ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಿಹಿಸುದ್ದಿ: ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆ
ರಾಜ್ಯದ ಮಹಿಳೆಯರಿಗೆ ಯುಗಾದಿ ಮತ್ತು ರಂಜಾನ್ ಹಬ್ಬದ (Ugadi and Ramzan Festival) ಸಂದರ್ಭದಲ್ಲಿ ಸಿಹಿಸುದ್ದಿಯೊಂದು ಲಭಿಸಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಯಡಿ ಒಂದು ಕಂತಿನ ಹಣ ಬಿಡುಗಡೆಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Women and Child Welfare Minister Lakshmi Hebbalkar) ಘೋಷಣೆ ಮಾಡಿದ್ದು, ಶೀಘ್ರವೇ 2,000 ರೂ. ಸಹಾಧನದ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಮಹತ್ವವೇನು (Importance) ?:
ಗೃಹಲಕ್ಷ್ಮಿ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಸಮಾಜಿಕ ಭದ್ರತಾ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಪ್ರತಿನಿತ್ಯದ ಜೀವನಕ್ಕೆ ಆರ್ಥಿಕ ಸಹಾಯ (Economic help) ನೀಡುವ ಉದ್ದೇಶದಿಂದ ರೂಪಿಸಲಾಗಿದೆ. ಪ್ರತಿ ತಿಂಗಳು 2,000 ರೂಪಾಯಿ ನೀಡುವ ಮೂಲಕ ಮನೆಮಾತಾಗಿರುವ ಈ ಯೋಜನೆ 1.22 ಕೋಟಿ ಫಲಾನುಭೋಗಿಗಳಿಗೆ ಈಗಾಗಲೇ ನೆರವಾಗಿದ್ದು, ಇದುವರೆಗೆ ಒಟ್ಟು ₹34,000 ಕೋಟಿ ಹಣವನ್ನು ಖಾತೆಗೆ ಜಮೆ ಮಾಡಲಾಗಿದೆ.
ಯುಗಾದಿ ಹಾಗೂ ರಂಜಾನ್ ಹಬ್ಬದ ಸನ್ನಿಧಿಯಲ್ಲಿ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಬಾರಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮುಂಗಡವಾಗಿ ಬಿಡುಗಡೆ (Advance release) ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಈ ಘೋಷಣೆಯನ್ನು ಸಚಿವೆ ಮಾಡಿದ್ದಾರೆ. ಇನ್ನು, ಈ ಮೂಲಕ ಹಬ್ಬದ ಸಮಯದಲ್ಲಿ ಮಹಿಳೆಯರು ತಮ್ಮ ಕುಟುಂಬದೊಂದಿಗೆ ಸುಖ-ಶಾಂತಿಯುತವಾಗಿ ಆಚರಿಸಿಕೊಳ್ಳಬಹುದು” ಎಂದು ತಿಳಿಸಿದ್ದಾರೆ.
“ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಲಾಭ ಎಲ್ಲರಿಗೂ ಸಿಗುತ್ತಿರುವುದಕ್ಕೆ ಹಾಗೂ ನನಗೆ ಗೌರವ ದೊರೆತಿರುವುದಕ್ಕೆ ನಾನು ಹೆಮ್ಮೆಪಡುತ್ತೇನೆ. ಮಹಿಳಾ ಸಬಲೀಕರಣ ಮತ್ತು ಕುಟುಂಬದ ಆರ್ಥಿಕ ಸ್ಥಿರತೆಗಾಗಿ (For women empowerment and family financial stability) ನಾವು ಈ ಯೋಜನೆಯನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪ ಹೊಂದಿದ್ದೇವೆ” ಎಂದು ಸಚಿವೆ ಹೇಳಿದರು.
ಈ ಆದೇಶದಿಂದ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಹಬ್ಬದ ಸಂದರ್ಭದಲ್ಲಿ ಆರ್ಥಿಕ ನೆರವು ದೊರೆಯಲಿದ್ದು, ಜನತೆಯಲ್ಲಿ ಸಂತಸ ಮೂಡಿರುವುದಂತೂ ನಿಜ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.