ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ರೂ.2000 ನಿಮ್ಮ ಖಾತೆಗೆ ತಲುಪಲು ಏನಿಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿದುಕೊಳ್ಳೋಣ, ಈಗಾಗಲೇ ಹಲವರಿಗೆ ಆಗಸ್ಟ್ ತಿಂಗಳ 2000 ರೂಪಾಯಿ ಬಂದು ತಲುಪಿದೆ. ಮತ್ತು ಎರಡನೇ ಕಂತಿನ ಹಣಕ್ಕೆ ಬಿಡುಗಡೆಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ನಿಮಗೆನಾದ್ರೂ ಇದುವರೆಗೂ ಒಂದನೇ ಕಂತಿನ ಹಣ ಬಂದಿಲ್ಲವಾದರೆ ಈ ಕೆಳಗಿನ ಕ್ರಮಗಳನ್ನು ಅನುಸರಿಸಿ ನಿಮ್ಮ ಹಣವನ್ನು ನೀವು ಪಡೆದುಕೊಳ್ಳಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
ರೇಷನ್ ಕಾರ್ಡ್ ಸಕ್ರಿಯವಾಗಿದ್ದಾಗ ಮಾತ್ರ ನಿಮಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಿಗಲು ಸಾಧ್ಯ. ಆದ್ದರಿಂದ ನೀವು ಈಗಲೇ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ .. ಹೌದು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ 3.18 ಲಕ್ಷ ಜನರಲ್ಲಿ ಬರೋಬ್ಬರಿ 93 ಸಾವಿರ ಅರ್ಜಿಗಳನ್ನು ವಜಾ ಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಲು ಕೆಳಗಿನ ಕ್ರಮಗಳನ್ನು ಅನುಸರಿಸಿ.
ಆಕ್ಟಿವ್ BPL ಕಾರ್ಡ್ ಸಂಖ್ಯೆ ಚೆಕ್ ಮಾಡುವುದು ಹೇಗೆ?
ನಿಮ್ಮ Ration card ಸ್ಥಿತಿಯನ್ನು ಚೆಕ್ ಮಾಡಲು ಕೆಳಗಿನ ಸಲಹೆಗಳನ್ನು ಅನುಸರಿಸಿ:
ಹಂತ 1: ಮೊದಲಿಗೆ,ಕರ್ನಾಟಕ ಸರ್ಕಾರದ “ಮಾಹಿತಿ ಕಣಜ” website ಗೆ ಹೋಗಿ.
https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010
ಹಂತ 2: My Ration card details ವಿವರಗಳ ಪುಟ ತೆರೆದುಕೊಳ್ಳುತ್ತದೆ.
ಹಂತ 3: ನಂತರ ನಿಮ್ಮ ಜಿಲ್ಲೆ ಮತ್ತು ನಿಮ್ಮ ration card ಅಲ್ಲಿ ಇರುವ 12 ಸಂಖ್ಯೆಯ ನಂಬರ್ ಅನ್ನು ನಮೂದಿಸಿ. ನಂತರ ಸಲ್ಲಿಸು/submit ಇದಲ್ಲಿ ಕ್ಲಿಕ್ ಮಾಡಿ. ಅದು ಆದ ಬಳಿಕ my Ration shop details/ನನ್ನ ಪಡಿತರ ಅಂಗಡಿ ವಿವರದ ಪುಟ ತೆರೆಯುತ್ತದೆ. ನಂತರ card status/ಕಾರ್ಡ್ ಸ್ಥಿತಿ ಸಕ್ರಿಯ/active ಎಂದು ತೋರಿಸಿದರೆ ನಮ್ಮ Ration card ಚಾಲ್ತಿ ಇದೆ ಎಂದು ತಿಳಿಯಬಹುದಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿದ ಮಹಿಳೆಯರು 8147500500 ಈ ಸಂಖ್ಯೆಗೆ ತಮ್ಮ ಪಡಿತರ ಚೀಟಿ ಸಂಖ್ಯೆಯನ್ನು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯಿಂದ ಕಳುಹಿಸುವ ಮೂಲಕ ತಮ್ಮ ಅರ್ಜಿ ಸಲ್ಲಿಕೆ ಸ್ಟೇಟಸ್ ಏನಾಗಿದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು. ಒಂದು ವೇಳೆ ಅರ್ಜಿ ಸಲ್ಲಿಕೆ ಬಾಕಿ ಇದ್ದಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು.
8 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಬ್ಯಾಂಕ್ ಖಾತೆ ರದ್ದಾಗಿರುವ ಕಾರಣದಿಂದ ಅಂತಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಹಣ ಬಾರದ ಮಹಿಳೆಯರು ಕೂಡಲೇ ತಮ್ಮ ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಬ್ಯಾಂಕ್ ಗೆ ತೆರಳಿ ಈ ಬಗ್ಗೆ ಪರಿಶೀಲನೆ ಮಾಡಿಸಿ. ಒಂದು ವೇಳೆ ನಿಮ್ಮ ಖಾತೆ ಜಾಲ್ತಿ ಇಲ್ಲವಾದಲ್ಲಿ ಅದನ್ನ ನೀವು ಆಕ್ಟಿವ್ ಮಾಡಿಸಬೇಕು.
ನಿಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ವಿವರದಲ್ಲಿ ಮಾಹಿತಿಗಳು ಹೊಂದಾಣಿಕೆ ಆಗಿರಬೇಕು, ಅಥವಾ ಹೆಸರುಗಳಲ್ಲಿ ಏನಾದರೂ ತಪ್ಪಾಗಿದ್ದರೆ ಬೇಗನೇ ಸರಿಪಡಿಸಿಕೊಳ್ಳಿ.ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ. ಆಧಾರ್ ಲಿಂಕ್ ಮಾತ್ರವಲ್ಲ ಸೀಡಿಂಗ್ ಆಗಿ NPCI ಮ್ಯಾಪಿಂಗ್ ಕೂಡ ಆಗಿರಬೇಕು.
ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Super sir
Sir GRAHALAKSHMI STATUS CHECK LINK SND
[email protected]
Gruhalaksmi