ರಾಜ್ಯದಲ್ಲಿ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಆರ್ಭಟಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ ಮತ್ತು ನಗರ ಪ್ರದೇಶಗಳಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜುಗಳು ರಜೆ ಇರಲಿವೆ ಎಂಬುದನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ ಹವಾಮಾನ ವರದಿ
ರಾಜ್ಯಾದ್ಯಂತ ಹಲವು ಕಡೆ ದಾರಾಕಾರ ಮಳೆ ಸುರಿಯುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ಜೊತೆಗೆ ಹಲವು ಕಡೆ ಗುಡ್ಡ ಕುಸಿತ ಸಂಭವಿಸುತ್ತಿದೆ. ಜುಲೈ 12ರವರೆಗೆ ಅತಿ ಹೆಚ್ಚು ಮಳೆಯಾಗಲಿದೆ. ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾದರೆ ಕೆಲವು ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯಲ್ಲೂ ಮಳೆರಾಯ ಅಬ್ಬರಿಸುತ್ತಿದ್ದಾರೆ. ಬೈಂದೂರು, ಕುಂದಾಪುರ ಹಾಗೂ ಭ್ರಹ್ಮಾವರ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 5 , ಅಂದರೆ ಶುಕ್ರವಾರ ಈ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಒಟ್ಟು 5 ಜಿಲ್ಲೆಗಳಲ್ಲಿ ಜುಲೈ 5ರಿಂದ 8ರವರೆಗೆ 4 ದಿನಗಳ ಕಾಲ ಭಾರೀ ಮಳೆ ಆಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ, ಉಡುಪಿ & ಉತ್ತರ ಕನ್ನಡದಲ್ಲಿ ಇದೀಗ ಭಾರಿ ಮಳೆ ಬೀಳುತ್ತಿದೆ. ಹೀಗಾಗಿ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 5ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ. ಹಾಗೇ ಅಂಗನವಾಡಿ ಕೇಂದ್ರಗಳಿಗು ಸೇರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಘೋಷಣೆ ಮಾಡಿ ಕುಂದಾಪುರ ಸಹಾಯಕ ಆಯುಕ್ತರಾದ ರಶ್ಮೀ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಿ, ಕುಂದಾಪುರ ಉಪ ವಿಭಾಗದ ಸಹಾಯಕ ಅಯುಕ್ತೆ ರಶ್ಮಿ ಎಸ್ ಆರ್ ತಿಳಿಸಿದ್ದಾರೆ. ಆದರೆ ಡಿಪೋಮಾ, ಇಂಜಿನಿಯರಿಂಗ್, ಐಟಿಐ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಇರಲ್ಲ ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.