ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi Scheme) ನೋಂದಣಿ ವೇಳಾಪಟ್ಟಿಯ ವಿವರಗಳನ್ನು ನೋಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಈಗ ತುಂಬಾನೇ ಸುಲಭವಾಗಿದೆ. ಒಂದು ಎಸ್ಎಮ್ಎಸ್ ಮಾಡಿದರೆ ಸಾಕು, ಮೆಸೇಜ್ ಮಾಡಿದ ತಕ್ಷಣ ನಿಮಗೆ ಸರ್ಕಾರದ ಕಡೆಯಿಂದ ಒಂದು ಮೆಸೇಜ್ ಬರುತ್ತದೆ. ಅದರಲ್ಲಿ ಗೃಹಲಕ್ಷ್ಮಿ ನೋಂದಣಿಯ ದಿನಾಂಕ, ಸ್ಥಳ ಹಾಗೂ ಸಮಯವನ್ನು ನಿಗದಿಪಡಿಸಲಾಗಿರುತ್ತದೆ. ಆ ಸಮಯಕ್ಕೆ ನಿಗದಿಪಡಿಸಿದ ಸರ್ಕಾರ ಕೇಂದ್ರಗಳಿಗೆ ತೆರಳಿ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಮುಂದುವರಿಸಬಹುದು. ಒಂದು ವೇಳೆ ನಿಮಗೆ ಏನಾದರೂ ಸರ್ಕಾರದ ಕಡೆಯಿಂದ ಮೆಸೇಜ್ ಬರದಿದ್ದರೆ ಅಥವಾ ಬಂದ ಮೆಸೇಜ್ ಅನಿರೀಕ್ಷಿತವಾಗಿ ಡಿಲೀಟ್ ಆದರೆ ನೋಂದಣಿಯ ವೇಳಾಪಟ್ಟಿಯನ್ನು ಹೇಗೆ ತಿಳಿದುಕೊಳ್ಳುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈ ಲೇಖನವನ್ನು ಪೂರ್ಣವಾಗಿ ಓದುವುದರಿಂದ ನಿಮಗೆ ಎಲ್ಲಾ ಮಾಹಿತಿಗಳು ತಿಳಿಯುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮೊಬೈಲ್ ನಲ್ಲೇ ಗೃಹಲಕ್ಷ್ಮಿ ಯೋಜನೆ ನೋಂದಣಿಯ ವೇಳಾಪಟ್ಟಿಯನ್ನು ನೋಡಿ :
Gruhalakshmi Scheme Status check online: ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನೀವು ನಿಮ್ಮ ಮೊಬೈಲ್ ನಂಬರ್ ಇಂದ ಮೆಸೇಜ್ ಮಾಡಿದ ನಂತರ ಯಾವ ಸ್ಥಳಕ್ಕೆ ತೆರಳಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಕುಳಿತ ಜಾಗದಿಂದಲೇ ಸಂಪೂರ್ಣ ವಿವರವನ್ನು ಪರಿಶೀಲಿಸಬಹುದಾಗಿದೆ. ನೀವು ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಂಡ ನಂತರ ನಿಮಗೆ ಆಗಸ್ಟ್ ತಿಂಗಳಿನಲ್ಲಿ ಕಡ್ಡಾಯವಾಗಿ ಹಣ ಖಾತೆಗೆ ಜಮಾವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ರವರು ತಿಳಿಸಿದ್ದಾರೆ. ನೋಂದಣಿ ಮಾಡುವುದಕ್ಕೂ ಮುಂಚೆ ನೋಂದಣಿಯ ವೇಳಾಪಟ್ಟಿಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಆ ವೇಳಾಪಟ್ಟಿಯನ್ನು ನೋಡುವ ಎಲ್ಲಾ ಹಂತಗಳನ್ನು ಕೆಳಗಡೆ ನೀಡಲಾಗಿದೆ:
ಗೃಹಲಕ್ಷ್ಮಿ ಯೋಜನೆ ನೊಂದಣಿ ವೇಳಾಪಟ್ಟಿಯನ್ನು ನೋಡುವ ವಿಧಾನ :
ಹಂತ 1: ಮೊದಲಿಗೆ ಗೃಹಲಕ್ಷ್ಮಿ ಯೋಜನೆಯ ಸೇವಾ ಸಿಂಧುವಿನ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
https://sevasindhugs1.karnataka.gov.in/gl-stat-sns/
ಹಂತ 2: ನಂತರ ನಿಮ್ಮ ಪಡಿತರ ಚೀಟಿ(Ration card)ಯ 12 ಸಂಖ್ಯೆಗಳನ್ನು ನಮೂದಿಸಬೇಕು. ಕ್ಲಿಯರ್ ಮಾಡಲು ಹಳದಿ ಕಲರ್ ಲೈನ್ ಅನ್ನು ಹಸಿರು ಲೈನಿನ್ ಮದ್ಯ ಭಾಗಕ್ಕೆ ತಂದು ನಿಲ್ಲಿಸಬೇಕು ನಂತರ Captcha ಕ್ಲಿಯರ್ ಆಗುತ್ತೆ. ನಂತರ fetch RC details ಮೇಲೆ ಕ್ಲಿಕ್ ಮಾಡಿ
ಹಂತ 4: ನಂತರ ಪುಟದಲ್ಲಿ, ಗೃಹಲಕ್ಷ್ಮಿ ಯೋಜನೆಗೆ ನೊಂದಣಿಯನ್ನು ಮಾಡಿಕೊಳ್ಳಲು ಸ್ಥಳ, ದಿನಾಂಕ ಹಾಗೂ ಸಮಯವನ್ನು ನೀಡಲಾಗಿರುತ್ತದೆ.
ಈ ಸ್ಥಳ, ದಿನಾಂಕ ಹಾಗೂ ಸಮಯವನ್ನು ನೋಡಿಕೊಂಡು, ನೀವು ಬೇಕಾದ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ತಿಳಿಸಲಾದ ಸರ್ಕಾರಿ ಕೇಂದ್ರಕ್ಕೆ ತೆರಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ನಿಮ್ಮ ಬ್ಯಾಂಕ್ ಅಕೌಂಟ್ ಗೆ ಕೂಡ ಹಣವು ಜಮಾ ಆಗಲಿದೆ. ಹೀಗೆ ನೀವು ಮೇಲಿನ ಹಂತಗಳನ್ನು ಪರಿಶೀಲಿಸಿಕೊಂಡು ಗೃಹಲಕ್ಷ್ಮಿ ಯೋಜನೆ ನೋಂದಣಿಯ ವೇಳಾಪಟ್ಟಿಯ ವಿವರವನ್ನು ತಿಳಿದುಕೊಳ್ಳಬಹುದಾಗಿದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದು ಒಂದು ಮುಖ್ಯವಾದ ಮಾಹಿತಿಯಾಗಿದ್ದು ಇದನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಆದ್ದರಿಂದ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ