ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಗೆ(gruhalakshmi scheme) ಅರ್ಜಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಆನ್ಲೈನ್(online) ನಲ್ಲಿ ಚೆಕ್ ಮಾಡುವುದು ಹೇಗೆ ಎಂಬುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈಗಾಗಲೇ ಹಲವಾರು ಮಂದಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಯಾಗಿದೆ. ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೀವು ಮನೆಯಲ್ಲೇ ಕುಳಿತುಕೊಂಡು ಆನ್ಲೈನ್ ನಲ್ಲಿ ಚೆಕ್ ಮಾಡಬಹುದು. ಹೇಗೆ ಇದನ್ನು ಚೆಕ್ ಮಾಡುವುದು ಎಂಬುವುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ಥಿತಿಯನ್ನು(status) ಮನೆಯಲ್ಲೇ ಈಗ ನೋಡಬಹುದು :
ಅನೇಕ ಜನರು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸಲ್ಲಿಕೆಯ ಸರ್ಕಾರಿ ಕೇಂದ್ರಗಳಲ್ಲಿ ಕೆಲವರಿಗೆ ಗೃಹಲಕ್ಷ್ಮಿ ಅರ್ಜಿ ಸಲ್ಲಿಸಿದ ಕಾರ್ಡ್ಗಳನ್ನು ನೀಡುತ್ತಿದ್ದಾರೆ. ಇನ್ನು ಕೆಲವರಿಗೆ ಕಾರ್ಡುಗಳನ್ನು ಕೊಡುತ್ತಿಲ್ಲ ಆದರೆ ಅವರುಗಳಿಗೆ ಅರ್ಜಿ ಸಲ್ಲಿಸಲಾಗಿದೆ ಎಂಬ ಮೆಸೇಜ್ ಬರುತ್ತಿದೆ. ಹಾಗಾಗಿ ಅರ್ಜೆಗಳನ್ನು ಸಲ್ಲಿಸಿದ ನಂತರ ನಿಮಗೇನಾದರೂ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯೇ ಅಥವಾ ಇಲ್ಲವೇ ಎಂಬ ಅನುಮಾನವಿದ್ದರೆ, ಅದನ್ನು ನೀವು ಮನೆಯಲ್ಲಿ ಕುಳಿತುಕೊಂಡು ಸಲ್ಲಿಕೆಯ ಸ್ಥಿತಿಯನ್ನು ನೋಡಿ ಬಗೆಹರಿಸಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಗಸ್ಟ್ ತಿಂಗಳಿನಲ್ಲಿ ಖಾತೆಗಳಿಗೆ ಹಣ ಜಮಾ ಆಗುತ್ತದೆ ಎಂದು ಸರ್ಕಾರ ಈಗಾಗಲೇ ತಿಳಿಸಿದೆ.
ಗೃಹ ಲಕ್ಷ್ಮಿ ಅರ್ಜಿ ಸ್ಟೇಟಸ್ ಹೀಗೆ ಚೆಕ್ ಮಾಡಿ!
ಹಂತ 1: ಮೊದಲಿಗೆ ರೇಷನ್ ಕಾರ್ಡ್ ನಲ್ಲಿರುವ ಯಜಮಾನಿಯ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಫೋನ್ ಇಂದ 8147500500 ಈ ನಂಬರಿಗೆ ನಿಮ್ಮ ರೇಷನ್ ಕಾರ್ಡ್ ನಂಬರನ್ನು ನೀವು ಮೆಸೇಜ್ ಮಾಡಬೇಕು.
ನಂತರ ಈಗಾಗಲೇ ನೀವು ಅರ್ಜಿ ಸಲ್ಲಿಸಿದರೆ ಕೆಳಗಿನ ರೀತಿ ನಿಮಗೆ ಮರಳಿ ಸಂದೇಶ ಬರುತ್ತದೆ.
ಒಂದು ವೇಳೆ ನೀವು ಅರ್ಜಿ ಸಲ್ಲಿಸದೆ ಇದ್ದಲ್ಲಿ ಅಥವಾ ಅರ್ಜಿ ಸಲ್ಲಿಕೆ ಆಗದೆ ಇದ್ದಲ್ಲಿ ಕೆಳಗಿನ ರೀತಿ ಮರು ಸಂದೇಶ ಬರುತ್ತದೆ. ಹೀಗೆ ಬಂದಾಗ ನೀವು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಹೀಗೆ ನೀವು ಅರ್ಜಿಯನ್ನು ಸಲ್ಲಿಸಿದ ನಂತರ ಅರ್ಜಿ ಸಲ್ಲಿಕೆಯ ಸ್ಟೇಟಸ್ ಅನ್ನು ಮನೆಯಲ್ಲೇ ಕುಳಿತು ಚೆಕ್ ಮಾಡಿಕೊಳ್ಳಬಹುದಾಗಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
510200153535
Gotyal