KPSC Recruitment 2024:  ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅಪ್ಲೈ ಮಾಡಿ

motor vehicle inspector posts

ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 

KPSC Recruitment 2024: 

ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ.ಏಪ್ರಿಲ್ 22, 2024 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

ನೇಮಕಾತಿ ಸಂಕ್ಷಿಪ್ತ ವಿವರ
ಸಂಸ್ಥೆಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​
ಒಟ್ಟು ಹುದ್ದೆ76
ವಿದ್ಯಾರ್ಹತೆಬಿ.ಟೆಕ್
ವೇತನಮಾಸಿಕ ₹ 33,450- 62,600
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 21, 2024
ಒಟ್ಟು ಹುದ್ದೆಗಳು

ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (RPC)- 70
ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್​ (HK)- 6

ವಿದ್ಯಾರ್ಹತೆ

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ SSLC, ಡಿಪ್ಲೊಮಾ, ಆಟೋಮೊಬೈಲ್/ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ :

ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು 33,450 ರೂ. ಯಿಂದ 62,600ರೂ. ವರೆಗೆ ಇರಲಿದೆ.

ವಯೋಮಿತಿ

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಉದ್ಯೋಗದ ಸ್ಥಳ:

ಕರ್ನಾಟಕ

ಅರ್ಜಿ ಶುಲ್ಕ:

SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/04/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 21, 2024

ಪ್ರಮುಖ ಲಿಂಕುಗಳು
  • ಅರ್ಜಿ ಸಲ್ಲಿಸುವ ಲಿಂಕ್ : kpsconline.karnataka.gov.in
  • ದಿನಾಂಕ ವಿಸ್ತರಣೆ ಅಧಿಸೂಚನೆ : Download
  • ಅಧಿಕೃತ ಅಧಿಸೂಚನೆ : Download

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!