ನಮಸ್ಕಾರ ಓದುಗರಿಗೆ, ಇವತ್ತಿನ ನಮ್ಮ ಲೇಖನದಲ್ಲಿ ನಾವು ನಿಮಗೆ ಕರ್ನಾಟಕ ಬ್ಯಾಂಕ್ ಅಧಿಕಾರಿಗಳ [Karnataka Bank officers (ಸ್ಕೇಲ್-I)] ನೇಮಕಾತಿ(requirements) 2023 ರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಬ್ಯಾಂಕ್ ವತಿಯಿಂದ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತು ಅರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನೂ ಸಂಪೂರ್ಣವಾಗಿ ಓದಿ ತಿಳಿಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ಣಾಟಕ ಬ್ಯಾಂಕ್(Karnataka banks) ಭಾರತದಾದ್ಯಂತ ಇರುವ ತನ್ನ ಶಾಖೆಗಳು/ಕಚೇರಿಗಳಲ್ಲಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳ (ಸ್ಕೇಲ್-I) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ.
ಕರ್ನಾಟಕ ಬ್ಯಾಂಕ್ ನೇಮಕಾತಿ 2023: ಅವಲೋಕನ:
ಪರೀಕ್ಷೆಯ ಹೆಸರು : ಕರ್ನಾಟಕ ಬ್ಯಾಂಕ್ ಪರೀಕ್ಷೆ 2023
ವರ್ಗ :ಬ್ಯಾಂಕ್ ಉದ್ಯೋಗ
ಅಪ್ಲಿಕೇಶನ್ ಮೋಡ್ :ಆನ್ಲೈನ್
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ:12 ಆಗಸ್ಟ್ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 26 ಆಗಸ್ಟ್ 2023
ಆಯ್ಕೆ ಪ್ರಕ್ರಿಯೆ : ಆನ್‌ಲೈನ್ ಪರೀಕ್ಷೆ, ಸಂದರ್ಶನ(Intreview)
ಅಧಿಕೃತ ಜಾಲತಾಣ : IBPS
ಕರ್ನಾಟಕ ಬ್ಯಾಂಕ್ ನೇಮಕಾತಿ 2023 ಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆಕಾಂಕ್ಷಿಗಳು ಈ ಕೆಳಗಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು:
ಕರ್ನಾಟಕ ಬ್ಯಾಂಕ್ ನೇಮಕಾತಿ 2023: ಶೈಕ್ಷಣಿಕ ಅರ್ಹತೆ:
ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರು (ಸ್ನಾತಕೋತ್ತರ ಡಿಪ್ಲೊಮಾಗಳನ್ನು ಹೊರತುಪಡಿಸಿ / ಒಂದು ವರ್ಷದ ಕಾರ್ಯನಿರ್ವಾಹಕ-MBA) ಪದವಿ ಹೊಂದಿರಬೇಕು.
ಕೃಷಿ ವಿಜ್ಞಾನದಲ್ಲಿ ಪದವೀಧರರು ಆಗಿರಬೇಕು.
ಕಾನೂನು ಪದವೀಧರರು ಆಗಿರಬೇಕು.
ಮಾರ್ಕೆಟಿಂಗ್/ಫೈನಾನ್ಸ್‌ನಲ್ಲಿ MBA (ಆದ್ಯತೆ) ಪಡೆದಿರಬೇಕು.
ಕೆಳಗಿನ ಅಭ್ಯರ್ಥಿಗಳು 1 ಆಗಸ್ಟ್ 2023 ರಂತೆ ವಿಶೇಷ ವರ್ಗದಲ್ಲಿ ಸ್ನಾತಕೋತ್ತರ ಅಥವಾ ಪದವೀಧರರಾಗಿರಬೇಕು
ವಿಶೇಷ ಸೂಚನೆ:
ತಮ್ಮ PG ಫಲಿತಾಂಶಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳು ಈ ಪೋಸ್ಟ್‌ಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
ಸಂಬಳ ಎಷ್ಟು?:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 69,000/- ವರೆಗೂ ಸಂಬಳವನ್ನು ನೀಡಲಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಕರ್ನಾಟಕ ಬ್ಯಾಂಕ್ ನೇಮಕಾತಿ 2023 ರ ವಯಸ್ಸಿನ ಮಿತಿ ಈ ಕೆಳಗಿನಂತೆ ಇರುತ್ತದೆ:
1 ಆಗಸ್ಟ್ 2023 ರಂತೆ ಗರಿಷ್ಠ ವಯಸ್ಸು-28 ವರ್ಷಗಳು ( ಅಭ್ಯರ್ಥಿಗಳು 2 ಆಗಸ್ಟ್ 1995 ರಂದು ಅಥವಾ ನಂತರ ಜನಿಸಿರಬೇಕು ).
SC ಮತ್ತು ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗುತ್ತದೆ
ಕರ್ನಾಟಕ ಬ್ಯಾಂಕ್ ನೇಮಕಾತಿ 2023 ರ ಅರ್ಜಿ ಶುಲ್ಕ :
ಸಾಮಾನ್ಯ- 800ರೂ+ GST
SC/ST- 700ರೂ.+GST
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅಧಿಕೃತ ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಹಂತ 1: ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್‌ನ ಅಧಿಕೃತ ಸೈಟ್‌ಗೆ https://ibpsonline.ibps.in/kboaug23/ ಭೇಟಿ ನೀಡಬೇಕು. ಇಲ್ಲಿ ಕ್ಲಿಕ್ ಮಾಡಿ
ಹಂತ 2: ಅಧಿಕೃತ ಪುಟದಲ್ಲಿ ‘Apply Online’ ಬಟನ್ ಕ್ಲಿಕ್ ಮಾಡಿ.
ಹಂತ 3: ಮುಂದಿನ ಪ್ರಕ್ರಿಯೆಯಲ್ಲಿ ‘ಹೊಸ ನೋಂದಣಿ’ ಮೇಲೆ ಕ್ಲಿಕ್ ಮಾಡಿ.
ಹಂತ 4: ಆನ್‌ಲೈನ್‌ನಲ್ಲಿ Apply Online ಲಿಂಕ್ ಅನ್ನು ಕ್ಲಿಕ್ ಮಾಡಿ.
ಹಂತ 5: ಅರ್ಜಿ ನಮೂನೆಯಲ್ಲಿ ನೀಡಲಾದ ಎಲ್ಲಾ ವಿವರಗಳನ್ನು ಬಹಳ ಎಚ್ಚರಿಕೆಯಿಂದ ಭರ್ತಿ ಮಾಡಬೇಕು.
ಹಂತ 6: ಎಲ್ಲಾ ಡಾಕ್ಯುಮೆಂಟ್‌ಗಳನ್ನು upload ಮಾಡಬೇಕು.
ಹಂತ 7: ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ.
ಹಂತ 8: ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ಲೇಖನವನ್ನು ಎಲ್ಲರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ