ವಿವಿಧ ವೃತ್ತಿಪರ ಕೋರ್ಸ್ ಪ್ರವೇಶಾತಿ ಸಂಬಂಧ ಮೂರೂವರೆ ಲಕ್ಷ ವಿದ್ಯಾರ್ಥಿಗಳು ಬರೆದಿದ್ದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಬರೋಬ್ಬರಿ 50 ಪಠ್ಯೇತರ ಪ್ರಶ್ನೆಗಳನ್ನು ಕೇಳಿರುವುದು ತಜ್ಞರ ಸಮಿತಿ ವರದಿಯಲ್ಲಿ ಸಾಬೀತಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.
ಇದರ ಜೊತೆಗೆ ಎರಡು ತಪ್ಪು ಪ್ರಶ್ನೆಗಳಿದ್ದು ಅವುಗಳಿಗೆ ಕೃಪಾಂಕ ನೀಡಲಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೀ ಉತ್ತರಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಪಠ್ಯೇತರ ಪ್ರಶ್ನೆಗಳ ಪಟ್ಟಿಯನ್ನು ನೀಡಲಿದೆ. ಈ ಪಟ್ಟಿಯಲ್ಲಿರುವ ಪ್ರಶ್ನೆಗಳನ್ನು ಹೊರತುಪಡಿಸಿ ಮೌಲ್ಯಮಾಪನ ಮಾಡಲಾಗುತ್ತದೆ. ಇದು ವಿದ್ಯಾರ್ಥಿಗಳ ಹಿತ ರಕ್ಷಣೆಯ ಜೊತೆಗೆ ಸಮಾನ ಅವಕಾಶವನ್ನು ಸೃಷ್ಟಿಸಲಿದೆ ಎಂದು ಹೇಳಿದ್ದಾರೆ. ಜೊತೆಗೆ ಭವಿಷ್ಯದಲ್ಲಿ ಇಂತಹ ಎಡವಟ್ಟು ಘಟಿಸಬಾರದು ಎಂಬ ಕಾರಣಕ್ಕೆ ಸಿಇಟಿ ಪ್ರಶ್ನೆ ಪತ್ರಿಕೆಗಳ ರಚನೆಗೆ ಪ್ರಮಾಣೀಕೃತ ಕಾರ್ಯಾಚರಣಾ ವಿಧಾನವೊಂದನ್ನು ರೂಪಿಸುವಂತೆ ಕೆಇಎಗೆ ನಿರ್ದೇಶನ ನೀಡಲಾಗಿದೆ.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿ