Karnataka Budget 2025 Highlights: ಶಿಕ್ಷಣ, ಧರ್ಮ, ಕೈಗಾರಿಕೆ ಮತ್ತು ಜಲಸಾರಿಗೆಗೆ ದೊಡ್ಡ ಘೋಷಣೆಗಳು

WhatsApp Image 2025 03 07 at 12.49.56 PM

WhatsApp Group Telegram Group

ಕರ್ನಾಟಕ ಬಜೆಟ್ 2025: ಶಿಕ್ಷಣ, ಧರ್ಮ, ಕೈಗಾರಿಕೆ ಮತ್ತು ಜಲಸಾರಿಗೆಗೆ ದೊಡ್ಡ ಘೋಷಣೆಗಳು

ಬೆಂಗಳೂರು, ಮಾರ್ಚ್ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡುವ ಹಲವಾರು ಘೋಷಣೆಗಳನ್ನು ಮಾಡಲಾಗಿದೆ. ಶಿಕ್ಷಣ, ಧರ್ಮ, ಕೈಗಾರಿಕೆ, ಜಲಸಾರಿಗೆ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಶಾಲಾ ಮಕ್ಕಳ ಪೋಷಣೆಗೆ ಹೊಸ ಯೋಜನೆ

ಶಾಲಾ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆಯನ್ನು ವಾರದಲ್ಲಿ 6 ದಿನಗಳಿಗೆ ವಿಸ್ತರಿಸಲಾಗುವುದು. ಈ ಯೋಜನೆಗೆ 1,500 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದನ್ನು ಅಜೀಂ ಪ್ರೇಮ್ಜಿ ಫೌಂಡೇಶನ್‌ನ ಸಹಯೋಗದಲ್ಲಿ ಕಾರ್ಯಗತಗೊಳಿಸಲಾಗುವುದು.

ಧಾರ್ಮಿಕ ದತ್ತಿ ಇಲಾಖೆಗೆ ಹೊಸ ಯೋಜನೆಗಳು

ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರ ತಸ್ತೀಕ್ ಮೊತ್ತವನ್ನು 60 ಸಾವಿರ ರೂಪಾಯಿಯಿಂದ 72 ಸಾವಿರ ರೂಪಾಯಿಗೆ ಏರಿಸಲಾಗುವುದು. ಕರ್ನಾಟಕದ ದೇವಾಲಯಗಳಲ್ಲಿ ವಸತಿ ಕೋಶಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ, ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ರೂಪಾಯಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯೋಜನೆಗೆ 5 ಸಾವಿರ ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೊಸ ಹೆಸರು

ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು.

ಸಾಮಾಜಿಕ ಮೀಸಲಾತಿ ಮತ್ತು ಕೈಗಾರಿಕೆ

ಪ್ರವರ್ಗ 1, 2ಎ ಮತ್ತು 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಲಾಗುವುದು. ಕೈಗಾರಿಕಾ ಪ್ರದೇಶದ ಭೂಮಿ ಹಂಚಿಕೆಯಲ್ಲಿ ಈ ಸಮುದಾಯಗಳಿಗೆ 20% ಮೀಸಲಾತಿ ಘೋಷಿಸಲಾಗಿದೆ.

ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆಗಳು

ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ. ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರೂಸ್, ವಾಟರ್ ಮೆಟ್ರೋ ಮತ್ತು ಕೋಸ್ಟಲ್ ಬರ್ತ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮಂಕಿ ಗ್ರಾಮದಲ್ಲಿ ಹೊಸ ಬಂದರು ನಿರ್ಮಾಣ ಮಾಡಲಾಗುವುದು. ಮಂಗಳೂರಿನಲ್ಲಿ ಜಲಸಾರಿಗೆ ಸಂಗ್ರಹಾಲಯ ಮತ್ತು ಅನುಭವನ ಕೇಂದ್ರವನ್ನು ತೆರೆಯಲಾಗುವುದು.

ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೆ 55 ಕೋಟಿ ರೂಪಾಯಿ

ರೇಷ್ಮೆ ಕ್ಷೇತ್ರದ ಅಭಿವೃದ್ಧಿಗೆ 55 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು. ಮಧ್ಯಮವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುವುದು. ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂಪಾಯಿ ಮೀಸಲಿಡಲಾಗುವುದು. ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಅಭಿವೃದ್ಧಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಮೀಸಲಿಡಲಾಗುವುದು. 30 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಅತ್ಯಂತ ಹಿಂದುಳಿದ 46 ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ಡಿ.ದೇವರಾಜ ಅರಸು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ವಸತಿ ನಿಲಯಗಳು ಮತ್ತು ತರಬೇತಿ ಕೇಂದ್ರಗಳು

ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂಪಾಯಿ ಮೀಸಲಿಡಲಾಗುವುದು. ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ ಮತ್ತು ದುರಸ್ತಿಗೆ 25 ಕೋಟಿ ರೂಪಾಯಿ ನೀಡಲಾಗುವುದು. ಬೆಂಗಳೂರಿನಲ್ಲಿ IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಎರಡು ಸುಸಜ್ಜಿತ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು.

ಈ ಘೋಷಣೆಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಇದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!