ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆಯ ಟೆಸ್ಟಿಂಗ್ ಅಥವಾ ಡೆಮೋ ಲಿಂಕನ್ನು ಬಿಟ್ಟಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಗೃಹಲಕ್ಷ್ಮಿ ಯೋಜನೆಯ ಮಾದರಿಯ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದಾರೆ. ಗೃಹಲಕ್ಷ್ಮಿ(gruhalakshmi) ಯೋಜನೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ ಆದರೆ, ಸರ್ಕಾರದ ಅಧಿಕೃತ ಜಾಲತಾಣ ಒಂದರಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಡೆಮೋ ವನ್ನು ನೀಡಲಾಗಿದೆ. ಈ ಲಿಂಕ್ ಅನ್ನು ಟೆಸ್ಟ್ ಮಾಡಲು ಬಿಡುಗಡೆ ಮಾಡಲಾಗಿದೆ. ಈ ಟೆಸ್ಟ್ ಯಶಸ್ಸು ಕಂಡಲ್ಲಿ ಮುಂದಿನ ದಿನಗಳಲ್ಲಿ ಇದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹಾಗಾದರೆ ಟೆಸ್ಟಿಂಗ್ ದೆಮೊದಲ್ಲಿ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಹೇಗಿದೆ ಎಂಬುವುದರ ಮಾಹಿತಿಯನ್ನು ಈ ಲೇಖನವನ್ನು ಸಂಪೂರ್ಣವಾಗಿ ಓದುವುದರಿಂದ ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸೇವಾ ಸಿಂಧುವಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಬಿಡಲಾಗಿದೆ :
ನಿಮಗೆಲ್ಲರಿಗೂ ತಿಳಿದಿರುವಂತೆ ಹಲವಾರು ವಾರಗಳ ಹಿಂದೆಯೇ, ಜುಲೈ 14 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂಬುವುದರ ಮಾಹಿತಿ ಹರಿದಾಡುತ್ತಿತ್ತು. ಆದರೆ ಇಂದು ಅಂದರೆ ಜುಲೈ 14ರಂದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಟೆಸ್ಟಿಂಗ್ ಅಥವಾ ಡೆಮೋ ವನ್ನು ಪ್ರಾರಂಭ ಮಾಡಿದ್ದಾರೆ. ಇದು ಪರೀಕ್ಷೆಯ ಅಥವಾ ಮಾದರಿಯ ಪ್ರಕ್ರಿಯೆಯಾಗಿದೆ. ಈ ಪ್ರಕ್ರಿಯೆ ಯಶಸ್ಸುಗೊಂಡ ನಂತರ ಇನ್ನೇನು ಕೆಲವೇ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಶುರುವಾಗುತ್ತದೆ. ಈ ಟೆಸ್ಟಿಂಗ್ ಲಿಂಕನ್ನು ಸರ್ಕಾರದ ವತಿಯಿಂದ ಹೊರಡಿಸಿರುವುದು ಒಂದು ಶುಭ ಪ್ರಾರಂಭ ಎನ್ನಬಹುದಾಗಿದೆ. ಹಾಗಾದರೆ ಈ ಟೆಸ್ಟಿಂಗ್ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಆದರೆ ಈಗಲೇ ಜನಸಾಮಾನ್ಯರು ಅಥವಾ ಮಹಿಳೆಯರು ಇದರ ಮೂಲಕ ಅರ್ಜಿಯನ್ನು ಸಲ್ಲಿಸುವಂತಿಲ್ಲ. ಒಂದು ಬಾರಿ ಸರ್ಕಾರದಿಂದ ಅಧಿಕೃತ ಘೋಷಣೆಯನ್ನು ಹೊರಡಿಸಿದ ನಂತರವೇ ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ :
ಎರಡು ವಿಧಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಮೊದಲನೆಯದಾಗಿ ಆಧಾರ್ ಸಂಖ್ಯೆಯನ್ನು ಅನುಸರಿಸಿಕೊಂಡು ಹಾಗೂ ಎರಡನೆಯದಾಗಿ ಪಡಿತರ ಸಂಖ್ಯೆಯ ಆದರದ ಮೇಲೆ ಅರ್ಜಿಯನ್ನು ಸಲ್ಲಿಸಬಹುದು. ಇದಕ್ಕೆ ನೀವು ಸೇವಾ ಸಿಂಧುವಿನ ಅಕೌಂಟಿಗೆ ಮೊದಲನೆಯದಾಗಿ ಲಾಗಿನ್ ಆಗಬೇಕಾಗುತ್ತದೆ.
ರೇಷನ್ ಕಾರ್ಡ್ ಆಧಾರಿತ ಗೃಹಲಕ್ಷ್ಮಿ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
https://sevasindhuservices.karnataka.gov.in/
ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.
ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ
ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.
ಹಂತ 3: ಲೋಗಿನ್ ಅದ ನಂತರ ನಿಮಗೆ ಸರ್ವಿಸ್ ಗಳು ದೊರೆಯುತ್ತದೆ ಅದರಲ್ಲಿ, ಗೃಹಲಕ್ಷ್ಮಿ ಯೋಜನೆ ಫ್ರೀ ಅಪ್ರೂಡ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 4: ನಂತರ ನೀವು ನಿಮ್ಮ ವಯಕ್ತಿಕ ವಿವರಗಳಾದ ಪಡಿತರ ಚೀಟಿ ಸಂಖ್ಯೆ ಹಾಗೂ ಇನ್ನಿತರೆಗಳನ್ನು ಭರ್ತಿ ಮಾಡಿ
ಹಂತ 5: ನಂತರ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಿ. ನಂತರ ಸ್ವಯಂ ಘೋಷಣೆಯನ್ನು ಮಾಡಿ, I agree ಎಂಬ ಚೆಕ್ ಬಾಕ್ಸ್ ಮೇಲೆ ಚೆಕ್ ಮಾಡಿ.
ಹಂತ 6: ನಂತರ ಆಧಾರ್ ದೃಢೀಕರಣವನ್ನು ಮಾಡಿಕೊಂಡು ಓಟಿಪಿಯನ್ನು ನೋಂದಾಯಿಸಬೇಕು. ನಂತರ ಸ್ವೀಕೃತಿಯನ್ನು ನೀಡಲಾಗುತ್ತದೆ. ಹೀಗೆ ರೇಷನ್ ಕಾರ್ಡನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಆಧಾರ್ ಕಾರ್ಡ್ ಆಧಾರಿತ ಗೃಹಲಕ್ಷ್ಮಿ ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಸೇವಾ ಸಿಂಧುವಿನ ಅಕೌಂಟಿಗೆ ಲಾಗಿನ್ ಆದ ನಂತರ ಆಧಾರ್ ಆಧಾರಿತ ದೃಢೀಕರಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಎಂಬ ಆಯ್ಕೆಯನ್ನು ಮಾಡಿ.
ಹಂತ 2: ನಂತರ ಓಟಿಪಿಯನ್ನು ಹಾಕಿ ಕ್ರೂಢೀಕರಣವನ್ನು ಮಾಡಿಕೊಳ್ಳಬೇಕು
ಹಂತ 3 : ನಂತರ ಮನೆಯ ಯಜಮಾನಿಯ ವಿವರಗಳನ್ನು ಹಾಕಬೇಕು, ಹಾಗೆಯೇ ನಿಮ್ಮ ಭಾವಚಿತ್ರವನ್ನು ಕೂಡ ಕೇಳಲಾಗುತ್ತದೆ.
ಹಂತ 4: ಮುಂದುವರೆದು ಕುಟುಂಬ ಸದಸ್ಯರ ವಿವರಗಳನ್ನು ನೋಂದಣಿ ಮಾಡಬೇಕು.
ಹಂತ 5: ನಂತರ ಘೋಷಣೆಯನ್ನು ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ.
ಹೀಗೆ ಎರಡು ವಿಧಾನಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಡೆಮೋ ಲಿಂಕನ್ನು ಬಿಡುಗಡೆ ಮಾಡಲಾಗಿದೆ. ಈ ಟೆಸ್ಟಿಂಗ್ ವಿಧಾನಗಳು ಯಶಸ್ವಿಯಾದ ನಂತರ ಅಧಿಕೃತವಾಗಿ ಸರ್ಕಾರದಿಂದ ಇನ್ನೇನು ಕೆಲವೇ ದಿನಗಳಲ್ಲಿ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ. ಇಂತಹ ಖುಷಿಯ ಸಮಾಚಾರವನ್ನು, ಹಾಗೆಯೆ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ