ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇಂದು ವಿದ್ಯಾರ್ಥಿಗಳಿಗೆ, ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಹಾಗೂ. ಹಲವಾರು ವರ್ಗದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಇಂತಿಷ್ಟು ಪ್ರೋತ್ಸಾಹ ಧನ(Incentive money) ಸಿಗುತ್ತದೆ. ಇಂತಹ ಪ್ರೋತ್ಸಾಹ ಧನ ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿಯನ್ನು ದೂರ ಮಾಡಿ ಅವರ ವ್ಯಾಸಂಗಕ್ಕೆ ಅನುವು ಮಾಡಿ ಕೊಡುತ್ತದೆ. ಹಾಗೆಯೇ ಇದೀಗ 2024 – 25 ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ(Department of Minority Welfare)ಯ ವತಿಯಿಂದ ಸರ್ಕಾರದ ಪ್ರತಿಷ್ಟಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ(Karnataka state) ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ (from minority students) ಆನ್‍ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ (Reputed Institution) ಓದುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ :
2024-25ನೇ ಸಾಲಿನಲ್ಲಿ ಐಐಟಿ, ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಗಳಂತಹ ಮುಂತಾದವು ಸರ್ಕಾರದಿಂದ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾರ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 (Agust 31st) ಕೊನೆಯ ದಿನಾಂಕ (last date) :
ಅರ್ಹ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ, ಭೌದ್ದರು, ಸಿಖ್ಖರು ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (Seva Sindhu Portal) https://sevasindhu.karnataka.gov.in/ Sevasindhu Department Services ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 31, 2024 ರರೊಳಗಾಗಿ ಸಲ್ಲಿಸಬಹುದಾಗಿದೆ.
ಗಮನಿಸಿ (notice) :
ಹೆಚ್ಚಿನ ಮಾಹಿತಿಗಾಗಿ ಮಾಹಿತಿ ಕೇಂದ್ರಗಳ ದೂರವಾಣಿ ಸಂಖ್ಯೆ;- ರಾಯಚೂರು; 9731028420, ದೇವದುರ್ಗ: 9148233616, ಲಿಂಗಸುಗೂರು : 9886447863, ಮಾನವಿ: 887334758 ಹಾಗೂ ಸಿಂಧನೂರು: 8217621732ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.