ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಗಾರು ಮಳೆ ಪ್ರಾರಂಭದಲ್ಲಿ ಭಾರಿ ಸದ್ದು ಮಾಡುತ್ತಿದೆ, ಕಳೆದ ವರ್ಷ ಬರಗಾಲದಿಂದ ನಷ್ಟ ಅನುಭವಿಸಿದ್ದ ರೈತರು ಈ ಬಾರಿ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಹವಾಮಾನ ವರದಿ
ರಾಜ್ಯದಲ್ಲಿ ಜೂನ್ 10ರವರೆಗೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಇಂದಿನಿಂದಲೇ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಮೊದಲ ದಿನ ದಕ್ಷಿಣ ಕನ್ನಡ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಯಾದಗಿರಿ ಜಿಲ್ಲೆ ಸೇರಿದಂತೆ ಈ ಮೇಲಿನ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಜತೆಗೆ 30 ರಿಂದ 40 ಕಿ.ಮೀ. ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಜೂನ್ 8ರಿಂದ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದೆರಡು ಕಡೆ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳು ಒಳನಾಡಿನಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಿಂದ ಕಡಿಮೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ನೈಋತ್ಯ ಮಾನ್ಸೂನ್:
ಮುಂದಿನ ದಿನಗಳಲ್ಲಿ ಕೇರಳ ಮತ್ತು ಮಾಹೆ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ, ಜೂನ್ 9 ರವರೆಗೆ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.