ರಾಜ್ಯದಲ್ಲಿ ಫೆಂಗಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮುಂದಿನ ಒಂದು ವಾರ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಪೆಂಗಲ್ ಚಂಡಮಾರುತ ಜನ್ಮ ತಾಳಿದ್ದು ಸುತ್ತ ಮುತ್ತಲಿನ ಎಲ್ಲಾ ರಾಜ್ಯಗಳ ಮೇಲೆ ಬಾರಿ ಪರಿಣಾಮ ಬೀರುತ್ತಿದೆ. ಹಾಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಬೀಳುವುದು ಕನ್ಫರ್ಮ್ ಆಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುಂದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ & ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಕೊಡಲಾಗಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೂ ಕೂಡ ಮಳೆಯ ಮುನ್ಸೂಚನೆ ಇರಲಿದೆ. ಈಗಾಗಲೇ ಹವಾಮಾನ ಇಲಾಖೆ ಕೊಟ್ಟಿರುವ ಹವಾಮಾನ ಮುನ್ಸೂಚನೆ ಪ್ರಕಾರ, ಮುಂದಿನ ಎರಡು ದಿನಗಳ ಅವಧಿಯಲ್ಲಿ ಕನಿಷ್ಠ ತಾಪಮಾನ 20 -21 ಡಿಗ್ರಿ ಸೆಲ್ಶಿಯಸ್ ಮತ್ತು ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿರಲಿದೆ. ಚಾಮರಾಜನಗರ, ಮಂಡ್ಯ, ಮೈಸೂರಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ನಾಳೆ ಬೆಂಗಳೂರಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಇನ್ನೂ ಮೂರು ದಿನಗಳ ಕಾಲ ಇದೇ ರೀತಿ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿಯೂ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ.
ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.