ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಎಂಟ್ರಿ ಕೊಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನ ರಾಜ್ಯದ 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಅಬ್ಬರದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್ 3ರಿಂದ 8ರ ವರೆಗೆ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಇಂದು (ಜೂನ್ 6) ಕೂಡ ಮಳೆರಾಯ ಆರ್ಭಟ ನಡೆಸಲಿದ್ದಾನೆ
ಬೆಂಗಳೂರಿನ (Bengaluru) ಕೆಲವು ಕಡೆ ಮೋಡ ಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇಂದು ಗುರುವಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೆೇರ, ಕೊಪ್ಪಳ, ರಾಯಚೂರು ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಆದೇಶ ಹೊರಡಿಸಿದೆ. ಇನ್ನೂ ಗುಡುಗು ಮಿಂಚು , ಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.