ರಾಜ್ಯ ಸರ್ಕಾರಿ ನೌಕಕರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು ಮಾಡಿ ಆದೇಶ..!

IMG 20240810 WA0006

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ (Gazetted Probationers 384 Posts Recruitment Preliminary Examination)ಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ.

ಈಗಾಗಲೇ ಆಗಸ್ಟ್‌ 27ರ (Agust 7th) ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಸೇವಾ ನಿರತ ನೌಕರರು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಿಶೇಷ ಸಾಂಧರ್ಭಿಕ ರಜೆ (special holiday) ಘೋಷಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳು ಇರುವ ಶಾಲಾ/ ಕಾಲೇಜಿಗೂ ರಜೆಯನ್ನು ನೀಡಿ ಸರ್ಕಾರ ಆದೇಶಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪರೀಕ್ಷೆ ವೇಳಾಪಟ್ಟಿ ವಿವರ ಹೀಗಿದೆ (exam time table) :

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ. ಒಟ್ಟು ಎರಡು ಪತ್ರಿಕೆಗಳ ಪರೀಕ್ಷೆಗಳು ಆಗಸ್ಟ್ 27ರ ಒಂದೇ ದಿನ ನಡೆಯಲಿದೆ.
ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1 ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ ಎಂದು ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

ದಿನಾಂಕ 27.08.2024 ರಂದು ವಿಶೇಷ/ ಸಾರ್ವತ್ರಿಕ ರಜೆ ಘೋಷಣೆ :

ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವಿಶೇಷ ಸಾಂದರ್ಭಿಕ ರಜೆಯ ಆದೇಶ ಹೊರಡಿಸಿದ ಪ್ರಯುಕ್ತ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು 2:27.08.20240 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಖಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ 27.08.2024 ರಂದು) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ರಾಜ್ಯ ಸರ್ಕಾರ ಹೊರಡಿಸಿದ ಸಾರ್ವತ್ರಿಕ ರಜೆ ಘೋಷಣೆ ಆದೇಶದಲ್ಲಿ ಏನೇನಿದೆ ?

ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಹಾಗಾಗಿ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು ಯಾವುದೇ ಶೈಕ್ಷಣಿಕ ಪರೀಕ್ಷೆಗಳು ಹಾಗೂ ಇನ್ನಿತರೆ ಪೂರ್ವನಿರ್ಧರಿತ ಕಾರ್ಯಕ್ರಮಗಳು ನಿಗದಿಯಾಗಿದ್ದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು. ಮತ್ತು ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅಡಚಣೆಯಾಗದಿರುವುದನ್ನು ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು/ಆಡಳಿತ ಮಂಡಳಿಯು ಖಾತರಿ ಪಡಿಸಬೇಕಾಗಿದೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಪದವಿಪೂರ್ವ ಇಲಾಖೆ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಉನ್ನತ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಈ ಆದೇಶವನ್ನು ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡುವುದು. ಹಾಗೆಯೇ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸದರಿ ಪರೀಕ್ಷೆಯನ್ನು ಯಾವುದೇ ಅಡಚಣೆ ಉಂಟಾಗದಂತೆ ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!