ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದರೂ ಸಹ ರಾಜ್ಯ ಸರ್ಕಾರ(state governament) ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ (karnataka bandh )ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಏನಿದು ಮಾಹಿತಿ ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ
ಸೆಪ್ಟಂಬರ್ 29ರಂದು ಕರ್ನಾಟಕ ಬಂದು :
ಈ ವಿಷಯದ ಕುರಿತು ಸಭೆ ನಡೆಸಿ ಚರ್ಚಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸೆ.29 ರಂದು ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳು ಕಂಪ್ಲೀಟ್ ಬಂದ್ ಆಗಬೇಕು. ರಾಜ್ಯದಲ್ಲಿ ಏನೇ ಸಮಸ್ಯೆ ಬಂದ್ರೂ ಧರಣಿ ಮಾಡುತ್ತೇವೆ ಕರ್ನಾಟಕ ಬಂದ್ ಗೆ ರಾಜ್ಯದ ಜನರು ಬೆಂಬಲ ಕೊಡಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇಂದಿನ ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇಲ್ಲ. ಅವರು ನಮ್ಮ ಸಲಹೆಗಳನ್ನು ಪಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಬಂದ್ ಆಗಿದೆ ಎಂದು ದೂರಿದರು.
ಬಂದನ್ನು ಕೇವಲ ಬೆಂಗಳೂರಿಗೆ ಸೀಮಿತ ಮಾಡಲಾಗಿದೆ. ಬೆಳಗಾವಿ, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ, ದಕ್ಷಿಣ ಕರ್ನಾಟಕ, ಮಂಗಳೂರು ಪ್ರದೇಶಗಳನ್ನು ಕಾವೇರಿ ಬಂದ್ ನಿಂದ ದೂರಿ ಇರಿಸಿರುವುದು ಸರಿಯಲ್ಲ. ಆ ಹಿನ್ನೆಲೆಯಲ್ಲಿ ಅಖಂಡ ಕರ್ನಾಟಕಕ್ಕೆ ಕರೆ ನೀಡಲಾಗಿದೆ ಎಂದರು.
ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿ ಕನ್ನಡಪರ ಸಂಘಟನೆಗಳು ಬಂದ್ ಬೆಂಬಲ ನೀಡಿವೆ. ದೆಹಲಿವರೆಗೂ ನಮ್ಮ ಹೋರಾಟದ ಬಿಸಿ ಮುಟ್ಟಲಿದೆ ಎಂದರು. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯುವುದನ್ನು ವಿರೋಧಿಸಿ ನಾಳೆ ರಾಜಭವನ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ