ಆದಾಯ ತೆರಿಗೆ ಇಲಾಖೆಯಿಂದ ಡೇಟಾ ಸಂಸ್ಕರಣ ಸಹಾಯಕ (Data Processing Assistant)ಹುದ್ದೆಗೆ ನೇಮಕಾತಿ – ಅರ್ಜಿ ಆಹ್ವಾನ
ಭಾರತ ಸರ್ಕಾರದ (Indian government) ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಅಡಿ ಕಾರ್ಯನಿರ್ವಹಿಸುತ್ತಿರುವ ಆದಾಯ ತೆರಿಗೆ ಇಲಾಖೆ ತನ್ನ ವಿವಿಧ ಕಚೇರಿಗಳಿಗೆ ಡೇಟಾ ಸಂಸ್ಕರಣ ಸಹಾಯಕ (Data Processing Assistant) ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ಗುತ್ತಿಗೆ ಆಧಾರದ ಮೇಲೆ ಭರ್ತಿ ಆಗಲಿದ್ದು, ಅರ್ಹತೆಯುಳ್ಳ ಸರ್ಕಾರೀ ನೌಕರರಿಗೆ ಈ ಅವಕಾಶ ಲಭ್ಯವಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
8 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ :
ಆದಾಯ ತೆರಿಗೆ ಇಲಾಖೆಯು (Income Tax Department) 8 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳು ಜನರಲ್ ಸೆಂಟ್ರಲ್ ಸರ್ವಿಸಸ್ ಗ್ರೂಪ್-ಬಿ ಗೆಜೆಟೆಡ್, ನಾನ್-ಮಿನಿಸ್ಟ್ರೀಯಲ್ ಕೇಡರ್‌ನಡಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಹುದ್ದೆಗಳಿಗೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ (State government) ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.
ಉದ್ಯೋಗ ಸ್ಥಳಗಳು (Job places) :
ನವದೆಹಲಿ
ಲಕ್ನೋ
ಕಾನ್ಪುರ
ಚಂಡೀಗಢ
ಕೋಲ್ಕತ್ತಾ
ಹೈದರಾಬಾದ್
ಚೆನ್ನೈ
ವೇತನ ಶ್ರೇಣಿ (Pay Scale) :
₹44,900 ರಿಂದ ₹1,42,400 ರವರೆಗೆ ಮಾಸಿಕ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ (Qualifications) ಏನು?
ಕಂಪ್ಯೂಟರ್ ಅಪ್ಲಿಕೇಶನ್/ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಮಾಡಿದವರು.
ಎಂಟೆಕ್ (M.Tech) ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಮಾಡಿದವರು.
ಬಿಇ/ಬಿಟೆಕ್ (BE/B.Tech) ಕಂಪ್ಯೂಟರ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್. ಟೆಕ್ನಾಲಜಿ ವಿಭಾಗಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದವರು.
ಅರ್ಜಿದಾರನು ಕನಿಷ್ಟ 2 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.
ವಯೋಮಿತಿ: 56 ವರ್ಷಕ್ಕಿಂತ ಕಡಿಮೆ ಇರಬೇಕು.
ಅರ್ಜಿಯ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿಧಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ incometaxindia.gov.in ಭೇಟಿ ನೀಡಿ ಅರ್ಜಿಯ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ (Address) :
Directorate of Income Tax (Systems),
Central Board of Direct Taxes,
Ground Floor, E2, ARA Center,
Jhandewalan Ext., New Delhi- 110055
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last date) : 2025ರ ಫೆಬ್ರವರಿ 5
ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ನೋಟಿಫಿಕೇಶನ್ ಲಿಂಕ್ (Notification Link) ಗಮನಿಸಿ. ಈ ಉದ್ಯೋಗಾವಕಾಶಕ್ಕೆ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.