Heavy Rains: ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಎಚ್ಚರಿಕೆ!

rain alertt 3

ರಾಜ್ಯದ ಬಹುತೇಕ ಶಿಲೆಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ರೈತರಲ್ಲಿ ಹರುಷ ತಂದಿದೆ. ಇಂದಿನಿಂದ ಸತತ ಮೂರು ದಿನಗಳ ಕಾಲ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದ್ದು ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಹವಾಮಾನ ವರದಿ

ರಾಜ್ಯದಲ್ಲಿ ಮುಂಗಾರು ಮತ್ತೆ ತೀವ್ರಗೊಂಡಿದೆ. ಭಾನುವಾರ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ಗದಗ, ಕಲಬುರಗಿ ಹೀಗೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ಇದೇ ರೀತಿಯಾಗಿ ಮುಂದಿನಗಳ ಕಾಲ ಭರ್ಜರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಆಗುವ ಗ್ಯಾರಂಟಿ ನೀಡಿದ್ದು ರೆಡ್ ಅಲರ್ಟ್ ಘೋಷಣೆಯಾಗಿದೆ.

ಬಿರುಗಾಳಿ ಸಹಿತ ಮಳೆ ಗ್ಯಾರಂಟಿ!

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗೆಯೇ ಉತ್ತರ ಒಳನಾಡು ಜಿಲ್ಲೆಗಳಾದ ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಶಿವಮೊಗ್ಗ, ಕೊಡಗು ಮುಂತಾದ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯನ್ನ ನೀಡಿದೆ.

40 ಕಿ.ಮೀ. ವೇಗದಲ್ಲಿ ಗಾಳಿ!

ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ವಾತಾವರಣವು ಕರಾವಳಿ ಉದ್ದಕ್ಕೂ ಮೇಲುಗೈ ಸಾಧಿಸಿದ್ದು, ಗಾಳಿಯು 45ರಿಂದ 65 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಇದೇ 11ರವರೆಗೂ ರಾಜ್ಯದ ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. 

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!