ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬರಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ವಿವರಿಸಲಾಗಿದೆ, ನಿಮಗೆ ಇದುವರೆಗೂ ಯಾವುದೇ ಹಣ ಬಂದಿಲ್ಲವಾದರೆ ಈ ವರದಿಯನ್ನು ಸಂಪೂರ್ಣವಾಗಿ ಓದಿ ಮತ್ತು ಹಣ ಬರದೇ ಇರುವ ಪ್ರತಿಯೊಬ್ಬರಿಗೂ ಮಿಸ್ ಮಾಡದೆ ಶೇರ್ ಮಾಡಿ ಅವರಿಗೂ ಸಹಿತ ತುಂಬಾ ಅನುಕೂಲವಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈ ಕೆಳಗೆ ಕೊಟ್ಟಿರುವ 3 ಕ್ರಮಗಳು ಸರಿಯಾಗಿದ್ದಲ್ಲಿ ಖಂಡಿತ ನಿಮ್ಮ ಗೃಹಲಕ್ಷ್ಮಿ ಹಣ ಮತ್ತು ಅನ್ನಭಾಗ್ಯದ ಹಣ ನಿಮ್ಮ ಖಾತೆಗೆ ಬಂದು ತಲುಪುತ್ತದೆ.
1) ನಿಮ್ಮ ರೇಷನ್ ಕಾರ್ಡಿಗೆ ಮೊದಲು ekyc ಆಗಿರಬೇಕು. ರೇಷನ್ ಕಾರ್ಡ್ ekyc ಬಗ್ಗೆ ತಿಳಿದುಕೊಳ್ಳುವ ವರದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2) ನಿಮ್ಮ ರೇಷನ್ ಕಾರ್ಡ್ ನಲ್ಲಿ ಮತ್ತು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ ನಲ್ಲಿ ನಿಮ್ಮ ಹೆಸರು ಒಂದೇ ತರನಾಗಿ ಇರಬೇಕು, ಹೆಸರಿನಲ್ಲಿ ಏನಾದರೂ ಸ್ಪೆಲಿಂಗ್ ಮಿಸ್ಟೇಕ್ ಗಳು ಇದ್ದಲ್ಲಿ ಆಯಾ ದಾಖಲೆಗಳಲ್ಲಿ ಸರಿಯಾಗಿ ತಿದ್ದುಪಡಿ ಮಾಡಿಸಬೇಕು. ಕೆಳಗಿನ ವಿಡಿಯೋ ನೋಡಿ ನಿಮಗೆ ಸಹಾಯ ಆಗುತ್ತೆ.
3) ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎನ್ನುವುದನ್ನು ಚೆಕ್ ಮಾಡಿಕೊಳ್ಳಬೇಕು. ಹೇಗೆ ಎಂದು ಕೆಳಗೆ ಕೊಡಲಾಗಿದೆ ದಯವಿಟ್ಟು ಪೂರ್ಣವಾಗಿ ಓದಿ. ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು. ಚಾಲ್ತಿಯಲ್ಲಿ ಇದೆಯೋ ಅಥವಾ ಇಲ್ಲವೋ ಎಂಬುದನ್ನು ಬ್ಯಾಂಕಿಗೆ ಹೋಗಿ ಒಂದು ಸಾರಿ ವಿಚಾರಿಸಿ.
ಈ ಮೇಲೆ ಹೇಳಿರುವ ಮೂರು ಕ್ರಮಗಳು ಸರಿಯಾಗಿದ್ದಲ್ಲಿ ಖಂಡಿತವಾಗಿಯೂ ನಿಮ್ಮ ಹಣ ನಿಮಗೆ ಬಂದು ತಲುಪುತ್ತದೆ. ಮತ್ತು ಇತ್ತೀಚಿನ ದಿನಗಳಲ್ಲಿ ಕೆಲವು ರೇಷನ್ ಕಾರ್ಡ್ ಗಳು ರದ್ದಾಗುತ್ತಿವೆ ಹಾಗಾಗಿ ಮೊದಲು ನಿಮ್ಮ ರೇಷನ್ ಕಾರ್ಡ್ ಆಕ್ಟಿವ್ ಇದೆಯೋ ಅಥವಾ ಇಲ್ಲವೋ ಎಂಬುದನ್ನು ನೀವು ಖಚಿತಪಡಿಸಿಕೊಳ್ಳಿ. ಖಚಿತಪಡಿಸಿಕೊಳ್ಳಲು ಕೆಳಗಿನ ಕ್ರಮಗಳನ್ನು ಅನುಸರಿಸಿ
ನಿಮ್ಮ Ration card ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:
ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.
ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.
ಆಧಾರ್ ಕಾರ್ಡ್ ನೊಂದಿಗೆ ಡಿಬಿಟಿ ಲಿಂಕ್ ಮಾಡಿ :
ಡಿಬಿಟಿ ಎಂದರೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ ಎಂದರ್ಥ. ಇದರಿಂದಾಗಿ ಮಹಿಳೆಯರ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಗೃಹಲಕ್ಷ್ಮೀ ಯೋಜನೆಯ ₹2,000 ಮತ್ತು ಅನ್ನಭಾಗ್ಯದ ₹170 ರೂಪಾಯಿ ಜಮಾ ಆಗುತ್ತದೆ. ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.ಹಾಗಾಗಿ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮುನ್ನ ನಿಮ್ಮ ಆಧಾರ್ ಕಾರ್ಡ್ ಡಿಬಿಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ನಿಮ್ಮ ಆಧಾರ್ ಕಾರ್ಡ್ ಹಾಗೂ ಡಿಬಿಟಿ ಲಿಂಕ್ ಆಗಿದೆ ಎಂಬುದನ್ನು ಹೇಗೆ ನೋಡುವುದು?:
ಹಂತ 1: ಮೊದಲಿಗೆ ಆಧಾರ್ ಕಾರ್ಡಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. https://resident.uidai.gov.in/bank-mapper
ಹಂತ 2: ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಅನ್ನು ನೋಂದಣಿ ಮಾಡಿ ಹಾಗೆ ಕ್ಯಾಪ್ಚರ್ ಅನ್ನು ಎಂಟರ್ ಮಾಡಿ.
ಹಂತ 3: ನಂತರ ನಿಮ್ಮ ಆಧಾರ್ ನಂಬರಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್OTP ಬರುತ್ತೆ ಅದನ್ನು ನಮೂದಿಸಿ, ನಂತರ Submit ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಅದು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ತೋರಿಸುತ್ತದೆ.
ಹಂತ 5: ಒಂದು ವೇಳೆ ಲಿಂಕ್ ಆಗದೆ ಇದ್ದಲ್ಲಿ ನೀವು ಹತ್ತಿರದ ಶಾಖೆಗೆ ತೆರಲಿ ಲಿಂಕ್ ಮಾಡಿಸಬೇಕು.
ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದ್ದರೆ Congratulations your aadhar bank maping has been done ಎಂದು ಬರುತ್ತದೆ.ಒಂದು ವೇಳೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದಿದ್ದರೆ ನೀವು ATM ಗಳ ಮೂಲಕ ಕೂಡ ಮಾಡಿಸಬಹುದು, ಆನ್ಲೈನ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕ್ ಗಳಲ್ಲಿ ಆಯಾ ಬ್ಯಾಂಕ್ ಆಪ್ ಗಳನ್ನು ಬಳಸಿ ಮಾಡಬಹುದು. ಅಥವಾ ಬ್ಯಾಂಕ್ ಶಾಖೆಗೆ ಹೋಗಿ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸುವ ಮೂಲಕ ಕೂಡ ಮಾಡಿಸಬಹುದು.
ಗೃಹಲಕ್ಷ್ಮಿ ಯೋಜನೆಯ ಹಣದ ಜಮೆ ಬಗ್ಗೆ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Sir dbt alli recent credit amount show agata illa
Sir grahalakshmi link not open how to check grahalakshmi status check