ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗಾಗಿ (Technical Manager posts) ಅರ್ಜಿ ಆಹ್ವಾನ ಕರೆಯಲಾಗಿದೆ. ಹೌದು, ಕೃಷಿ ಇಲಾಖೆಯಿಂದ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಆತ್ಮ (ATMA) ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ಭರ್ತಿಯಾಗಲಿದ್ದು, ತಾತ್ಕಾಲಿಕ ನೇಮಕಾತಿಗಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕಂಪ್ಯೂಟರ್ ಜ್ಞಾನ ಹೊಂದಿರುವ ಪದವೀಧರರಿಗೆ ಈ ಒಂದು ಉತ್ತಮ ಅವಕಾಶವಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಹುದ್ದೆಯ ವಿವರ:
ಹುದ್ದೆಯ ಹೆಸರು: ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕ(District Technical Manager)
ಸ್ಥಳ: ಶೃಂಗೇರಿ, ಚಿಕ್ಕಮಗಳೂರು
ನೇಮಕಾತಿ ಪ್ರಕಾರ: ತಾತ್ಕಾಲಿಕ (Temporary)
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 10, 2025
ಅರ್ಹತಾ ಮಾನದಂಡ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಮಾಡಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ (Computer knowledge) ಇದ್ದು, ಕೃಷಿ ಅಥವಾ ಸಂಬಂಧಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸಿ ಫೆಬ್ರವರಿ 10ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಆತ್ಮ ವಿಭಾಗದಲ್ಲಿ (ATMA Division) ಪಡೆಯಬಹುದು. ಡಿ.ಪಿ.ಡಿ ಪ್ರಿಯಾಂಕ (ಮೊ. 88147899207) ಅವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಈ ಹುದ್ದೆ ಕೃಷಿ ತಂತ್ರಜ್ಞಾನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ(Modern technology in Agriculture sector) ತಕ್ಷಣದ ಉದ್ಯೋಗ ಹುಡುಕುತ್ತಿರುವ ಪದವೀಧರರಿಗೆ ಚಿಗುರೊಡೆಯುವ ಅವಕಾಶ. ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿ, ಈ ಹುದ್ದೆಯ ಪ್ರಯೋಜನ ಪಡೆದುಕೊಳ್ಳಬಹುದು.
ಮತ್ತು ಇಂತಹ ಉತ್ತಮವಾದ ಮಾಹಿತಿಯನ್ನು ನೀವು ತಿಳಿದಮೇಲೆ ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.