿದ್ದರೆ ಆ ಹಣ ಮನೆಯ ಹಿರಿಯ ಸೊಸೆ ಖಾತೆಗೆ ಬರುತ್ತದೆ. ಯೋಜನೆ ಆರಂಭವಾದ ಹೊಸದರಲ್ಲಿ ಅರ್ಜಿ ಸಲ್ಲಿಸಿದ ಸಾಕಷ್ಟು ಹಿರಿಯ ಮಹಿಳೆಯರು ಮರಣ ಹೊಂದಿದ್ದಾರೆ, ಆ ಖಾತೆಗೆ ಜಮಾ ಆಗಬೇಕಿದ್ದ ಹಣ ಯಾವ ಖಾತೆಗೆ ಹೋಗುತ್ತದೆ ಎನ್ನುವುದು ಹಲವಾರು ಜನರಲ್ಲಿ ಗೊಂದಲ ಇತ್ತು. ಇದಕ್ಕೆ ಸರ್ಕಾರ ಪರಿಹಾರ ಕೊಟ್ಟಿದ್ದು ಕುಟುಂಬದಲ್ಲಿ ಅತ್ತೆ ಇಲ್ಲದೇ ಇದ್ದರೆ ಅಥವಾ ಮರಣ ಹೊಂದಿದ್ದರೆ ಹಿರಿಯ ಸೊಸೆ ತನ್ನ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದೆಂದು ಸರ್ಕಾರ ಮಾಹಿತಿ ನೀಡಿದೆ.
ದಾಖಲಾತಿ ಸರಿಯಿದ್ದರು ಹಣ ಬಂದೇ ಇಲ್ಲ
ಎಲ್ಲ ದಾಖಲಾತಿ ಸರಿಯಿದ್ದರು ನನಗೆ ಹಣ ಬಂದೇ ಇಲ್ಲ ಎನ್ನುವ ಸಾಕಷ್ಟು ಜನರಿದ್ದಾರೆ, ಆದರೆ ಹಣ ಬರೆದಿರುವುದಕ್ಕೆ ಏನಾದರೂ ಒಂದು ಕಾರಣ ಇದ್ದೇ ಇರುತ್ತದೆ ಆದ್ದರಿಂದ ಈ ಕಾರಣಗಳನ್ನು ತಿಳಿಯಲು ನೀವು ಹತ್ತಿರದ ಸಿಡಿಪಿಓ (CDPO) ಕಚೇರಿಗೆ ಭೇಟಿ ನೀಡಿ ಅಲ್ಲಿರುವ ಅಧಿಕಾರಿಗಳಲ್ಲಿ ಎಲ್ಲಾ ಮಾಹಿತಿಗಳನ್ನು ಕೇಳಿ ತಿಳಿದುಕೊಂಡು ಅವರ ಮಾರ್ಗದರ್ಶನದಂತೆ ಎಲ್ಲಾ ಬದಲಾವಣೆಗಳನ್ನು ಮಾಡಿ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ